ಇಂಧನ ದರ ಇಳಿಕೆ ಬೆನ್ನಲ್ಲೇ ಭಾರತವನ್ನು ಹೊಗಳಿದ ಇಮ್ರಾನ್ ಖಾನ್!

ಇಸ್ಲಾಮಾಬಾದ್: ಭಾರತದ ಸ್ವತಂತ್ರ ವಿದೇಶಾಂಗ ನೀತಿಗಳ ಬಗ್ಗೆ ಇತ್ತೀಚೆಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇದೀಗ ಮತ್ತೆ ನೆರೆ ದೇಶವನ್ನು ಶ್ಲಾಘಿಸಿದ್ದಾರೆ.

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತ ವರದಿಯೊಂದರ ತುಣುಕನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದಾರೆ.

‘ಕ್ವಾಡ್ ಸದಸ್ಯ ರಾಷ್ಟ್ರವಾದರೂ ಅಮೆರಿಕದ ಒತ್ತಡಕ್ಕೆ ಮಣಿಯದ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಮೂಲಕ ಜನರಿಗೆ ನೆರವಾಗಿದೆ. ಸ್ವತಂತ್ರ ವಿದೇಶಾಂಗ ನೀತಿಯ ಮೂಲಕ ಇಂಥದ್ದೇ ಸಾಧನೆ ಮಾಡಬೇಕೆಂದು ನಮ್ಮ ಸರ್ಕಾರ ಉದ್ದೇಶಿಸಿತ್ತು’ ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ನಮ್ಮ ಸರ್ಕಾರಕ್ಕೆ ಪಾಕಿಸ್ತಾನದ ಹಿತಾಸಕ್ತಿಯೇ ಮುಖ್ಯವಾಗಿತ್ತು. ಆದರೆ ದುರದೃಷ್ಟವಶಾತ್, ಸ್ಥಳೀಯ ಮೀರ್ ಜಾಫರ್ ಮತ್ತು ಮೀರ್ ಸಾದಿಕ್ ಬಾಹ್ಯ ಒತ್ತಡದಿಂದ ಸರ್ಕಾರವನ್ನು ಬದಲಾಯಿಸುವ ಷಡ್ಯಂತ್ರ ಮಾಡಿದರು. ಈಗ ಅವರು ದೇಶದ ಆರ್ಥಿಕತೆಯನ್ನು ವಿನಾಶದ ಪ್ರಪಾತಕ್ಕೆ ದೂಡುತ್ತಿದ್ದಾರೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಿಂದ ನಿರ್ಮಲಾ ಸೀತಾರಾಮನ್ ಸ್ಪರ್ಧೆ ಇಲ್ಲ:

Sun May 22 , 2022
  ನಿಗೂಢತೆ ಕಾಯ್ದುಕೊಳ್ಳುವಲ್ಲಿ ಎತ್ತಿದ ಕೈಯಾಗಿರುವ ಬಿಜೆಪಿಯ ವರಿಷ್ಠರು ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಮತ್ತು ಜೂನ್ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ತುರ್ತಾಗಿ ದೆಹಲಿಗೆ ವರಿಷ್ಠರು ಕರೆಸಿಕೊಂಡಿದ್ದರು. ಆದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಜೈಪುರದ ಪೂರ್ವ ನಿಗದಿತ ಕಾರ್ಯಕ್ರಮಕ್ಕೆ […]

Advertisement

Wordpress Social Share Plugin powered by Ultimatelysocial