ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರಿ ಸೌಲಭ್ಯ ಎರಡು ಮಕ್ಕಳಿಗೆ ಸೀಮಿತಗೊಳಿಸಲು ಒತ್ತಾಯ

ಬೆಂಗಳೂರು: ಜನಸಂಖ್ಯೆ ಸ್ಪೋಟ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಹೇಳಿದ್ದಾರೆ.ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಸರ್ಕಾರಿ ಸೌಲಭ್ಯವನ್ನು ಎರಡು ಮಕ್ಕಳಿಗೆ ಸೀಮಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.ರಾಜ್ಯದಲ್ಲಿ ಜನಸಂಖ್ಯೆ ಸ್ಪೋಟವಾಗುತ್ತಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸರ್ಕಾರ ಕಠಿಣ ಕ್ರಮ ಕೈಗೊಂಡು ಸರ್ಕಾರಿ ಸೌಲಭ್ಯವನ್ನು ಎರಡು ಮಕ್ಕಳಿಗೆ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಏನೇ ನಿಯಮಗಳನ್ನು ಜಾರಿಗೆ ತಂದರೂ ಕೂಡ ಜನಸಂಖ್ಯೆ ನಿಯಂತ್ರಣವಾಗುತ್ತಿಲ್ಲ. ಉತ್ತರಪ್ರದೇಶ ಸರ್ಕಾರ ಎರಡು ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿದವರಿಗೆ ಸರಕಾರಿ ಸೌಲಭ್ಯ ಕಡಿತ ಮಾಡುವುದಾಗಿ ಹೇಳಿದ್ದು, ನಿಯಮ ಪರಿಶೀಲಿಸಿ ರಾಜ್ಯದಲ್ಲಿಯೂ ಅಂತಹ ನಿಯಮ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ನಗರಾಭಿವೃದ್ಧಿ ಸಚಿವರು ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಪ್ಪು 5ನೇ ತಿಂಗಳ ಪುಣ್ಯತಿಥಿ; ಕುಟುಂಬಸ್ಥರಿಂದ ಪೂಜೆ, ನಿರ್ದೇಶಕ ಆರ್​ಜಿವಿ ಭೇಟಿ

Tue Mar 29 , 2022
ಬೆಂಗಳೂರು: ನಟ ಪುನೀತ್​​ ರಾಜ್​​ಕುಮಾರ್​​ ಅಗಲಿ ಇಂದಿಗೆ ಐದು ತಿಂಗಳು. ಈ ಹಿನ್ನೆಲೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್‍ಕುಮಾರ್ 5ನೇ ತಿಂಗಳ ಪುಣ್ಯ ತಿಥಿ ಹಿನ್ನೆಲೆ, ಅಪ್ಪು ಸಮಾಧಿಗೆ ಕುಟುಂಬಸ್ಥರು ಭೇಟಿ ನೀಡಿದರು.ರಾಘವೇಂದ್ರ ರಾಜ್​​ಕುಮಾರ್, ಪುನೀತ್ ಪತ್ನಿ ಅಶ್ವಿನಿ ಹಾಗು ಮಕ್ಕಳು ಅಪ್ಪು ಸಮಾಧಿಗೆ ಭೇಟಿ ನೀಡಿ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿ ಕುಟುಂಬಸ್ಥರು ಹೊರಡುವ ವೇಳೆ ಖ್ಯಾತ ನಿರ್ದೇಶಕ ರಾಮ್ […]

Advertisement

Wordpress Social Share Plugin powered by Ultimatelysocial