‘ಐಫೋನ್‌ 12 ಮಿನಿ’

ಇ ಕಾಮರ್ಸ್‌ ತಾಣಗಳ ಸ್ಪೆಷಲ್ ಮಾರಟ ಸಂದರ್ಭಗಳಲ್ಲಿ ಐಫೋನ್ ಗಳು ರಿಯಾಯಿತಿಯಲ್ಲಿ ಲಭ್ಯ ಆಗುತ್ತವೆ. ಈ ನಿಟ್ಟಿನಲ್ಲಿ ಆನ್‌ಲೈನ್ ಶಾಪಿಂಗ್ ಪ್ರಿಯರು ಇಂತಹ ಸೇಲ್‌ಗಳತ್ತ ಮುಖ ಮಾಡುತ್ತಾರೆ. ಫ್ಲಿಪ್‌ಕಾರ್ಟ್‌ ಇದೀಗ ಫ್ಲಿಪ್‌ಕಾರ್ಟ್‌ ಬಿಗ್ ಸೇವಿಂಗ್ ಡೇಸ್ 2022 ಸೇಲ್‌ ಅನ್ನು ಆಯೋಜಿಸಿದೆ.

ಈ ವಿಶೇಷ ಸೇಲ್‌ನಲ್ಲಿ ಆಯ್ದ ಕೆಲವು ಐಫೋನ್‌ ಮಾಡೆಲ್‌ಗಳು ಹಾಗೂ ನೂತನ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಿದೆ.

ಹೌದು, ಫ್ಲಿಪ್‌ಕಾರ್ಟ್‌ ತನ್ನ ಫ್ಲಿಪ್‌ಕಾರ್ಟ್‌ ಬಿಗ್ ಸೇವಿಂಗ್ ಡೇಸ್ 2022 ಸೇಲ್‌ ನಲ್ಲಿ ಐಫೋನ್ 12 ಮಿನಿ ಫೋನಿಗೆ ಭರ್ಜರಿ ಆಫರ್ ತಿಳಿಸಿದೆ. 64GB ಸ್ಟೋರೇಜ್‌ನ ಬೇಸ್‌ ವೇರಿಯಂಟ್‌ ಐಫೋನ್ 12 ಮಿನಿ ಫೋನ್ ಬೆಲೆಯು 40,749ರೂ. ದರದಲ್ಲಿ ಕಾಣಿಸಿಕೊಂಡಿದೆ. ಎಕ್ಸ್‌ಚೇಂಜ್ ಕೊಡುಗೆಯು ಸಹ ಲಭ್ಯ ಮಾಡಿದೆ. ಆಯ್ದ ಬ್ಯಾಂಕ್‌ನ ಡಿಸ್ಕೌಂಟ್‌ ಸಹ ದೊರೆಯಲಿವೆ. ಹಾಗಾದರೇ ಐಫೋನ್ 12 ಮಿನಿ ಫೋನಿನ ಫೀಚರ್ಸ್‌ ಹಾಗೂ ಐಫೋನ್ 13 ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಪಲ್‌ ಐಫೋನ್‌ 12 ಮಿನಿ ಫೀಚರ್ಸ್‌

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಮಾರಾಟದ ಸಮಯದಲ್ಲಿ ಐಫೋನ್‌ 12 ಮಿನಿ ಫೋನಿಗೂ ಆಕರ್ಷಕ ರಿಯಾಯಿತಿ ಲಭ್ಯ. ಈ ಫೋನ್ 64GB ವೇರಿಯಂಟ್ 40,749ರೂ. ಗಳ ರಿಯಾಯಿತಿ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಇನ್ನು ಐಫೋನ್ 12 ಮಿನಿ 5.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಸೂಪರ್ ರೆಟಿನಾ XRD ಡಿಸ್‌ಪ್ಲೇ ಮಾದರಿಯಲ್ಲಿದೆ. ಇದು ಸಹ A14 ಬಯೋನಿಕ್ ಎಸ್‌ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಐಫೋನ್ 12 ಮಿನಿ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಆಪಲ್‌ ಐಫೋನ್‌ 12 ಫೀಚರ್ಸ್‌

ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇನ್ನು ಈ ಫೋನ್ ನೀಲಿ, ಹಸಿರು, ಕಪ್ಪು, ಬಿಳಿ ಮತ್ತು ಕೆಂಪು ಬಣ್ಣಗಳ ಆಯ್ಕೆಗಳಲ್ಲಿ ಸಿಗಲಿದೆ.

ಐಫೋನ್ 13 ಫೋನ್‌ ಫೀಚರ್ಸ್‌

ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಫೋನ್ 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

ಐಫೋನ್ 13 ಮಿನಿ ಫೋನ್‌ ಫೀಚರ್ಸ್‌

ಐಫೋನ್ 13 ಮಿನಿ ಫೋನ್‌ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 800nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್‌ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್‌ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

CRICKET:ವಿರಾಟ್ ಕೊಹ್ಲಿ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿದ ಶಾಹಿದ್ ;

Tue Jan 18 , 2022
ಪಾಕಿಸ್ತಾನ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲು ಕಂಡ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೂ ವಿದಾಯ ಹೇಳಿದ್ದಾರೆ. ಟಿ20 ಹಾಗೂ ಏಕದಿನ ಮಾದರಿಯ ನಾಯಕತ್ವದಿಂದ ಕೆಳಗಿಳಿದ ಬಳಿಕ ಟೆಸ್ಟ್ ಮಾದರಿಗೂ ವಿರಾಟ್ ಕೊಹ್ಲಿ ವಿದಾಯ ಹೇಳಿರುವುದು ಅಭಿಮಾನಿಗಳಿಗೆ ಅಚ್ಚರಿಯುಂಟು ಮಾಡಿದೆ. ವಿರಾಟ್ ಕೊಹ್ಲಿಯ ಈ ನಿರ್ಧಾರದ ಬಗ್ಗೆ ಇದೀಗ ನಾನಾ ರೀತಿಯ ಚರ್ಚೆಗಳು ನಡೆಯುತ್ತಿದೆ. ಕ್ರಿಕೆಟ್ ಅಭಿಮಾನಿಗಳು ಹಾಗೂ ಕ್ರಿಕೆಟ್ ವಿಶ್ಲೇಷಕರು ಈ ಬಗ್ಗೆ ತಮ್ಮದೇ ಆದ […]

Advertisement

Wordpress Social Share Plugin powered by Ultimatelysocial