ನಟ ಶಿವರಾಜ್ ಕುಮಾರ್ ಚಿತ್ರರಂಗಕ್ಕೆ ಬಂದು 37 ವರ್ಷ ಆಯಿತ್ತು

ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಬಣ್ಣಹಚ್ಚಿ ನಟಿಸಲು ಆರಂಭಿಸಿ ಇಂದಿಗೆ 37 ವರ್ಷವಾಗಿದೆ. ಸುದೀರ್ಘ ಪಯಣದಲ್ಲಿ 125 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಬಣ್ಣಹಚ್ಚಿ ನಟಿಸಲು ಆರಂಭಿಸಿ ಇಂದಿಗೆ 37 ವರ್ಷವಾಗಿದೆ.
ಸುದೀರ್ಘ ಪಯಣದಲ್ಲಿ 125 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ, ಕೋಟ್ಯಂತರ ಅಭಿಮಾನಿಗಳನ್ನು ಅವರು ಸಂಪಾದಿಸಿದ್ದಾರೆ. ಇಷ್ಟು ವರ್ಷಗಳ ಕಾಲ ತಮಗೆ ಪ್ರೀತಿ ತೋರಿಸಿದ ಅಭಿಮಾನಿಗಳು, ಕುಟುಂಬಸ್ಥರು, ಕೋಟಿ ಕೋಟಿ ಕನ್ನಡಿಗರಿಗೆ ಶಿವರಾಜ್​ಕುಮಾರ್ ಧನ್ಯವಾದ ಹೇಳಿದ್ದಾರೆ. ಶಿವರಾಜ್​ಕುಮಾರ್ ಮೊದಲು ಬಣ್ಣ ಹಚ್ಚಿದ ಸಿನಿಮಾ ‘ಆನಂದ್’.
ಈ ಚಿತ್ರ ಸೆಟ್ಟೇರಿದ್ದು 1986, ಫೆ.19ರಂದು. ಶಿವಣ್ಣ ಅವರು ಮೊದಲ ಬಾರಿಗೆ ಕ್ಯಾಮೆರಾ ಎದುರಿಸಿದ ದಿನ. ಈ ಬಗ್ಗೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ‘ಕನ್ನಡ ಚಿತ್ರರಂಗಕ್ಕೆ ನಾನು ಪಾದಾರ್ಪಣೆ ಮಾಡಿ ಇಂದಿಗೆ 37 ವರ್ಷಗಳು.
ಆನಂದ್ ಚಿತ್ರದ ಮೊದಲ ದೃಶ್ಯ ಈಗಲೂ ಕಣ್ಣಿಗೆ ಕಟ್ಟಿದಂತಿದೆ. ಆನಂದ್ ಇಂದ ವೇದವರೆಗೂ ನೀವು ಕೊಟ್ಟ ಪ್ರೀತಿ ಬೆಲೆಕಟ್ಟಲಾಗದ್ದು. ನನ್ನನ್ನು ನೀವು ಕೇವಲ ಒಬ್ಬ ನಟನಾಗಿ, ಸ್ಟಾರ್ ಆಗಿ ಮಾತ್ರವಲ್ಲದೆ ನಿಮ್ಮ ಮನೆಮಗನಾಗಿ ಬೆಳೆಸಿದ್ದೀರಿ. ದೇವರ ಸ್ವರೂಪವಾಗಿರುವ ಅಭಿಮಾನಿಗಳಿಗೆ, ಮಾಧ್ಯಮ ಮಿತ್ರರಿಗೆ, ಹಿರಿಯರಿಗೆ, ಕಿರಿಯರಿಗೆ, ಸಹದ್ಯೋಗಿಗಳಿಗೆ ಹಾಗು ನನ್ನ ಇಡೀ ಕುಟುಂಬಕ್ಕೆ ಅನಂತ ವಂದನೆಗಳು’ ಎಂದು ಶಿವಣ್ಣ ಬರೆದುಕೊಂಡಿದ್ದಾರೆ.
ಮಫ್ತಿ ನಿರ್ದೇಶಕ ನರ್ತನ್ ಜೊತೆ ಕೊನೆಗೂ ‘ಭೈರತಿ ರಣಗಲ್’ ಅವತಾರದಲ್ಲಿ ಶಿವಣ್ಣ ಎಂಟ್ರಿಗೆ ಮುಹೂರ್ತ ಫಿಕ್ಸ್ಶಿವರಾಜ್​ಕುಮಾರ್ ಅವರ ಮೊದಲ ಸಿನಿಮಾ ‘ಆನಂದ್’ ಯಶಸ್ಸು ಕಂಡಿತು. ಈ ಚಿತ್ರದಿಂದ ಶಿವರಾಜ್​ಕುಮಾರ್ ವೃತ್ತಿಜೀವನಕ್ಕೆ ಭದ್ರಬುನಾದಿ ಸಿಕ್ಕಿತು. ಅವರ ನಟನೆಯ 125ನೇ ಚಿತ್ರ ‘ವೇದ’ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಯಶಸ್ಸು ಕಂಡಿತು. ಈ ಚಿತ್ರವನ್ನು ಗೀತಾ ಪಿಕ್ಚರ್ಸ್ ಮೂಲಕ ನಿರ್ಮಾಣ ಮಾಡಲಾಯಿತು. 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೈಗೆ ಅಧಿಕಾರ ನಾಗೇಶ್ ವಿಶ್ವಾಸ.

Tue Feb 21 , 2023
ಕೆ.ಆರ್.ಪುರ, ಫೆ.೨೧-ಪಾರದರ್ಶಕ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷದ ಪರ ಜನರು ಒಲವು ತೋರಿದ್ದು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಶಾಸಕ ಹೆಚ್ ನಾಗೇಶ್ ಹೇಳಿದರು. ಮಹದೇವಪುರ ಕ್ಷೇತ್ರದ ಆವಲಹಳ್ಳಿಯಲ್ಲಿ ಡ್ರೀಮ್ ಸ್ಮಾಶರಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯದಿಂದ ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ […]

Advertisement

Wordpress Social Share Plugin powered by Ultimatelysocial