ಆರೋಗ್ಯ ಚೆನ್ನಾಗಿದ್ದರೆ ಸಾಧನೆ ಸಾಧ್ಯ:

ಮೈಸೂರು: ಮನುಷ್ಯನ ಆರೋಗ್ಯ ದೈಹಿಕವಾಗಿ, ಮಾನಸಿಕವಾಗಿ ಸದೃಢವಾಗಿದ್ದರೆ, ಗುರಿಯಿಟ್ಟುಕೊಂಡು ಸಾಧನೆ ಮಾಡಿದರೆ ಯಾವುದೇ ಕೆಲಸವನ್ನು ಯಶಸ್ವಿಯಾಗಿ ಸಾಧಿಸಬಹುದು ಎಂದು ಡಾ. ಲೋಹಿತ್ ತಿಳಿಸಿದರು.

ವಿಜಯನಗರ 2ನೇ ಹಂತದಲ್ಲಿರುವ ಸಿದ್ದರಾಮಯ್ಯ ಬಾಲಕಿಯರ ವಸತಿ ನಿಲಯದಲ್ಲಿ ಹುಣಸೂರಿನ ಕಾವೇರಿ ಆಸ್ಪತ್ರೆಯ ವತಿಯಿಂದ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಹಿಂದುಳಿದ ವರ್ಗದ ಹೆಣ್ಣು ಮಕ್ಕಳು ಮೈಸೂರಿಗೆ ಬಂದು ವಿದ್ಯಾಭ್ಯಾಸ ಮಾಡುತ್ತಿರುವುದೇ ಸಂತೋಷದ ವಿಷಯವಾಗಿದೆ.

ಸಿದ್ದರಾಮಯ್ಯನವರು ಹಿಂದುಳಿದ ವರ್ಗದ ಹೆಣ್ಣುಮಕ್ಕಳು ಸಹ ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಈ ವಿದ್ಯಾರ್ಥಿನಿಲಯವನ್ನು ಕಟ್ಟಿಸಿದ್ದಾರೆ. ಅವರ ಕನಸು ನನಸಾಗಬೇಕಾದರೆ ನೀವೆಲ್ಲರೂ ಚೆನ್ನಾಗಿ ಓದಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿ ಆರ್ಥಿಕವಾಗಿ ಸಬಲರಾಗುವುದರ ಜೊತೆಗೆ ಸಮಾಜದಲ್ಲಿ ಬದಲಾವಣೆ ತರಬೇಕು. ಆ ಬದಲಾವಣೆ ನಿಮ್ಮಿಂದಲೇ ಪ್ರಾರಂಭವಾಗಿ ಈ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದ ಅವರು, ಮನುಷ್ಯನ ಬದಲಾದಜೀವನ ಶೈಲಿಯಿಂದ ಆರೋಗ್ಯದಲ್ಲಿ ಏರುಪೇರಾಗಿ ಕಾಯಿಲೆಗಳು ಹೆಚ್ಚಾಗುತ್ತಿರುವುದು ವಿಷಾದಕರ ಸಂಗತಿ ಆದ್ದರಿಂದ ಪ್ರತಿಯೊಬ್ಬರು ಕಾಯಿಲೆಗಳು ಬಂದ ಮೇಲೆ ಆಸ್ಪತ್ರೆಗಳಿಗೆ ಬಂದು ಲಕ್ಷಾಂತರ ರೂ. ಖರ್ಚು ಮಾಡುವ ಬದಲು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿಕೊಂಡು ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಕಾಗಿನೆಲೆ ವಿದ್ಯಾಸಂಸ್ಥೆಯಗೌರವ ಕಾರ್ಯದರ್ಶಿ ಪುಟ್ಟಬಸವೇಗೌಡ, ನಿಲಯಪಾಲಕಿ ಸೌಮ್ಯ, ಮಂಜುನಾಥ್, ಗಣೇಶ್, ಶುಶ್ರೂಷಕಿ ಅಸ್ಪೋನ್ಸ್ ಡಯಾನ ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹುಷಾರ್‌...! ಅತೀ ಹೆಚ್ಚು ʼಅನ್ನ ಸೇವನೆʼಯೂ ಆರೋಗ್ಯಕ್ಕೆ ಹಾನಿಕರ,

Tue Feb 28 , 2023
ನಮ್ಮ ದೇಶದಲ್ಲಿ ಅತಿ ಹೆಚ್ಚು ಸೇವಿಸುವ ಆಹಾರವೆಂದರೆ ಅಕ್ಕಿ. ಅನೇಕ ಜನರು ಅನ್ನವಿಲ್ಲದೆ ಊಟದ ಬಗ್ಗೆ ಯೋಚಿಸುವುದಿಲ್ಲ. ನಿತ್ಯವೂ ಅನ್ನ ತಿನ್ನುವ ಬಗ್ಗೆ ವಿವಿಧ ಅಭಿಪ್ರಾಯಗಳು ಕೇಳಿಬರುತ್ತಿವೆ. ಅಕ್ಕಿಯ ನಿಯಮಿತ ಸೇವನೆಯು ಒಳ್ಳೆಯದು ಮತ್ತು ಕೆಟ್ಟದು ಎಂದು ಹೇಳಲಾಗುತ್ತದೆ. ಅನ್ನವನ್ನು ತಿನ್ನುವುದರಿಂದ ತೂಕ ಹೆಚ್ಚಾಗುವುದು ಮತ್ತು ಮಧುಮೇಹಕ್ಕೆ ಕಾರಣವಾಗುತ್ತದೆ ಎನ್ನಲಾಗುತ್ತದೆ. ಬಿಳಿ ಅನ್ನವನ್ನು ಸ್ವತಃ ತಿನ್ನುವುದು ಅತ್ಯಂತ ಅಪಾಯಕಾರಿ ಏಕೆಂದರೆ ಅದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಕಡಿಮೆ. ಅಕ್ಕಿ ಹೆಚ್ಚಾಗಿ […]

Advertisement

Wordpress Social Share Plugin powered by Ultimatelysocial