ಅವಿಶ್ವಾಸ ನಿರ್ಣಯದಲ್ಲಿ ಸೋಲು ಕಂಡು ಪ್ರಧಾನಿ ಪಟ್ಟ ಕಳೆದುಕೊಂಡಿರುವ ಪಾಕಿಸ್ತಾನದ ಮಾಜಿ ಪ್ರಧಾನಿಇಮ್ರಾನ್ ಖಾನ್

 

ಇಸ್ಲಾಮಾಬಾದ್, ಏಪ್ರಿಲ್ 19; ಅವಿಶ್ವಾಸ ನಿರ್ಣಯದಲ್ಲಿ ಸೋಲು ಕಂಡು ಪ್ರಧಾನಿ ಪಟ್ಟ ಕಳೆದುಕೊಂಡಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಹೇಳಿಕೆಯಲ್ಲಿ ಯೂ-ಟರ್ನ್ ತೆಗೆದುಕೊಂಡಿದ್ದಾರೆ.

“ನಾನು ಯಾವುದೇ ದೇಶದ ವಿರುದ್ಧವಾಗಿಲ್ಲ. ಭಾರತ, ಯುರೋಪ್ ಮತ್ತು ಅಮೆರಿಕದ ವಿರೋಧಿಯಲ್ಲ”ಎಂದು ಇಮ್ರಾನ್ ಖಾನ್ ಯೂ-ಟರ್ನ್ ತೆಗೆದುಕೊಂಡಿದ್ದಾರೆ. ಇಮ್ರಾನ್ ಖಾನ್ ಈ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಪಾಕಿಸ್ತಾನದ ಪ್ರಧಾನಿ ಪಟ್ಟ ಕಳೆದುಕೊಂಡಿದ್ದ ಇಮ್ರಾನ್ ಖಾನ್ ವಿದೇಶಗಳ ವಿರುದ್ಧ ಆರೋಪ ಮಾಡಿದ್ದರು. ಅದರಲ್ಲೂ ಪ್ರಧಾನಿ ಹುದ್ದೆಯಿಂದ ತಮ್ಮನ್ನು ಪದಚ್ಯುತಿಗೊಳಿಸುವಲ್ಲಿ ಅಮೆರಿಕ ಪಾತ್ರವಿದೆ ಎಂದು ಆರೋಪಿಸಿದ್ದರು.

ಪಾಕಿಸ್ತಾನದ ರಾಜಕೀಯ ಬೆಳವಣಿಗೆಗಳ ಬಳಿಕ ಇಮ್ರಾನ್ ಖಾನ್ ಅಭಿಮಾನಿಗಳು ಸಹ ಅಮೆರಿಕ ಷಡ್ಯಂತ್ರವಿದೆ ಎಂದು ಆರೋಪಿಸಿದ್ದರು. ಇಮ್ರಾನ್ ಖಾನ್ ಹೇಳಿಕೆಯನ್ನು ಅಮೆರಿಕ ಖಂಡಿಸಿತ್ತು.

ಪಾಕಿಸ್ತಾನದ ನೂತನ ಪ್ರಧಾನಿ ಶಾಹಬಾಜ್ ಷರೀಫ್‌ ಅಭಿನಂದಿಸಿದ್ದ ಅಮೆರಿಕ ಇಮ್ರಾನ್ ಖಾನ್ ಹೇಳಿಕೆ ಖಂಡಿಸಿತ್ತು. ಹೊಸ ಸರ್ಕಾರದ ಜೊತೆ ಕೆಲಸ ಮಾಡಲು ಉತ್ಸುಕರಾಗಿದ್ದೇವೆ ಎಂದು ಅಮೆರಿಕ ವಕ್ತಾರ ನೆಡ್ ಪ್ರೈಸ್ ಹೇಳಿದ್ದರು.

ಇಮ್ರಾನ್ ಖಾನ್ ಪದಚ್ಯುತಿಯಲ್ಲಿ ಅಮೆರಿಕ ಕೈವಾಡವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ನೆಡ್ ಪ್ರೈಸ್, ಈ ವಿಚಾರದಲ್ಲಿ ನಾವು ಸ್ಪಷ್ಟ ಸಂದೇಶ ನೀಡಲು ಬಯಸುತ್ತೇವೆ. ಇಂತಹ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ವಿರೋಧ ಪಕ್ಷಗಳು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದವು. ನಿರ್ಣಯದಲ್ಲಿ ಸೋಲು ಕಂಡು ಇಮ್ರಾನ್ ಖಾನ್ ಪ್ರಧಾನಿ ಪಟ್ಟ ಕಳೆದುಕೊಂಡಿದ್ದಾರೆ.

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶಾಹಬಾಜ್ ಷರೀಫ್‌ ಆಯ್ಕೆಯಾಗಿದ್ದಾರೆ. ಸೋಮವಾರ ನೂತನ ಸಚಿವ ಸಂಪುಟದ ಪ್ರಮಾಣ ವಚನ ನಡೆಯಬೇಕಿತ್ತು. ಆದರೆ ಸಮಾರಂಭ ಕೊನೆ ಕ್ಷಣದಲ್ಲಿ ಮುಂದೂಡಲ್ಟಟ್ಟಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತುಳು ಚಿತ್ರರಂಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.!

Tue Apr 19 , 2022
ತುಳು ಚಿತ್ರರಂಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಇದೇ ಮೊದಲ‌ ಬಾರಿಗೆ ಪ್ರಪಂಚದ 11 ರಾಷ್ಟ್ರದಲ್ಲಿ ತುಳು ಚಿತ್ರ ಬಿಡುಗಡೆಯಾಗುತ್ತಿದೆ. ತುಳು‌ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ತುಳು ಸಿನಿಮಾ ವಿಶ್ವದ ಹನ್ನೊಂದು ರಾಷ್ಟ್ರದಲ್ಲಿ ಪ್ರೀಮಿಯರ್ ಷೋ ನಡೆಯಲಿದೆ. ವೈಭವ್ ಪ್ಲಿಕ್ಸ್ ನ ಮ್ಯಾಂಗೋ ಪಿಕಲ್ ಬ್ಯಾನರ್ ಅಡಿಯಲ್ಲಿ ತಯಾರಾದ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ತುಳು ಸಿನಿಮಾ ಮೇ 13,14,15 ರಂದು ಹಲವು ದೇಶಗಳಲ್ಲಿ ಪ್ರೀಮಿಯರ್ ಪ್ರದರ್ಶನ ಕಾಣಲಿದೆ. ಈ […]

Advertisement

Wordpress Social Share Plugin powered by Ultimatelysocial