ಗರ್ಭಿಣಿ ವಿದ್ಯಾರ್ಥಿನಿ ಪ್ರಕರಣದಲ್ಲಿ ಮಹತ್ವದ ತೀರ್ಪು

ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳಲು ತನಗೆ ಅನುಮತಿ ನೀಡಬೇಕೆಂದು ಕೋರಿ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ತೀರ್ಪು ಪ್ರಕಟವಾಗಿದೆ.

ಪ್ರಕರಣದ ವಿವರ: 20 ವರ್ಷದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ತನಗೆ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡುವಂತೆ ಕೋರಿದ್ದಳು.

ಆದರೆ ಈಗಾಗಲೇ 29 ವಾರಗಳು ತುಂಬಿರುವ ಕಾರಣ ತಾಯಿ ಮತ್ತು ಭ್ರೂಣದ ಹಿತದೃಷ್ಟಿಯಿಂದ ಗರ್ಭಪಾತಕ್ಕೆ ನಿರಾಕರಿಸಲಾಗಿದೆ.

ಆದರೆ ಮಗು ಹೆತ್ತ ಬಳಿಕ ದತ್ತು ನೀಡಬಹುದು ಎಂದು ನ್ಯಾಯಪೀಠ ತಿಳಿಸಿದ್ದು, ಸಂತ್ರಸ್ತೆ ವಿದ್ಯಾರ್ಥಿನಿಯಿಂದ ಯಾವುದೇ ಶುಲ್ಕ ಪಡೆಯದೆ ಎಲ್ಲ ಅಗತ್ಯ ಸೌಲಭ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಹಾಗೂ ಆಕೆಯ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕರಿಗೆ ಸೂಚಿಸಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಂದೇ ಕುಟುಂಬ ಏಳು ಮಂದಿ ಆತ್ಮಹತ್ಯೆಗೆ ಯತ್ನ, ಮಹಿಳೆ ಸಾವು.

Fri Feb 3 , 2023
ರಾಮನಗರ, ಫೆಬ್ರವರಿ 3: ಸಾಲ ಬಾಧೆಗೆ ಸಿಲುಕಿದ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಯತ್ನಿಸಿದ್ದು , ಒಬ್ಬರು ಮೃತಪಟ್ಟಿರುವ ದಾರುಣ ಘಟನೆ ರಾಮನಗರ ತಾಲೂಕಿನ ದೊಡ್ಡಮಣ್ಣು ಗುಡ್ಡೆ ಗ್ರಾಮದಲ್ಲಿ ನಡೆದಿದೆ. ದೊಡ್ಡಮಣ್ಣು ಗುಡ್ಡೆ ಗ್ರಾಮದಲ್ಲಿ ಕಳೆದ ಒಂದು ವರ್ಷಗಳಿಂದ ವಾಸವಾಗಿದ್ದ ರಾಜು (40) ಎನ್ನುವವರ ಕುಟುಂಬದ ಸದಸ್ಯರು ಸಾಲಗಾರರ ಕಾಟಕ್ಕೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿದ ರಾಜು ಪತ್ನಿ ಮಂಗಳಮ್ಮ (28) ಸಾವನ್ನಪ್ಪಿದ್ದಾರೆ. ಇನ್ನುಳಿದ […]

Advertisement

Wordpress Social Share Plugin powered by Ultimatelysocial