ಮುಸ್ಲಿಮರು ಜ್ಞಾನವಾಪಿ ಸಮೀಕ್ಷೆ ಕಾನೂನನ್ನು ಗೌರವಿಸುವ ನಿರೀಕ್ಷೆಯಿದೆ:

ಬೆಂಗಳೂರು: ಕಾಶಿ ವಿಶ್ವನಾಥ ಮಂದಿರದ ಸಮೀಪದಲ್ಲಿ ಇರುವ ಜ್ಞಾನವಾಪಿ ಮಸೀದಿಯಲ್ಲಿನ ಸಮೀಕ್ಷೆ ಪ್ರಕರಣಕ್ಕೆ ಸಂಬಂಧಿಸಿ, ‘ಮುಸ್ಲಿಮರು ಆ ಕಾನೂನನ್ನು ಗೌರವಿಸುತ್ತಾರೆ ಎಂದು ನಾವು ನಿರೀಕ್ಷಿಸಿದ್ದೇವೆ’ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

‘ಮುಸ್ಲಿಂ ಲೀಗ್‌ನ ಮಾತೃಭೂಮಿಯ ಆಶಯದಂತೆ ಭಾರತವು ವಿಭಜನೆಗೊಂಡಿದೆ. ಭಾರತದಲ್ಲೇ ಉಳಿದ ಮುಸ್ಲಿಮರು ಸಂವಿಧಾನವನ್ನು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಕಾನೂನು ಹಿಂದೂ ಪರವಾಗಿದ್ದರೆ ಜ್ಞಾನವಾಪಿ ಪ್ರದೇಶವನ್ನು ಹಿಂದೂಗಳಿಗೆ ಮರಳಿ ನೀಡಬೇಕು, ಮುಸ್ಲಿಮರು ಆ ಕಾನೂನನ್ನು ಗೌರವಿಸುತ್ತಾರೆ ಎಂದು ನಿರೀಕ್ಷಿಸಿದ್ದೇವೆ’ ಎಂದು ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಜ್ಞಾನವಾಪಿ ಮಸೀದಿಯಲ್ಲಿನ ಸಮೀಕ್ಷೆಯನ್ನು ನಿಲ್ಲಿಸಬೇಕು ಎಂದು ಕೋರಿ ಅಂಜುಮಾನ್‌ ಎ ಇಂತೆಜಮಿಯಾ ಸಂಸ್ಥೆಯು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು (ಮಂಗಳವಾರ) ವಿಚಾರಣೆಗೆ ಎತ್ತಿಕೊಳ್ಳಲಿದೆ.

ಸಮೀಕ್ಷೆ ವಿಚಾರದಲ್ಲಿ ಮಧ್ಯಪ‍್ರವೇಶಿಸುವುದಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಪಿ.ಎಸ್‌. ನರಸಿಂಹ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ.

ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಲು ಸುಪ್ರೀಂ ಕೋರ್ಟ್ ಇದೇ 13ರಂದು ನಿರಾಕರಿಸಿತ್ತು. ಬದಲಿಗೆ, ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಔರಂಗಾಜೇಬನ ಸಮಾಧಿ ವಿವಾದ: ಓವೈಸಿಗೆ ಬೆಂಬಲ ಸೂಚಿಸಿದ ರವೀನಾ ಟಂಡನ್!

Tue May 17 , 2022
‘ಕೆಜಿಎಫ್ 2’ ಸಿನಿಮಾ ಮೂಲಕ ಮತ್ತೊಮ್ಮೆ ಕನ್ನಡ ಸಿನಿ ಪ್ರೇಕ್ಷಕರ ಹೃದಯ ಗೆದ್ದಿರುವ ನಟಿ ರವೀನಾ ಟಂಡನ್ ತಮ್ಮ ಟ್ವೀಟ್‌ಗಳಿಂದ ಗಮನ ಸೆಳೆಯುತ್ತಿದ್ದಾರೆ. ತಾವು ರಾಜಕೀಯಕ್ಕೆ ಬರಲು ಉತ್ಸುಕರಾಗಿರುವುದಾಗಿ ಹಿಂದೊಮ್ಮೆ ಹೇಳಿದ್ದ ರವೀನಾ ಟಂಡನ್, ರಾಜಕೀಯ ವಿಷಯಗಳ ಬಗ್ಗೆ ಯಾವುದೇ ಹಿಂಜರಿಕೆ ಇಲ್ಲದೆ ಟ್ವೀಟ್ ಮಾಡುತ್ತಾರೆ. ಈಗಲೂ ಸಹ ವಿವಾದ ಎಬ್ಬಿಸಿರುವ ವಿಷಯವೊಂದಕ್ಕೆ ಸಂಬಂಧಿಸಿದಂತೆ ರವೀನಾ ಟಂಡನ್ ಟ್ವೀಟ್ ಮಾಡಿದ್ದು, ರವೀನಾ ಟ್ವೀಟ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವು ದಿನಗಳ […]

Advertisement

Wordpress Social Share Plugin powered by Ultimatelysocial