‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.

ಬೆಂಗಳೂರು: ಎಸ್ ಎಸ್ ಎಲ್ ಸಿ (SSLC) ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಈ ಬಾರಿ ತಾಲೂಕು ಮಟ್ಟದಲ್ಲಿ ಸಿದ್ದಪಡಿಸಲಾಗುತ್ತಿದೆ.

ಹೌದು, ಇದುವರೆಗೆ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಪ್ರಶ್ನೆ ಪತ್ರಿಕೆ ತಯಾರಿಯ ಜವಾಬ್ದಾರಿಯನ್ನು 2022-23ರ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ.

ಪೂರ್ವ ಸಿದ್ಧತಾ ಪರೀಕ್ಷೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲೇ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಅನುಮೋದನೆ ನೀಡಿದ್ದಾರೆ. ಮಾದರಿ ಪ್ರಶ್ನೆ ಪತ್ರಿಕೆಯನ್ನು ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್ಗೆ ಅಪ್ಲೋಡ್ ಮಾಡಲಾಗುವುದು. ಆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಅನುಸರಿಸಿ ಬಿಇಒಗಳು ತಮ್ಮ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಂತರ ಮುದ್ರಣ ಮಾಡಿ ತಾಲೂಕು ಹಂತದ ಸ್ಟ್ಯಾಂಗ್ ರೂಂನಲ್ಲಿ ಸುರಕ್ಷಿತವಾಗಿಡಬೇಕು . ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪರೀಕ್ಷೆ ನಡೆಸಬೇಕು, ಆಯಾ ವಿಷಯದ ಪರೀಕ್ಷಾ ದಿನದಂದು ಅವುಗಳನ್ನು ಬಿಗಿ ಭದ್ರತೆಯಲ್ಲಿ ಶಾಲೆಗಳಿಗೆ ವಿತರಣೆ ಮಾಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡಲು ರೆಡಿಯಾದ ಸಂಸದೆ ಸುಮಲತಾ ಅಂಬರೀಷ್​ಗೆ ಬಿಗ್ ಶಾಕ್!

Thu Feb 2 , 2023
ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡಲು ಸಜ್ಜಾದ ಸಂಸದೆ ಸುಮಲತಾ ಅಂಬರೀಷ್​ ಅವರಿಗೆ ಇದೀಗ ಬಿಗ್​ ಶಾಕ್ ಒಂದು​ ಎದುರಾಗಿದೆ. ವಿಧಾನಸಭಾ ಚುನಾವಣೆಯ ಕಣಕ್ಕಿಳಿಯಲು ಸುಮಲತಾ ಅವರು ತಯಾರಿ ನಡೆಸುತ್ತಿದ್ದು, ತಾವು ಕಣ್ಣಿಟ್ಟಿರುವ ಮೂರು ಕ್ಷೇತ್ರಗಳ ಪೈಕಿ ಎರಡರಲ್ಲಿ ಸುಮಲತಾರಿಗೆ ಸಂಕಷ್ಟ ಎದುರಾಗಲಿದೆ. ಮಂಡ್ಯ ಹಾಗೂ ಮೇಲುಕೋಟೆಯಲ್ಲಿ ಸುಮಲತಾ ಸ್ಪರ್ಧೆಗೆ ರೈತ ಸಂಘ ಭಾರೀ ವಿರೋಧ ವ್ಯಕ್ತಪಡಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವಿಗೆ […]

Advertisement

Wordpress Social Share Plugin powered by Ultimatelysocial