ಜಮ್ಮು-ಕಾಶ್ಮೀರದ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ 5 ಸೈನಿಕರ ಸಾವು

ನಿಯಂತ್ರಣ ರೇಖೆ ಯಿಂದ ದೇಶದೊಳಕ್ಕೆ ನುಸುಳಲು ಯಶಸ್ವಿಯಾದ ನಂತರ ಭಯೋತ್ಪಾದಕರು ಚಾಮರ್ ಅರಣ್ಯದಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪನ್ನು ರಚಿಸಿಕೊಂಡಿದ್ದಾರೆ ಎಂಬ ಬಗ್ಗೆ ವರದಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ಜಿಲ್ಲೆಯಲ್ಲಿ ಸೋಮವಾರ ನಡೆದ ದಂಗೆವಿರೋಧಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಜೂನಿಯರ್ ಕಮಿಷನ್ಡ್ಆಫೀಸರ್ ಸೇರಿದಂತೆ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುರಂಕೋಟೆಯ ಡಿಕೆಜಿಗೆ ಹತ್ತಿರವಿರುವ ಗ್ರಾಮದಲ್ಲಿ ಮುಂಜಾನೆ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿ ಬಂದ ನಂತರ ಸೇನಾ ಕಾರ್ಯಾಚರಣೆ ಆರಂಭಿಸಲಾಯಿತು. ಆದರೆ, ಕಾರ್ಯಾಚರಣೆಯಲ್ಲಿ ಐವರು ಸೈನಿಕರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.

ಸೈನಿಕರು ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ಸೈನಿಕರ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಜೂನಿಯರ್ ಕಮಿಷನ್ಡ್ಆಫೀಸರ್ ಸೇರಿದಂತೆ 5 ಜನರು ಗಂಭೀರ ಗಾಯಕ್ಕೆ ಒಳಗಾಗಿದ್ದರು. ಗಾಯದ ಕಾರಣಕ್ಕೆ ಎಲ್ಲರೂ ಮೃತಪಟ್ಟಿದ್ದಾರೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ. ಅಲ್ಲದೆಭಯೋತ್ಪಾದಕರೊಂದಿಗೆ ಸೈನಿಕರ ಎನ್ಕೌಂಟರ್ ಇನ್ನೂ ಮುಂದುವರೆದಿದ್ದು, ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ. ನಿಯಂತ್ರಣ ರೇಖೆ ಯಿಂದ ದೇಶದೊಳಕ್ಕೆ ನುಸುಳಲು ಯಶಸ್ವಿಯಾದ ನಂತರ ಭಯೋತ್ಪಾದಕರು ಚಾಮರ್ ಅರಣ್ಯದಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪನ್ನು ರಚಿಸಿಕೊಂಡಿದ್ದಾರೆ ಎಂಬ ಬಗ್ಗೆ ವರದಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು, ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗುವ ಎಲ್ಲಾ ಮಾರ್ಗಗಳಲ್ಲೂ ಕೆಟ್ಟೆಚ್ಚರ ವಹಿಸಲಾಗಿದೆ. ಗಡಿಗಳಲ್ಲಿ ಮತ್ತಷ್ಟು ಸೈನಿಕರನ್ನು ನೇಮಿಸುವ ಮೂಲಕ ಚೆಕ್ಪೋಸ್ಟ್ಗಳನ್ನು ಬಲಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಗಡಿ ಭಾಗದಲ್ಲಿ ಆಗಿಂದಾಗ್ಗೆ ಗುಂಡಿನ ದಾಳಿ ಸಾಮಾನ್ಯ. ಆದರೆ, ಕಳೆದ ಫೆಬ್ರವರಿ ತಿಂಗಳಲ್ಲಿ ಎರಡೂ ದೇಶಗಳ ನಡುವೆ ಕದನ ವಿರಾಮವನ್ನು ಘೋಷಣೆ ಮಾಡಲಾಗಿತ್ತು. ಹೀಗಾಗಿ ಗಡಿಯಲ್ಲಿ ಅಲ್ಪ ಪ್ರಮಾಣದ ಶಾಂತಿ ನೆಲೆಸಿತ್ತು. ಆದರೆ, ಕದನ ವಿರಾಮ ಒಪ್ಪಂದದ ನಂತರ ಭಾರತೀಯ ಸೇನೆಯ ವಿರುದ್ಧ ನಡೆದ ಮೊದಲ ಮಾರಣಾಂತಿಕ ದಾಳಿ ಇದಾಗಿದೆ ಎನ್ನಲಾಗುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಸಿಎಂ

Mon Oct 11 , 2021
ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ ಸಿಎಂ ಬೊಮ್ಮಾಯಿ ಅವರು  ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ರಕ್ಷಣೆ, ಬಯೋಟೆಕ್ನಾಲಜಿ, ಇಂಜಿನಿಯರಿಂಗ್, ವೈಮಾನಿಕ, ಬಾಹ್ಯಾಕಾಶ ಸೇರಿದಂತೆ ಸುಮಾರು 180ಕ್ಕೂ ಹೆಚ್ಚು ಅಂತಾರಾಷ್ಟ್ರೀಯ […]

Advertisement

Wordpress Social Share Plugin powered by Ultimatelysocial