ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್​ ನಟನೆಯ ಕೊನೇ ಸಿನಿಮಾ ಜೇಮ್ಸ್ ​ ರಿಲೀಸ್​ಗೆ ಡೇಟ್​ ಫಿಕ್ಸ್​!

ಬೆಂಗಳೂರು: ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್​ ನಟನೆಯ ಕೊನೇ ಸಿನಿಮಾ ಮೇಲೆ ಈಗ ನಿರೀಕ್ಷೆಗಳು ಉತ್ತುಂಗದಲ್ಲಿದ್ದು, ಆ ಸಿನಿಮಾದ ಪ್ರತಿಯೊಂದು ಅಪ್ಡೇಟ್​ಗಾಗಿ ಅಭಿಮಾನಿಗಳು ಕಾತಯುರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಪುನೀತ್​ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್​ ಒಂದನ್ನ ಬಿಡುಗಡೆ ಮಾಡಿದ್ದ ಚಿತ್ರ ತಂಡ ಈಗ ಸಿನಿಮಾ ಟೀಸರ್​ ಬಿಡುಗಡೆಗೆ ದಿನಾಂಕ ಫಿಕ್ಸ್​ ಮಾಡಿದೆ.ಫೆಬ್ರವರಿ 11 ರಂದು ಸರಿಯಾಗಿ 11 ಗಂಟೆ 11 ನಿಮಿಷಕ್ಕೆ ಜೇಮ್ಸ್​ ಸಿನಿಮಾದ ಟೀಸರ್​ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನೂ ಜೇಮ್ಸ್​ ಸಿನಿಮಾದಲ್ಲಿ ಪ್ರಿಯಾ ಆನಂದ್​ ಹಿರೋಯಿನ್​ ಆಗಿ ನಟಿಸಿದ್ದು, ತೆಲುಗು ನಟ ಶ್ರೀಕಾಂತ್​, ಶರತ್​ ಕುಮಾರ್​ ರಾಘವೇಂದ್ರ ರಾಜ್​ಕುಮಾರ್​, ಮುಂತಾದ ಕಲಾವಿದರು ನಟಿಸಿದ್ದಾರೆ. ಮಾರ್ಚ್​ 25 ಕ್ಕೆ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದ್ದು, ಇತ್ತೀಚೆಗೆ ಡಬ್ಬಿಂಗ್​ ಕಾರ್ಯವನ್ನ ಮುಗಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

STOP RAPE:ದೆಹಲಿಯ ವಸಂತ್ ಕುಂಜ್ ಅನಾಥಾಶ್ರಮದಲ್ಲಿ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ;

Sat Feb 5 , 2022
ದಕ್ಷಿಣ ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಮಕ್ಕಳ ಪೋಷಕ ಮನೆಯಲ್ಲಿ ವಾಸಿಸುವ 16 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಕೇಂದ್ರದ ಸೆಕ್ಯುರಿಟಿ ಗಾರ್ಡ್ ಅತ್ಯಾಚಾರ ಎಸಗಿದ್ದಾನೆ ಎಂದು ದೆಹಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಶಂಕಿತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ 30ರ ಹರೆಯದ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ. ಬಾಲಕಿಗೆ ಹೊಟ್ಟೆನೋವು […]

Advertisement

Wordpress Social Share Plugin powered by Ultimatelysocial