ಹೆದ್ದಾರಿಯ ಉದ್ಘಾಟನೆ ದಿನಾಂಕ ನಿಗದಿ, ಪ್ರಧಾನಿ ಮೋದಿಯಿಂದ ಉದ್ಘಾಟನೆ

ಮೈಸೂರು, ಫೆಬ್ರವರಿ, 26: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಉದ್ಘಾಟನೆ ದಿನಾಂಕ ನಿಗದಿಯಾಗಿದೆ. ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ವೇ ಮಾರ್ಚ್‌ 11ರಂದು ಉದ್ಘಾಟನೆ ಆಗಲಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.ನಗರದ ಜಲದರ್ಶಿನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಅದೇ ದಿನ ಮೈಸೂರು- ಕುಶಾಲನಗರ ಹೆದ್ದಾರಿಗೂ ಭೂಮಿಪೂಜೆ ಆಗಲಿದೆ. ಮಂಡ್ಯ ಜಿಲ್ಲೆಯವರು ನಮ್ಮ ಜನಪ್ರತಿನಿಧಿಗಳನ್ನು ಗೆಲ್ಲಿಸಿಲ್ಲ. ಆದರೂ ನಾವೇನೂ ತಾರತಮ್ಯ ಮಾಡಿಲ್ಲ. ಮಂಡ್ಯಕ್ಕೂ ಪೂರಕವಾದ ಅಭಿವೃದ್ಧಿ ಮಾಡುತ್ತಿದ್ದೇವೆ. ಹಾಗಾಗಿ ಮಂಡ್ಯ ಜನರ ಗಮನ ಸೆಳೆಯಲು ಸಕ್ಕರೆ ನಗರಿಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಕಾವೇರಿ ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಹೆಸರಿಸಲು ಎಲ್ಲರ ಸಹಕಾರ ಕೇಳುತ್ತೇನೆ, ಎಂದರು.ಪ್ರಧಾನಿ ಮೋದಿ ನನ್ನ ದೇವರುನಾನು 2029ರವರೆಗೆ ಮಾತ್ರ ರಾಜಕೀಯದಲ್ಲಿ ಇರುವ ಯೋಚನೆ ಮಾಡುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ಕೈ ಕೆಳಗೆ ಕೆಲಸ ಮಾಡಲು ನನಗೆ ಇಷ್ಟ. ಮೋದಿಯವರು ನನ್ನ ಪಾಲಿನ ದೇವರು. 15 ವರ್ಷದಲ್ಲಿ ಒಬ್ಬ ಸಂಸದನಾಗಿ ಎಷ್ಟು ಕೆಲಸ ಮಾಡಬಹುದು ಅದನ್ನು ಮಾಡುತ್ತೇನೆ. ನಾನು ದೀರ್ಘಕಾಲದ ರಾಜಕೀಯದ ಬಗ್ಗೆ ಯೋಚನೆ ಮಾಡಿಲ್ಲ. ಮುಂದೆ ರಾಜಕಾರಣದಲ್ಲಿ ಇರಬೇಕಾ? ಬೇಡವಾ? ಎಂದು ಯೋಚನೆ ಮಾಡುತ್ತೇನೆ ಎಂದರು.ಬಿಎಸ್‌ವೈ ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆಬಿ.ಎಸ್‌. ಯಡಿಯೂರಪ್ಪನವರು ಚುನಾವಣಾ ರಾಜಕೀಯ ನಿವೃತ್ತಿ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಸಕ್ರಿಯ ರಾಜಕಾರಣದಲ್ಲಿ ಯಡಿಯೂರಪ್ಪನವರು ಇರುತ್ತಾರೆ. ಸಿದ್ದರಾಮಯ್ಯ ಹಾಗೂ ಉಳಿದವರ ರಾಜಕಾರಣವನ್ನೆಲ್ಲಾ ಮುಗಿಸುವವರೆಗೂ ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ. ಅವರು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೆ ಎಂದು ಹೇಳಿದರು.ಬಿಜೆಪಿ ಕಾರ್ಯಕರ್ತರು ಮೈಮರೆತರೆ ಸಿದ್ದರಾಮಯ್ಯ ನೇತೃತ್ವದಲ್ಲಿ ತಾಲಿಬಾನ್ ಸರ್ಕಾರ ಬರುತ್ತದೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದರೆ ಕಪಾಲಿಬೆಟ್ಟ ತೆಗೆದು ಏಸುಬೆಟ್ಟ ಮಾಡುತ್ತಾರೆ ಎಂದು ಕುಟುಕಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಪುಂಡಾಟ.

Sun Feb 26 , 2023
  ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಪುಂಡಾಟ ಚಲಿಸುತಿದ್ದ ಒಂದೇ ಭಾರತ್ ಎಕ್ಸ್ ಪ್ರೆಸ್ ಟ್ರೈನಿಗೆ ಗೆ ಕಲ್ಲು ಕಲ್ಲು ಎಸೆದ ರಭಸಕ್ಕೆ ರೈಲಿನ ಕಿಟಕಿ ಗಾಜು ಡ್ಯಾಮೇಜ್ ನಿನ್ನೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಘಟನೆ ಆದ ಕೂಡಲೇ ಕಂಟ್ರೋಲ್ ರೂಮ್ ಗೆ ಈ ಬಗ್ಗೆ ಮಾಹಿತಿ ಮೈಸೂರಿಂದ ಚೆನ್ನೈಗೆ ತೆರಳುತ್ತಿದ್ದ ವೇಳೆ ನಡೆದ ಘಟನೆ ಕಂಟೋನ್ಮೆಂಟ್ ಹಾಗೂ ಕೆ.ಆರ್.ಪುರಂ ನಿಲ್ಧಾಣ ಮಧ್ಯ ಕೃತ್ಯ ರೈಲ್ವೇ ಪೊಲೀಸರಿಂದ ಆರೋಪಿಗಳ […]

Advertisement

Wordpress Social Share Plugin powered by Ultimatelysocial