ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0′ ತಂತ್ರಾಂಶ ಜಾರಿ.

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಫೆಬ್ರವರಿ 2 ರಿಂದ ಮೈಸೂರು,ಮಂಗಳೂರು, ಬೆಳಗಾವಿ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಹೊಸ ಕಾವೇರಿ 2.0 ತಂತ್ರಾಂಶದಿಂದ ಕಚೇರಿಗಳಿಗೆ ಅಲೆದಾಟ ತಪ್ಪಲಿದೆ. ಸರ್ವರ್ ಸಮಸ್ಯೆಯೂ ಬಗೆಹರಿಯಲಿದೆ. ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆಗೆ ಬ್ರೇಕ್ ಬೀಳಲಿದೆ ಎಂದು ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದ ಕಾಲೇಜು ವಾರ್ಡನ್​!

Sat Jan 28 , 2023
ಉಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್​ ನಾಯಿಯನ್ನೇ ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ. ರಾಜೇಶ್ ವಿಕೃತಿ ಮೆರೆದ ವಾರ್ಡನ್. ಹುಡುಗಿ ಜೊತೆ ಆಡಿದ್ದಕ್ಕೆ ನಾಯಿಯನ್ನೇ ಕೊಂದಿದ್ದಾನೆ. ಕೃತ್ಯದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಪಿ ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ […]

Advertisement

Wordpress Social Share Plugin powered by Ultimatelysocial