ಜನವರಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಲಿರುವ ಸಿಎಂ ಬೊಮ್ಮಾಯಿ

ಕುರಿ ಕಾಯುವ ವೃತ್ತಿಯಲ್ಲಿರುವ ಕಾಡುಗೊಲ್ಲ ಸಮಾಜವನ್ನು ಪರಿಶಿಷ್ಟ ಪಂಗಡದ ಜಾತಿಗಳ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ‌. ಈ ಕುರಿತು ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ಸಚಿವರನ್ನು ಭೇಟಿಯಾಗಿ ಚರ್ಚಿಸಲು ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳಲಿದ್ದಾರೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ‌.ಮಾಧುಸ್ವಾಮಿ ಹೇಳಿದರು.ವಿಧಾನಸಭೆಯ ಶೂನ್ಯವೇಳೆಯಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿದರು.ಈ ಮೊದಲು ಹಿಂದುಳಿದ ಬುಡಕಟ್ಟುಗಳ(ಬಿಟಿ) ಪಟ್ಟಿಯಲ್ಲಿದ್ದ ಕಾಡುಗೊಲ್ಲ ಹಾಗೂ ವಾಲ್ಮೀಕಿ ನಾಯಕ ಜಾತಿಗಳ ಪೈಕಿ ವಾಲ್ಮೀಕಿ ನಾಯಕರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದಾಗ ಕಾಡುಗೊಲ್ಲರನ್ನು ಪ್ರವರ್ಗ 1 ರಲ್ಲಿ ಮುಂದುವರಿಸಲಾಯಿತು.ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಅಗತ್ಯವಿದ್ದ ಕುಲಶಾಸ್ತ್ರ ಅಧ್ಯಯನ ಕೈಗೊಳ್ಳಲು ಮಾನವಶಾಸ್ತ್ರಜ್ಞರಾದ ಅನ್ನಪೂರ್ಣಮ್ಮ ನೇತೃತ್ವದ ಸಮಿತಿ ರಚಿಸಲಾಯಿತು.ಅವರು ನೀಡಿದ ವರದಿ ಆಧರಿಸಿ 2014ರಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಯಿತು. ಕುಲಶಾಸ್ತ್ರ ಅಧ್ಯಯನದ ಕೆಲವು ಅಂಶಗಳಲ್ಲಿ ಕಾಡುಗೊಲ್ಲರ ಕೆಲವು ಆಚರಣೆಗಳು, ಎಸ್‌ಟಿಗೆ ಸೇರ್ಪಡೆ ಮಾಡಲು ಪೂರಕವಾಗಿಲ್ಲ ಎಂದು ಕೇಂದ್ರ ಕೆಲವು ಸ್ಪಷ್ಟನೆಗಳನ್ನು ಕೇಳಿತ್ತು.ಬುಡಕಟ್ಟು ಸಂಶೋಧನಾ ಸಂಸ್ಥೆಯ ಮೂಲಕ ಸ್ಪಷ್ಟನೆಗಳನ್ನು ಪಡೆದು ಕೇಂದ್ರಕ್ಕೆ ಕಳುಹಿಸಲಾಗಿದೆ. ಚೆಂಡು ಈಗ ಕೇಂದ್ರದ ಅಂಗಳದಲ್ಲಿದೆ. ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮುಖ್ಯಮಂತ್ರಿಯವರು ನವದೆಹಲಿಗೆ ತೆರಳಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಸರ್ಕಾರ ಈ ವಿಷಯದಲ್ಲಿ ಬದ್ಧತೆ ಹೊಂದಿದೆ ಎಂದರು.ಹಿರಿಯೂರು ಶಾಸಕಿ ಪೂರ್ಣಿಮಾ ಮಾತನಾಡಿ,ಕಳೆದ ತಿಂಗಳು ನವದೆಹಲಿಗೆ ತೆರಳಿದ್ದ ಸಮಾಜದ ನಿಯೋಗಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹಕಾರದಿಂದ ಕೇಂದ್ರ ಸರ್ಕಾರದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಈ ವಿಷಯದಲ್ಲಿ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದರೆ ಸಾಲದು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದರು. ಸ್ವಾತಂತ್ರ್ಯ ವೀರ ಸಾವರ್ಕರ್‌ (Veer Savarkar) ಭಾವಚಿತ್ರವನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಮತ್ತೆ ಅಳವಡಿಸಲಾಗಿದೆ.ವಿಧಾನಸಭೆ ಸಭಾಂಗಣದಲ್ಲಿ ಕೆಲ ದಿನಗಳ ಹಿಂದಷ್ಟೇ ವೀರ ಸಾವರ್ಕರ್ ಸೇರಿ ಮಹನೀಯರ ಫೋಟೊ ಅಳವಡಿಸಲಾಗಿತ್ತು. ಇದೀಗ ಹಿಂಡಲಗಾ ಜೈಲಿನಲ್ಲೂ ವೀರ ಸಾವರ್ಕರ್ ಫೋಟೊವನ್ನೂ ಅಳವಡಿಸಲಾಯಿತು.ವೀರಸಾವರ್ಕರ್‌ಗೂ ಹಿಂಡಲಗಾ ಜೈಲಿಗೂ ನಂಟಿದೆ. ವೀರಸಾವರ್ಕರ್ 1950ರ ಏಪ್ರಿಲ್ 4ರಂದು ಬೆಳಗಾವಿಯ ಹಿಂಡಲಗಾ ಜೈಲು ಸೇರಿದ್ದರು. ವೀಚಾರಣಾಧೀನ ಕೈದಿಯಾಗಿ ಸಾವರ್ಕರ್ 100 ದಿನ ಜೈಲಿನಲ್ಲಿ ಕಳೆದಿದ್ದಾರೆ. ಪಾಕಿಸ್ತಾನ ಪ್ರಧಾನಿ ಲಿಯಾಕತ್ ಅಲಿ ಖಾನ್ ಭಾರತ ಭೇಟಿ‌ಯನ್ನು ಸಾವರ್ಕರ್ ವಿರೋಧಿಸಿದ್ದರು. ಈ ವೇಳೆ ಸಾವರ್ಕರ್ ಅವರನ್ನು ಬಂಧಿಸಿ ಪೊಲೀಸರು ಬೆಳಗಾವಿ ಜೈಲಿಗೆ ಕಳುಹಿಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

50 ಲಕ್ಷ ಮನೆಗಳ ಮೇಲೆ ಹಾರಾಡಲಿದೆ ಬಿಜೆಪಿ ಧ್ವಜ

Fri Dec 30 , 2022
ರಾಜ್ಯ ಬಿಜೆಪಿ ವತಿಯಿಂದ ಜನವರಿ 2 ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ವನ್ನು ಆಯೋಜಿಸಲಾಗಿದ್ದು, ರಾಜ್ಯದ ಸುಮಾರು 50 ಲಕ್ಷ ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಾಡಲಿದೆ.ಬೆಳಗಾವಿ ಸುವರ್ಣ ಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, 58,156 ಬೂತ್‍ಗಳು, 11,642 ಶಕ್ತಿ ಕೇಂದ್ರಗಳು, 1,445 ಮಹಾ ಶಕ್ತಿ ಕೇಂದ್ರಗಳು, 312 ಮಂಡಲಗಳು, 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ […]

Advertisement

Wordpress Social Share Plugin powered by Ultimatelysocial