ವಿಧಾನ ಸೌಧ: ಎಲ್ಲವನ್ನೂ ಕೂಡ ನಿಯಮದ ಅಡಿಯಲ್ಲೇ ಮಾಡಬೇಕಾಗುತ್ತದೆ.

ಒಂದು ಬಸ್ ಓಡಿಸುವುದಕ್ಕೂ ಕೂಡ ಒಂದು ಡೆಸಿಬಲ್ ಲಿಮಿಟ್ ಅಂತ ಇರುತ್ತದೆ. ಸುಪ್ರಿಂ ಕೋರ್ಟ್ ಆದೇಶ ಪ್ರಕಾರವೇ ನಡೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಸ್ವಾತಂತ್ರ್ಯ ಬಂದಾಗಿನಿಂದ ಓಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಬಂದಿದ್ದಾರೆ. ಓಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಸಿಂಹಾಸನದ ಮೇಲೆ ಕೂತಿದ್ದಾರೆ. ಹಿಜಾಬ್, ಹಲಾಲ್ ವಿಚಾರಗಳಲ್ಲಿ ಕಾಂಗ್ರೆಸ್ ತನ್ನ ನಿಲುವು ಏನು ಅನ್ನುವುದನ್ನು ಸ್ಪಷ್ಟವಾಗಿ ಹೇಳಬೇಕಲ್ಲ ಎಂದು ವಾಗ್ದಾಳಿ ನಡೆಸಿದರು.

ಡಿಕೆಶಿವಕುಮಾರ್ ಈ ಬಗ್ಗೆ ಮಾತನಾಡಬೇಡಿ ಅಂತ ಹೇಳುತ್ತಾರೆ ಅಂದ್ರೆ ಏನರ್ಥ? ಕಾಂಗ್ರೆಸ್ ಗೆ ಓಟ್ ಬ್ಯಾಂಕ್ ಸ್ವಲ್ಪ ಅಲುಗಾಡಿದರೂ ಒತ್ತಡ ಆಗಿಬಿಡುತ್ತದೆ ಎಂದರು.

ಸ್ಥಳೀಯ ಪೊಲೀಸರು ಎಲ್ಲಿ ಸುಪ್ರಿಂ ಕೋರ್ಟ್ ಆದೇಶ ಉಲ್ಲಂಘನೆ ಆಗಿದೆ ಅಂಥ‌ ನೋಡಿಕೊಳ್ಳುತ್ತಾರೆ. ಲಾ ಆಯಂಡ್ ಆರ್ಡರ್ ಉಲ್ಲಂಘನೆ ಆಗದಂತೆ ನೋಡಿಕೊಳ್ಳುತ್ತೇವೆ. ಸಭೆ ನಡೆಸುವುದು ನೊಟೀಸ್ ನೀಡುವುದು ಎಲ್ಲವೂ ಸ್ಥಳೀಯ ಪೊಲೀಸರು ಮಾಡುತ್ತಾರೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆಜಾನ್(ಮೈಕ್) ನಿಷೇಧ ಕುರಿತಂತೆ ಸರ್ಕಾರ ಯಾವುದೇ ಹೊಸ ಕಾನೂನುಗಳನ್ನು ಮಾಡಿಲ್ಲ!

Tue Apr 5 , 2022
ಬೆಂಗಳೂರು,ಏ.5- ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಮಸೀದಿಗಳಲ್ಲಿನ ಆಜಾನ್(ಮೈಕ್) ನಿಷೇಧ ಕುರಿತಂತೆ ಸರ್ಕಾರ ಯಾವುದೇ ಹೊಸ ಕಾನೂನುಗಳನ್ನು ಮಾಡಿಲ್ಲ. ಈ ವಿಚಾರದಲ್ಲಿ ಯಾವುದೇ ಸಂಘಟನೆಯಾಗಲಿ ಶಾಂತಿ-ಸುವ್ಯವಸ್ಥೆ ಹದಗೆಡಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಸರ್ಕಾರದ ದೃಷ್ಟಿಯಲ್ಲಿ ಎಲ್ಲಾ ಜಾತಿ-ಧರ್ಮದವರು ಸಮಾನರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾವು ಯಾವುದೇ ಹೊಸ ಕಾನೂನುಗಳನ್ನು ಈಗ ಜಾರಿಗೆ ತರುತ್ತಿಲ್ಲ. 2001, 2002 ಹಾಗೂ ಹೈಕೋರ್ಟ್‍ನ ಆದೇಶಗಳ ಅನುಸಾರ […]

Advertisement

Wordpress Social Share Plugin powered by Ultimatelysocial