POLITICS:ಜಾರಕಿಹೊಳಿ ಸಹೋದರರನ್ನು ದೂರವಿಟ್ಟು ಸಭೆ ನಡೆಸಿದ ಉಮೇಶ;

ಬೆಳಗಾವಿ: ಸಚಿವ ಉಮೇಶ ಕತ್ತಿ ಅವರು ತಮ್ಮ ನೇತೃತ್ವದಲ್ಲಿ ಪಕ್ಷದ ಕೆಲವು ಮುಖಂಡರೊಂದಿಗೆ ರಹಸ್ಯವಾಗಿ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ ಹಾಗೂ ಹಲವು ಚರ್ಚೆಗಳಿಗೂ ಗ್ರಾಸವಾಗಿದೆ. ಜಾರಕಿಹೊಳಿ ಸಹೋದರರನ್ನು ದೂರವಿಟ್ಟು ಸಭೆ ನಡೆಸಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ನಡೆದಿರುವ ಈ ಸಭೆ ಹಲವು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ಇಲ್ಲಿನ ಕತ್ತಿ ನಿವಾಸದಲ್ಲಿ ನಡೆದ ಸಭೆಯಲ್ಲಿ ವಿಧಾನಪರಿಷತ್‌ ಸದಸ್ಯ ಲಕ್ಷ್ಮಣ ಸವದಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಪಿ.ರಾಜೀವ್, ಮುಖಂಡ ಮಹಾಂತೇಶ ಕವಟಗಿಮಠ ಭಾಗವಹಿಸಿದ್ದರು.

ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ, ಮಹಾನಗರಪಾಲಿಕೆ ಮೇಯರ್-ಉಪ ಮೇಯರ್ ಆಯ್ಕೆ ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಗಿದೆ. ಅಭಯ ಪಾಟೀಲ ಮತ್ತು ಪಿ.ರಾಜೀವ ಅವರಿಗೆ ಸಚಿವ ಸ್ಥಾನ ನೀಡಬೇಕು. ಶಾಸಕ ಅನಿಲ ಬೆನಕೆ ಹಾಗೂ ಮಹಾಂತೇಶ ದೊಡ್ಡಗೌಡರಗೆ ನಿಗಮ-ಮಂಡಳಿ ಅಧ್ಯಕ್ಷ ಗಾದಿ ಕೊಡಬೇಕು ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸುವ ನಿರ್ಧಾರಕ್ಕೆ ಮುಖಂಡರು ಬಂದಿದ್ದಾರೆ ಎನ್ನಲಾಗಿದೆ.

ಸಂಸದೆ ಮಂಗಲಾ ಅಂಗಡಿ ಪಾಲ್ಗೊಂಡಿರಲಿಲ್ಲ. ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರಿಗೆ ಆಹ್ವಾನ ಇರಲಿಲ್ಲ ಎಂದು ತಿಳಿದುಬಂದಿದೆ.

‘ಈಚೆಗೆ ನಡೆದ ವಿಧಾನಪರಿಷತ್‌, ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಾನಿ, ಮುಖಂಡರಿಂದಲೇ ಬಿದ್ದಿರುವ ಒಳಹೊಡೆತ ಮೊದಲಾದ ವಿಷಯಗಳ ಕುರಿತು ಚರ್ಚೆ ನಡೆದಿದೆ. ವಿಧಾನಪರಿಷತ್‌ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ ಕಣಕ್ಕಿಳಿಸಿದ್ದರಿಂದ ಅಧಿಕೃತ ಅಭ್ಯರ್ಥಿ ಸೋಲನುಭವಿಸಬೇಕಾಯಿತು. ಇಂತಹ ಬೆಳವಣಿಗೆಗಳು ಸಂಘಟನೆಗೆ ಒಳ್ಳೆಯದಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಜಾರಕಿಹೊಳಿ ಸಹೋದರರಿಂದ ಪಕ್ಷಕ್ಕೆ ಹಾನಿ ಆಗುತ್ತಿರುವುದನ್ನು ತಡೆಯುವುದು ಹೇಗೆ ಎಂಬಿತ್ಯಾದಿ ವಿಷಯಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ’ ಎಂದು ಮೂಲಗಳು ಮಾಹಿತಿ ನೀಡಿವೆ.

ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷಕ್ಕೆ ಹೊಡೆತ ಬೀಳದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ವರಿಷ್ಠರು ಕ್ರಮ ಕೈಗೊಳ್ಳಬೇಕು. ನೇಮಕಾತಿಗಳಲ್ಲಿ ಪಕ್ಷ ನಿಷ್ಠರಿಗೆ ಮಣೆ ಹಾಕಬೇಕು ಎಂಬ ಒತ್ತಾಯವೂ ವ್ಯಕ್ತವಾಯಿತು ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

GOOD NEWS:ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ;

Sun Jan 23 , 2022
ಬೆಂಗಳೂರು: ಕೊರೋನಾದಿಂದಾಗಿ ಮೊದಲೇ ಜನ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ ಸದ್ಯಕ್ಕೆ ವಿದ್ಯುತ್, ಹಾಲು ಹಾಗೂ ನೀರಿನ ದರ ಏರಿಕೆ ಮಾಡುವುದಿಲ್ಲ. ಈ ಬಗ್ಗೆ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕೆಎಂಎಫ್ ಹಾಲಿನ ದರ, ಎಸ್ಕಾಂಗಳ ವಿದ್ಯುತ್ ದರ ಮತ್ತು ಬೆಂಗಳೂರು ಜಲಮಂಡಳಿ ನೀರಿನ ದರ ಏರಿಕೆ ಪ್ರಸ್ತಾವನೆಗಳನ್ನು ಎಲ್ಲಾ ಆಯಾಮಗಳಿಂದ ಪರಿಶೀಲಿಸಿ ಕ್ರಮ […]

Advertisement

Wordpress Social Share Plugin powered by Ultimatelysocial