JAMMU AND KASHMIR: ಜಮ್ಮು ಮತ್ತುಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆ;

ಶ್ರೀನಗರ: ಜಮ್ಮು ಮತ್ತುಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಆರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು, ಅದರಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಎಲ್ಲಾ ಆರು ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

‘ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯ ಆರು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ನಾಲ್ವರ ಗುರುತು ಪತ್ತೆಮಾಡಲಾಗಿದ್ದು, ಇನ್ನಿಬ್ಬರು ಭಯೋತ್ಪಾದಕರ ಗುರುತು ಪತ್ತೆ ಮಾಡಲಾಗುತ್ತಿದೆ. ಇದು ನಮಗೆ ಸಿಕ್ಕ ದೊಡ್ಡ ಯಶಸ್ಸು’ ಎಂದು ಜಮ್ಮು ಮತ್ತು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶಹಾಬಾದ್ ದೂರು ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದು, ಒಬ್ಬ ಪೊಲೀಸ್ ಗಾಯಗೊಂಡಿದ್ದಾರೆ.

ಇತರ ಮೂವರು ಜೆಇಎಂ ಭಯೋತ್ಪಾದಕರನ್ನು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

VIRAL NEWS:ವಿವಾದಕ್ಕೆ ಕಾರಣವಾಯ್ತು,ಇತ್ತೀಚಿನ ಸಂದರ್ಶನವೊಂದರಲ್ಲಿ ಮೊಘಲರು ನಿರಾಶ್ರಿತರು ಎಂದು ನೀಡಿದ ಹೇಳಿಕೆ;

Thu Dec 30 , 2021
ಹಿರಿಯ ನಟ ನಾಸಿರುದ್ದೀನ್ ಶಾ ಅವರು ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ ಮೊಘಲರು ನಿರಾಶ್ರಿತರು ಎಂದು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಅವರ ಹೇಳಿಕೆ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಮೊಘಲರ ಕ್ರೌರ್ಯವೆನ್ನಲಾದ ದುಷ್ಕೃತ್ಯಗಳು ನಿತ್ಯವೂ ಬೆಳಕಿಗೆ ಬರುತ್ತಿದ್ದು, ಮೊಘಲರು ದೇಶಕ್ಕೆ ಕೊಡುಗೆ ನೀಡಿದವರು ಎಂಬುದನ್ನು ನಾವು ಮರೆಯುತ್ತೇವೆ ಎಂದು ಅವರು ಹೇಳುವುದನ್ನು ಕೇಳಬಹುದಾಗಿದೆ. ಸಂದರ್ಶನದ ವೇಳೆಯಲ್ಲಿ, ಮೊಘಲರು ನಿರಾಶ್ರಿತರಾಗಿದ್ದರು ಎಂದು ನಾಸಿರುದ್ದೀನ್ ಶಾ ಹೇಳುತ್ತಾರೆ. ಮುಂದುವರೆದು ಮಾತನಾಡಿದ ಅವರು, ನೃತ್ಯ, […]

Advertisement

Wordpress Social Share Plugin powered by Ultimatelysocial