1,466 ದಿನಗಳ ಬಳಿಕ ನಂ.1 ಸ್ಥಾನದಿಂದ ಕೆಳಗಿಳಿದ ಪ್ಯಾಟ್ ಕಮಿನ್ಸ್.

ಭಾರತದ ವಿರುದ್ಧ ಸತತವಾಗಿ ಎರಡು ಟೆಸ್ಟ್ ಪಂದ್ಯಗಳನ್ನು ಸೋತು ಕಂಗೆಟ್ಟಿರುವ ಆಸ್ಟ್ರೇಲಿಯಾ ತಂಡಕ್ಕೆ ಆಘಾತದ ಮೇಲೆ ಆಘಾತ ಎದುರಾಗಿತ್ತಿದೆ. ಸತತ 1466 ದಿನಗಳಿಂದ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ನಂಬರ್ 1 ಬೌಲರ್ ಸ್ಥಾನವನ್ನು ಕಳೆದುಕೊಂಡಿದ್ದಾರೆ.40 ವರ್ಷದ ಇಂಗ್ಲೆಂಡ್ ಟೆಸ್ಟ್ ತಂಡದ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಅಗ್ರಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬಳಿಕ ಅವರು ಮೊದಲ ಸ್ಥಾನವನ್ನು ಅಲಂಕರಿಸಿದ್ದಾರೆ.ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನಕ್ಕೇರಿದ್ದು, ಜೇಮ್ಸ್ ಆಂಡರ್ಸನ್‌ಗಿಂದ 2 ಅಂಕಗಳಿಂದ ಹಿಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಮಿಂಚಿದ್ದ ಅಶ್ವಿನ್ ಅಗ್ರಸ್ಥಾನಕ್ಕೆ ಸನಿಹವಾಗಿದ್ದಾರೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಅವರು ಅತ್ಯುತ್ತಮ ಪ್ರದರ್ಶನ ನೀಡಿದರೆ, ಅವರು ಟೆಸ್ಟ್‌ ಮಾದರಿಯಲ್ಲಿ ನಂಬರ್ 1 ಬೌಲರ್ ಆಗುವ ಅವಕಾಶ ಇದೆ. ಪ್ಯಾಟ್ ಕಮಿನ್ಸ್ ಸದ್ಯ 3ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ, ಮಾರಕ ವೇಗಿ ಪ್ಯಾಟ್ ಕಮಿನ್ಸ್ 1466 ದಿನಗಳ ಕಾಲ ನಂಬರ್ 1 ಸ್ಥಾನವನ್ನು ಅಲಂಕರಿಸಿದ ಬಳಿಕ, ಮೂರನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಭಾರತದ ವಿರುದ್ಧದ ಸರಣಿಗೆ ಮುನ್ನ ಅವರು ಮೊದನೇ ಸ್ಥಾನದಲ್ಲಿದ್ದರು. ಆದರೆ, ಭಾರತದ ವಿರುದ್ಧದ ಉತ್ತಮ ಪ್ರದರ್ಶನ ನೀಡದ ಬಳಿಕ ಮೊದಲನೇ ಸ್ಥಾನವನ್ನು ಕಳೆದುಕೊಂಡಿದ್ದಾರೆ. 852 ಅಂಕಗಳೊಂದಿಗೆ ಅವರು ಸದ್ಯ ಮೂರನೇ ಸ್ಥಾನದಲ್ಲಿದ್ದಾರೆ.ಇಂಗ್ಲೆಂಡ್‌ನ ಅನುಭವಿ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ 866 ಅಂಕಗಳೊಂದಿಗೆ ನಂಬರ್ 1 ಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಪಡೆದು ಮಿಂಚಿದ್ದರು. ಅವರ ಈ ಪ್ರದರ್ಶನದ ಮೂಲಕ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಎರಡು ಪಂದ್ಯಗಳಿಂದ 14 ವಿಕೆಟ್ ಪಡೆದಿರುವ ರವಿಚಂದ್ರನ್ ಅಶ್ವಿನ್ ಸದ್ಯ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. 864 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮುಗಿಯುವ ವೇಳೆಗೆ ಮೊದಲನೇ ಸ್ಥಾನಕ್ಕೇರಲು ಅವಕಾಶ ಇದೆ.ಮತ್ತೊಬ್ಬ ಭಾರತದ ಸ್ಪಿನ್ನರ್ ರವೀಂದ್ರ ಜಡೇಜಾ ಕೂಡ 9ನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಡೇಜಾ 17 ವಿಕೆಟ್ ಪಡೆದುಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿಮಗೆ ಆಗಾಗ್ಗೆ ಆಕಳಿಕೆ ಬರುತ್ತದೆಯೇ ? ನಿರ್ಲಕ್ಷಿಸಬೇಡಿ.

Wed Feb 22 , 2023
ನಿದ್ರೆಯ ಕೊರತೆ ಮತ್ತು ಆಯಾಸದಿಂದ ಆಕಳಿಕೆ ಉಂಟಾಗುತ್ತದೆ. ಆದರೆ ಆಕಳಿಕೆ ಹೆಚ್ಚಿದ್ದರೆ, ಅದು ಅನೇಕ ರೋಗಗಳ ಸಂಕೇತವಾಗಿದೆ. ಒಬ್ಬ ವ್ಯಕ್ತಿಯು ಸಾಮಾನ್ಯವಾಗಿ ದಿನಕ್ಕೆ 5 ರಿಂದ 19 ಬಾರಿ ಆಕಳಿಸಬಹುದು.ಆದರೆ ಅದನ್ನು ಮೀರಿ ಆಕಳಿಕೆ ಎಂದರೆ ನೀವು ಯಾವುದೋ ಕಾಯಿಲೆಯಿಂದ ಬಳಲುತ್ತಿದ್ದೀರಿ ಎಂದರ್ಥ. ಹೌದು, ಅದನ್ನು ನಿರ್ಲಕ್ಷಿಸುವುದು ಅಪಾಯವನ್ನು ಹೆಚ್ಚಿಸುತ್ತದೆ. ಈ ಬಗ್ಗೆ ವೈದ್ಯಕೀಯ ಸಂಶೋಧನೆ ಏನು ಹೇಳುತ್ತಿದೆ ಎಂದು ತಿಳಿದರೆ ನೀವು ಆಘಾತಕ್ಕೊಳಗಾಗುತ್ತೀರಿ.ಹಗಲು ಮತ್ತು ರಾತ್ರಿ ಸೇರಿದಂತೆ 24 […]

Advertisement

Wordpress Social Share Plugin powered by Ultimatelysocial