ಸಿನಿಪ್ರಿಯರಿಗೆ ಪ್ರಿಯವಾಗಲಿದೆ “ಸಿನಿಬಜಾರ್”!

ಇದು ನಿರ್ಮಾಪಕರ ಸ್ನೇಹಿಯೂ ಹೌದು.

ಇದು ಆಧುನಿಕ ಯುಗ. ಹೊಸ ತಂತ್ರಜ್ಞಾನ ದಿನದಿನಕ್ಕೂ ಅಭಿವೃದ್ಧಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿಶೇಷ ಸೌಲಭ್ಯವುಳ್ಳ ” ಸಿನಿಬಜಾರ್ ” ಆಪ್ ಬಿಡುಗಡೆಯಾಗಿದೆ.

ಹಲವು ವರ್ಷಗಳಿಂದ ಆನ್ ಲೈನ್ ನಲ್ಲಿ ಪರಿಣಿತಿ ಪಡೆದಿರುವ ಆನ್ ಲೈನ್ ಭಾಸ್ಕರ್ ಎಂದೇ ಖ್ಯಾತರಾಗಿರುವ ಭಾಸ್ಕರ್ ವೆಂಕಟೇಶ್ ಹಾಗು ನಿರ್ಮಾಪಕ, ಕರ್ನಾಟಕ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಅವರ ಸಾರಥ್ಯದಲ್ಲಿ ಈ ಆಪ್ ಹೊರಬಂದಿದೆ.

ಈ ಆಪ್ ನಲ್ಲಿ ಸಿನಿಮಾ ವೀಕ್ಷಣೆಗೆ ತಗಲುವ ವೆಚ್ಚ ಕೇವಲ ಇಪ್ಪತ್ತೈದರಿಂದ ಮೂವತ್ತು ರೂಪಾಯಿ. 24 ಗಂಟೆಗಳ ಅವಧಿಯಿರುತ್ತದೆ. ಅಷ್ಟರೊಳಗೆ ಎಷ್ಟು ಸಿನಿಮಾ ಬೇಕಾದರೂ ನೋಡಬಹುದು. ಈ ಸಿನಿಮಾವನ್ನು ಎಷ್ಟು ಜನ ವೀಕ್ಷಿಸಿದ್ದಾರೆ ಎಂಬ ಮಾಹಿತಿ ಕೂಡ ನಿರ್ಮಾಪಕರಿಗೆ ತಿಳಿಯಲಿದೆ. ಪೈರಸಿ ತಡೆಗಟ್ಟುವ ಕಡೆಗೂ ಗಮನ ಹರಸಲಾಗಿದೆ. ಧ್ವನಿಯಿಂದ ಹಿಡಿದು, ಸ್ಕ್ರೀನಿಂಗ್ ‌ತನಕ ಎಲ್ಲಾ ಉತ್ತಮ ಗುಣಮಟ್ಟದಾಗಿರುತ್ತದೆ.‌ ಈಗಾಗಲೇ ಬಿಡುಗಡೆಯಾಗಿರುವ ಚಿತ್ರಗಳು ಈಗಾಗಲೇ ಈ ಆಪ್ ನಲ್ಲಿದೆ. ಈ ಆಪ್ ಮೂಲಕವೇ ಚಿತ್ರವನ್ನು ಬಿಡುಗಡೆ ಮಾಡಲು ಇಚ್ಛಿಸುವವರು ನಮ್ಮ ತಂಡವನ್ನು ಸಂಪರ್ಕಿಸಬಹುದು‌. ಒಟ್ಟಿನಲ್ಲಿ ಕನ್ನಡ ನಿರ್ಮಾಪಕರಿಗೆ ಒಳಿತಾಗಲಿ ಎಂಬುದೇ ನಮ್ಮ ಆಶಯ ಎಂದರು ಭಾಸ್ಕರ್ ವೆಂಕಟೇಶ್.

ಭಾಸ್ಕರ್ ನನ್ನನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿ ನೀಡಿದಾಗ ಇದರಿಂದ ನಿರ್ಮಾಪಕರಿಗೆ ಹಾಗೂ ನೋಡುಗರಿಗೆ ಅನುಕೂಲವಿದೆ ಎಂದು ತಿಳಿಯಿತು. ನಾನು ಭಾಸ್ಕರ್ ಅವರ ಜೊತೆ ಈ ಪ್ರಯತ್ನಕ್ಕೆ ಕೈ ಜೋಡಿಸಿದ್ದೇನೆ ಎಂದರು ಉಮೇಶ್ ಬಣಕಾರ್.

ಆಪ್ ಹೇಗೆ ಬಳಸಿಕೊಳ್ಳುವುದು? ಎಂಬುದರ ಮಾಹಿತಿಯನ್ನು ಆಪ್ ಡೆವಲಪರ್ ಸುಧಾಕರ್ ನೀಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್,ಉಪಾಧ್ಯಕ್ಷ ನಾಗಣ್ಣ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್,ನಟ ಶ್ರೀನಗರ ಕಿಟ್ಟಿ, ನಿರ್ದೇಶಕರಾದ ರವಿಶ್ರೀವತ್ಸ, ಗಿರಿರಾಜ್ “ಸಿನಿಬಜಾರ್” ಓಟಿಟಿಯನ್ನು ಬಿಡುಗಡೆ ಮಾಡಿ , ತಂಡಕ್ಕೆ ತಮ್ಮ ಪ್ರೋತ್ಸಾಹಭರಿತ ಮಾತುಗಳ ಮೂಲಕ ಶುಭ ಕೋರಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾತ್ರೋರಾತ್ರಿ ಹಾಸನ ತಾಲ್ಲೂಕು ಕಚೇರಿ ಕಟ್ಟಡ ನೆಲಸಮ!

Mon May 2 , 2022
ಹಾಸನದಲ್ಲಿ ಇಂದು‌ ಮತ್ತೊಂದು ಹೋರಾಟಕ್ಕೆ ಕಾರಣವಾಗುತ್ತಾ ಕಟ್ಟಡ ನೆಲಸಮ ವಿಚಾರ ಹೊಸ ಕಟ್ಟಡ ನಿರ್ಮಾಣಕ್ಕೆ ಕಟ್ಟಡ ನೆಲಸಮ‌ ತಾಲ್ಲೂಕು ಕಚೇರಿ ಕಟ್ಟಡ ಒಡೆಯೋದನ್ನ ವಿರೋಧಿಸಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಟ್ಟಡ ಸುಸಜ್ಜಿತವಾಗಿದೆ, ಖಾಲಿ ನಿವೇಶನದಲ್ಲಿ ಹೊಸ ಕಟ್ಟಡ ಕಟ್ಟಿ ಎಂದು ಆಗ್ರಹಿಸಿದ್ದ ರೇವಣ್ಣ ರೇವಣ್ಣ ವಿರೋಧವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಪ್ರೀತಂಗೌಡ ಹಗಲಿನಲ್ಲಿ ಕಟ್ಟಡ ಉರುಳಿಸಿದ್ರೆ ಜೆಡಿಎಸ್ ಕಾರ್ಯಕರ್ತರು ಅಡ್ಡಿಪಡಿಸಬಹುದು ಎಂದು ರಾತ್ರಿ ಕಾರ್ಯಾಚರಣೆ ತಾಲ್ಲೂಕು ಕಚೇರಿ ಕಟ್ಟಡ ಸಂಪೂರ್ಣ […]

Advertisement

Wordpress Social Share Plugin powered by Ultimatelysocial