ಇಂದು 313 ರೈಲುಗಳನ್ನು ರದ್ದುಗೊಳಿಸಿದ ಭಾರತೀಯ ರೈಲ್ವೆ.

ಭಾರತೀಯ ರೈಲ್ವೆಯು ಸುಮಾರು 313 ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೂಲಸೌಕರ್ಯ ನಿರ್ವಹಣೆ ಮತ್ತು ಕಾರ್ಯಾಚರಣೆ ಸಂಬಂಧಿತ ಕಾರ್ಯಗಳನ್ನು ಕೈಗೊಳ್ಳುವುದಕ್ಕಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ರೈಲ್ವೆ ಇಲಾಖೆಯು ಹೊರಡಿಸಿರುವ ಪ್ರಕಟಣೆಯ ಅನುಸಾರ ಇದೇ ಕಾರಣಕ್ಕಾಗಿ ಇನ್ನೂ 66 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ.

ಈಗಾಗಲೇ ಐಆರ್‌ಸಿಟಿಸಿ ವೆಬ್‌ಸೈಟ್‌ ಅನ್ನು ಬಳಸಿ ಕಾಯ್ದಿರಿಸಿದ ಟಿಕೆಟ್‌ ಅನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗುತ್ತದೆ ಮತ್ತು ಬಳಕೆದಾರರ ಖಾತೆಗೆ ಮರುಪಾವತಿಯನ್ನು ಮಾಡಲಾಗುತ್ತದೆ. ಆಫ್‌ಲೈನ್‌ ಮೂಲಕ ಟಿಕೆಟ್ ಬುಕ್‌ ಮಾಡಿದ ಪ್ರಯಾಣಿಕರು ಮರುಪಾವತಿಯನ್ನು ಪಡೆಯಲು ಮೀಸಲಾತಿ ಕೌಂಟರ್‌ಗೆ ಭೇಟಿ ನೀಡಬೇಕಿರುತ್ತದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ..!

Sat Feb 4 , 2023
ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಂದಿರುವ ರಾಜ್ಯ ಸರ್ಕಾರ ವಾರಕ್ಕೆ ಒಂದು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲು ಆದೇಶಿಸಿತ್ತು. ಮಕ್ಕಳು ಏನನ್ನು ಬಯಸುತ್ತಾರೋ ಅದನ್ನೇ ನೀಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು. ಅಲ್ಲದೆ ಸಮೀಕ್ಷೆ ಒಂದರಲ್ಲಿ ಶೇಕಡ 70ಕ್ಕೂ ಅಧಿಕ ಮಕ್ಕಳು ಮೊಟ್ಟೆ ನೀಡಲು ಬೇಡಿಕೆ ಇಟ್ಟಿದ್ದು, ಕಂಡುಬಂದಿತ್ತು. ಇದರ ಮಧ್ಯೆ ಆಡಳಿತ ಸುಧಾರಣಾ ಆಯೋಗ ಮತ್ತೊಂದು ಮಹತ್ವದ ಶಿಫಾರಸ್ಸು ಮಾಡಿದ್ದು ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಾರಕ್ಕೆ 5 ದಿನ […]

Advertisement

Wordpress Social Share Plugin powered by Ultimatelysocial