ಭಾರತದಲ್ಲಿ ಮಹಾಮಾರಿ ಕೊರೋನಾ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಒಂದು ಲಕ್ಷಕ್ಕಿಂತ ಕಡಿಮೆ ಕೇಸ್ ದಾಖಲು,

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,99,054 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 895 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,22,72,014ಕ್ಕೆ ಏರಿಕೆಯಾಗಿದೆ.

ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,02,874ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,99,054 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,06,60,202ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 11,56,363 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,15,61,587 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,69,63,80,755ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇವರು ಶಿಕ್ಷಕನಾ ಇಲ್ಲ ಕಾಮುಕನಾ ಒಂದಲ್ಲ, ಎರಡಲ್ಲ, ಮೂವರು ಹೆಂಡ್ತೀರ ಗಂಡ! ಇಬ್ಬರಿಗೆ ಕೈ ಕೊಟ್ಟು 3ನೇ ಹೆಂಡ್ತಿ ಜತೆ ಸಂಸಾರ. ಕೊನೆಗೂ ಆಯ್ತು ಶಾಸ್ತಿ

Mon Feb 7 , 2022
ಯಾದಗಿರಿ: ಇಲ್ಲೊಬ್ಬ ಶಿಕ್ಷಕ ಸುಳ್ಳು ಹೇಳಿ ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂವರನ್ನು ಮದ್ವೆ ಆಗಿದ್ದಾನೆ. ಈ ವಿಚಾರ ಪರಸ್ಪರ ಪತ್ನಿಯರಿಗೂ ಗೊತ್ತಾಗದಂತೆ ಹಲವು ವರ್ಷ ಸಂಸಾರ ನಡೆಸಿದ ಇದೀಗ ಸಿಕ್ಕಿಬಿದ್ದಿದ್ದಾನೆ. ಆ ಭೂಪನ ಹೆಸರು ಮೋಹನರೆಡ್ಡಿ ಪಾಟೀಲ್. ಯಾದಗಿರಿ ತಾಲೂಕಿನ ನಿಲನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿದ್ದ. ಮೂರು ಮದ್ವೆಯಾದ ವಿಚಾರ ತಿಳಿಯುತ್ತಿದ್ದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಮೋಹನರೆಡ್ಡಿ ಪಾಟೀಲ್ 1988ರಲ್ಲಿ ಮದುವೆ ಆಗಿದ್ದ. 1992ರಲ್ಲಿ ಎರಡನೇ ಮದುವೆ ಆಗಿದ್ದ. […]

Advertisement

Wordpress Social Share Plugin powered by Ultimatelysocial