ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಗಿಸಿರುವ ಟೀಮ್ ಇಂಡಿಯಾ ̤

ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಗಿಸಿರುವ ಟೀಮ್ ಇಂಡಿಯಾ ಹರಿಣಗಳ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಹೀನಾಯವಾಗಿ ಸೋಲುವುದರ ಮೂಲಕ ಮುಖಭಂಗಕ್ಕೆ ಒಳಗಾಗಿತ್ತು. ಹೀಗೆ ಹರಿಣಗಳ ನೆಲದಲ್ಲಿನ ಹೀನಾಯ ಸೋಲಿನಿಂದ ಕಮ್ ಬ್ಯಾಕ್ ಮಾಡಬೇಕೆಂದರೆ ಇದೀಗ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಫೆಬ್ರವರಿ 6ರಂದು ನಡೆಯಲಿರುವ ಚೊಚ್ಚಲ ಏಕದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕಾಗಿದೆ.ಹೌದು, ಟೀಮ್ ಇಂಡಿಯಾ ತನ್ನ ಕಳೆದ ಏಕದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎಲ್ಲಾ 3 ಪಂದ್ಯಗಳನ್ನು ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾಗಿತ್ತು. ಈ ಹೀನಾಯ ಸೋಲಿನಿಂದ ಮರಳಿ ಯಶಸ್ಸಿನ ಹಾದಿಗೆ ಬರಬೇಕೆಂದರೆ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಈ ಪಂದ್ಯದಲ್ಲಿ ಜಯ ಸಾಧಿಸಬೇಕಿದೆ ಹಾಗೂ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ 1000 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಪೂರೈಸಲಿದೆ. ಈ ಮೂಲಕ 1000 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ ವಿಶ್ವದ ಮೊದಲ ಕ್ರಿಕೆಟ್ ತಂಡ ಎಂಬ ದಾಖಲೆಯನ್ನು ಕೂಡ ಟೀಮ್ ಇಂಡಿಯಾ ಬರೆಯಲಿದೆ. ಹೀಗೆ ಈ ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಟೀಮ್ ಇಂಡಿಯಾ ಈ ದಾಖಲೆಯನ್ನು ಮತ್ತಷ್ಟು ವಿಶೇಷವನ್ನಾಗಿ ಮಾಡಬೇಕಿದೆ. ಆದರೆ ತಂಡದ ಪ್ರಮುಖ ಆಟಗಾರರಾದ ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ನವದೀಪ್ ಸೈನಿ ಮತ್ತು ಶ್ರೇಯಸ್ ಅಯ್ಯರ್ ಕೊರೊನಾ ಸೋಂಕಿಗೆ ಒಳಗಾಗಿರುವ ಕಾರಣ ಹಿನ್ನಡೆಯುಂಟಾಗಿದೆ. ಅಷ್ಟೇ ಅಲ್ಲದೆ ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ ಸರಣಿಗೆ ಅಲಭ್ಯರಾಗಿರುವುದು ಹಾಗೂ ಕೆಎಲ್ ರಾಹುಲ್ ಪ್ರಥಮ ಏಕದಿನ ಪಂದ್ಯಕ್ಕೆ ಅಲಭ್ಯರಾಗಿರುವುದು ಕೂಡ ಹಿನ್ನಡೆಯನ್ನುಂಟು ಮಾಡಿದೆ. ಹೀಗೆ ಪ್ರಮುಖ ಆಟಗಾರರಿಲ್ಲದೇ ಕಣಕ್ಕಿಳಿಯಲಿರುವ ಈ ಕೆಳಕಂಡ ಟೀಮ್ ಇಂಡಿಯಾ ಉತ್ತಮ ಪ್ರದರ್ಶನವನ್ನು ನೀಡಿ ಜಯ ಸಾಧಿಸಲೇಬೇಕಾದ ಅನಿವಾರ್ಯತೆ ಇದೆ.ಆರಂಭಿಕ ಆಟಗಾರರುದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅಲಭ್ಯರಾಗಿದ್ದ ರೋಹಿತ್ ಶರ್ಮಾ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಈ ಸರಣಿಗೆ ಮರಳಿರುವುದು ತಂಡಕ್ಕೆ ಬಲ ತಂದಂತಾಗಿದೆ. ಈ ಮೂಲಕ ರೋಹಿತ್ ಶರ್ಮಾ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದು ವಿಂಡೀಸ್ ವಿರುದ್ಧದ ಈ ಪಂದ್ಯಕ್ಕೆ ಕೆಎಲ್ ರಾಹುಲ್ ಮತ್ತು ಶಿಖರ್ ಧವನ್ ಅಲಭ್ಯರಾಗಿರುವ ಕಾರಣ ರೋಹಿತ್ ಶರ್ಮಾ ಜತೆ ಮಯಾಂಕ್ ಅಗರ್ವಾಲ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ತಂಡದ ಕೆಲ ಪ್ರಮುಖ ಆಟಗಾರರು ಕೊರೊನಾ ಸೋಂಕಿಗೆ ಒಳಗಾದ ನಂತರ ಟೀಮ್ ಇಂಡಿಯಾ ಆಯ್ಕೆಗಾರರು ಮಯಾಂಕ್ ಅಗರ್ವಾಲ್ ಅವರನ್ನು ಭಾರತ ಏಕದಿನ ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟ್ ಬೀಸಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಿದ್ದ ಶ್ರೇಯಸ್ ಅಯ್ಯರ್ ಕೊರೊನಾ ಸೋಂಕಿಗೆ ಒಳಗಾಗಿರುವ ಕಾರಣ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ, ರಿಷಭ್ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ.ತಂಡದ ಪ್ರಮುಖರು ಅಲಭ್ಯರಾಗಿರುವ ಕಾರಣ ವೆಸ್ಟ್ ಇಂಡೀಸ್ ವಿರುದ್ಧದ ಈ ಏಕದಿನ ಪಂದ್ಯದ ಮೂಲಕ ದೀಪಕ್ ಹೂಡಾ ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್ ಜೀವನವನ್ನು ಆರಂಭಿಸಲು ಅವಕಾಶ ಲಭಿಸುತ್ತಿದೆ. ತಂಡದ ಪ್ರಮುಖ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಅವಕಾಶವನ್ನು ಪಡೆದುಕೊಳ್ಳಲಿರುವ ದೀಪಕ್ ಹೂಡಾ ಆಲ್ ರೌಂಡರ್ ಆಟಗಾರನಾಗಿ ಉತ್ತಮ ಪ್ರದರ್ಶನ ನೀಡಲೇಬೇಕಾಗಿದೆ. ಇನ್ನು ಮತ್ತೋರ್ವ ಆಲ್ ರೌಂಡರ್ ಆಟಗಾರನಾಗಿ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಒಳ್ಳೆಯ ಫಾರ್ಮ್ ಕಂಡುಕೊಂಡಿರುವ ವಾಷಿಂಗ್ಟನ್ ಸುಂದರ್ ವಿಂಡೀಸ್ ವಿರುದ್ಧದ ಈ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು ಅಬ್ಬರಿಸಬೇಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇನ್ಮುಂದೆ ಪೊಲೀಸರು ರಸ್ತೆಯಲ್ಲಿ ವಾಹನಗಳಿಗೆ ಅಡ್ಡ ಹಾಕೋಲ್ಲ!

