ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ದಾಳಿ.

ಆಸ್ಟ್ರೇಲಿಯಾದ ಮೆಲ್ಬರ್ನ್ ನ ಫೆಡರೇಶನ್‌ ಸ್ಕ್ವೇರ್‌ನಲ್ಲಿ ಭಾನುವಾರ ಭಾರತದ ಧ್ವಜ ಹಿಡಿದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಮೂಲದವರ ಮೇಲೆ ಖಡ್ಗ ಹಿಡಿದ ಸುಮಾರು 40 ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದಾರೆ.ಆಸ್ಟ್ರೇಲಿಯಾದಲ್ಲಿ ಹೆಚ್ಚುತ್ತಿರುವ ಭಾರತ ವಿರೋಧಿ, ಖಲಿಸ್ತಾನಿ ಪರ ಚಟುವಟಿಕೆಗಳ ವಿರುದ್ಧ ಭಾರತೀಯ ಮೂಲದವರು ನಿಶಸ್ತ್ರರಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ನುಗ್ಗಿದ ಖಡ್ಗ ಸೇರಿದಂತೆ ಹರಿತವಾದ ಆಯುಧಗಳು, ಬೆತ್ತ ಹಿಡಿದ ಸುಮಾರು 40 ಮಂದಿ ಖಲಿಸ್ತಾನಿ ಬೆಂಬಲಿಗರು ಏಕಾಏಕಿ ಭಾರತೀಯ ಮೂಲದವರ ಮೇಲೆ ಎರಗಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ, ಗುಂಪುಗಳನ್ನು ಚದುರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದಾಳಿಯನ್ನು ಆಸ್ಟ್ರೇಲಿಯಾದ ಭಾರತೀಯ ಸಮುದಾಯ ತೀವ್ರವಾಗಿ ಖಂಡಿಸಿದೆ. “ದಾಳಿಯನ್ನು ಹಾಗೂ ಆಸ್ಟ್ರೇಲಿಯಾದಲ್ಲಿ ಭಾರತ ವಿರೋಧಿ, ಖಲಿಸ್ತಾನಿ ಪರ ಚಟುವಟಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಭಾರತದ ಶಾಂತಿ ಮತ್ತು ಸೌಹಾರ್ದತೆಯನ್ನು ಹಾಳು ಮಾಡಲು ಸಮಾಜ ವಿರೋಧಿ ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು,’ ಎಂದು ಬಿಜೆಪಿ ವಕ್ತಾರ ಮಂಜಿಂದರ್‌ ಸಿಂಗ್‌ ಸಿರ್ಸಾ ಆಗ್ರಹಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಾತ್ರೆಯಲ್ಲಿ ಕೈ ಹಿಡಿದು ಎಳೆದಾಡಿದ ಯುವಕ: ನೊಂದ ಯುವತಿ ಆತ್ಮಹತ್ಯೆ!.

Mon Jan 30 , 2023
ಜಾತ್ರೆಯಲ್ಲಿ ಯುವಕನೋರ್ವ ತನ್ನ ಕೈಹಿಡಿದು ಎಳೆದಾಡಿದ್ದಾನೆಂದು ನೊಂದ ಯುವತಿ ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ. ಸಂಕೋನಟ್ಟಿ ಗ್ರಾಮದ ಸ್ವಪ್ನಾ ಸುಭಾಷ ಹಿಪ್ಪರಗಿ (19) ಆತ್ಮಹತ್ಯೆಗೆ ಶರಣಾಗಿದ್ದಾಳೆ.ಸಂಕೋನಟ್ಟಿ ಗ್ರಾಮದ ಸುನೀಲ ಅಣ್ಣಪ್ಪ ಧರಿಗೌಡರ ಆಕೆಯ ಕೈ ಹಿಡಿದು ಎಳೆದಾಡಿದ ಯುವಕ ಎಂದು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸುನೀಲ ಧರಿಗೌಡರ ಜತೆ ಸ್ವಪ್ನಾಳನ್ನು ವಿವಾಹ ಮಾಡಿಕೊಡಿ […]

Advertisement

Wordpress Social Share Plugin powered by Ultimatelysocial