ಮಂತ್ರಿ ಸ್ಥಾನಕ್ಕಾಗಿ ನಾನು ಯಾರ ಮನೆಗೂ ಹೋದವನಲ್ಲ: ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು,ಮೇ 13- ನಾನು ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಳಿಯೂ ಹೋಗುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂತ್ರಿ ಸ್ಥಾನ ನೀಡಿದ್ದಾರೆ. ಕೊಟ್ಟಿರುವ ಖಾತೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿದ ತೃಪ್ತಿ ನನಗಿದೆ ಎಂದರು.

ಮಂತ್ರಿ ಸ್ಥಾನಕ್ಕಾಗಿ ನಾನು ಯಾರ ಮನೆಗೂ ಹೋದವನಲ್ಲ. ಮುಂದೆಯೂ ಹೋಗುವುದಿಲ್ಲ. ಸಚಿವ ಸ್ಥಾನ ಇರಲಿ, ಬಿಡಲಿ ಪಕ್ಷ ಹಾಗೂ ವರಿಷ್ಠರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬದ್ದನಾಗಿ ಇರುತ್ತೇನೆ ಎಂದು ತಿಳಿಸಿದರು.

ನಾನು ವೈಯಕ್ತಿಕ ಕಾರಣಗಳಿಗಾಗಿ ದೆಹಲಿಗೆ ಹೋಗಿದ್ದೆ. ದೆಹಲಿಯಲ್ಲಿ ತುರ್ತಾಗಿ ಭೇಟಿಯಾಗಬೇಕಾಗಿದ್ದರಿಂದ ಹೋಗಬೇಕಾಯಿತು. ಉಳಿದಂತೆ ಪಕ್ಷದ ವರಿಷ್ಠರನ್ನಾಗಲಿ, ಯಾವುದೇ ಮುಖಂಡರನ್ನೂ ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಪಿಎಸ್‍ಐ ಅಕ್ರಮ ನೇಮಕಾತಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸಿಐಡಿ ತನಿಖಾ ತಂಡ ಪ್ರಕರಣದಲ್ಲಿ ಭಾಗಿಯಾಗಿರುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ನಿನ್ನೆ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಕೆಲವು ಮಹತ್ವದ ವಿಷಯಗಳು ಲಭ್ಯವಾಗಿವೆ. ಮುಂದಿನ ದಿನಗಳಲ್ಲಿ ಇದರಲ್ಲೇ ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರವೇ ಶಿಕ್ಷೆಯಾಗಲಿದೆ ಎಂದು ಜ್ಞಾನೇಂದ್ರ ಎಚ್ಚರಿಕೆ ನೀಡಿದರು.

ಸಿಐಡಿ ತಂಡಕ್ಕೆ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. ಇದರಂತೆ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದೇವೆ. ಯಾರನ್ನೂ ಕೂಡ ರಕ್ಷಣೆ ಮಾಡುವುದಾಗಲಿ ಇಲ್ಲವೇ ಬೇರೊಬ್ಬರನ್ನು ಗುರಿಯಾಗಿಟ್ಟುಕೊಂಡು ವಿಚಾರಣೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ಬೊಮ್ಮಾಯಿ ಲಂಡನ್ ಪ್ರವಾಸ ಕೊನೆ ಕ್ಷಣದಲ್ಲಿ ರದ್ದು!

Fri May 13 , 2022
ಬೆಂಗಳೂರು,ಮೇ 13- ಮುಖ್ಯಮಂತ್ರಿಗಳ ಬಹುನಿರೀಕ್ಷಿತ ಲಂಡನ್ ಪ್ರವಾಸ ಕೊನೆ ಕ್ಷಣದಲ್ಲಿ ರದ್ದುಗೊಂಡಿದೆ. ಇದೇ 19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಂಡನ್‍ಗೆ ತೆರಳಬೇಕಾಗಿತ್ತು. ಇದಕ್ಕಾಗಿ ಸಿದ್ದತೆಯನ್ನು ಸಹ ಕೈಗೊಳ್ಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಅವರ ಲಂಡನ್ ಪ್ರವಾಸ ರದ್ದುಗೊಂಡಿದೆ. ಇದೀಗ ಪೂರ್ವ ನಿಗಯಂತೆ ಇದೇ 21ರಂದ ದಾವೋಸ್‍ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರಳಲಿದ್ದಾರೆ. ಮುಖ್ಯಮಂತ್ರಿಯವರೊಂದಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ […]

Advertisement

Wordpress Social Share Plugin powered by Ultimatelysocial