Sat Feb 5 , 2022
ಬೆಂಗಳೂರು: ಇನ್ಮುಂದೆ ಪೊಲೀಸರು ರಸ್ತೆಯಲ್ಲಿ ಸಾರ್ವಜನಿಕರ ವಾಹನಗಳಿಗೆ ಅಡ್ಡ ಹಾಕೋಲ್ಲ! ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಚಾಲಕ ಮತ್ತು ಸವಾರರಿಂದ ದಂಡ ವಸೂಲಿ ಮಾಡಲು ಸಂಚಾರ ಪೊಲೀಸರು ರಸ್ತೆಗಳ ಬದಲು ಇನ್ಮುಂದೆ ಆರ್​ಟಿಒ ಕಚೇರಿ ಮುಂದೆ ಕಾರ್ಯಾಚರಣೆ ನಡೆಸಲಿದ್ದಾರೆ.ರಸ್ತೆಗಳಲ್ಲಿ ವಾಹನಗಳನ್ನು ತಡೆದು ಹಳೇ ಪ್ರಕರಣಗಳ ಪರಿಶೀಲನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದರಿಂದ ಈ ಹೊಸ ಮಾದರಿ ಅಳವಡಿಕೆಗೆ ಪೊಲೀಸ್​ ಇಲಾಖೆ ತೀರ್ಮಾನಿಸಿದೆ.ಪ್ರತಿ ಆರ್​ಟಿಒ ಕಚೇರಿ ಮುಂದೆ ಎಸ್​ಐ, […]

Advertisement

Wordpress Social Share Plugin powered by Ultimatelysocial