ಜನವರಿ ಸೆಶನ್ ಪ್ರವೇಶಾತಿಗೆ ಮರುನೊಂದಣಿ ಅವಧಿ ಡಿ.31ರ ವರೆಗೆ ವಿಸ್ತರಣೆ

IGNOU Admission 2022 : ಜನವರಿ ಸೆಶನ್ ಪ್ರವೇಶಾತಿಗೆ ಮರುನೊಂದಣಿ ಅವಧಿ ಡಿ.31ರ ವರೆಗೆ ವಿಸ್ತರಣೆ

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ 2022ರ ಜನವರಿ ಸೆಶನ್ ಪ್ರವೇಶಾತಿಗೆ ಮರುನೊಂದಣಿ ಪ್ರಕ್ರಿಯೆ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಗ್ನೋ ದಲ್ಲಿ ಪದವಿ,ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ ಮತ್ತು ಪಿಜಿ ಸರ್ಟಿಫಿಕೇಟ್ ಕೋರ್ಸ್ ಗಳು ಲಭ್ಯವಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ.

ಪ್ರತಿ ವರ್ಷವು ಇಗ್ನೋ ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತಿಳಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಗ್ನೋದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಸಲ್ಲಿಸಿದ ಬಳಿಕ ಇಗ್ನೋ ಎಲ್ಲಾ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತದೆ. ತದನಂತರ ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ಬಿಡುಗಡೆ ಮಾಡುತ್ತದೆ.

ಈಗಾಗಲೇ ಇಗ್ನೋದಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಮುಂದಿನ ಸೆಮಿಸ್ಟರ್ ಅಥವಾ ಮುಂದಿನ ವರ್ಷಕ್ಕೆ ಮರುನೊಂದಣಿಯನ್ನು ಮಾಡಿಕೊಳ್ಳಬಹುದು ಮತ್ತು ಆನ್‌ಲೈನ್ ಮೂಲಕ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ವಿಶ್ವವಿದ್ಯಾನಿಲಯವು ವಿವಿಧ ವಿಭಾಗಗಳಲ್ಲಿ 200ಕ್ಕೂ ಹೆಚ್ಚು ಕೋರ್ಸ್ ಗಳನ್ನು ನೀಡುತ್ತಿದೆ. ಈ ಕೋರ್ಸ್ ಗಳಲ್ಲಿ ಪದವಿಗಳು, ಸ್ನಾತಕೋತ್ತರ ಪದವಿಗಳು, ಪಿಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ, ಪಿಜಿ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಮತ್ತು ಜಾಗೃತಿ ಮಟ್ಟದ ಕೋರ್ಸ್ ಗಳು ಸೇರಿವೆ. ಕೋರ್ಸ್ ಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ignouadmission.samarth.edu.in ವೆಬ್‌ಸೈಟ್ ಗೆ ಭೇಟಿ ನೀಡಬಹುದು.

ಆನ್‌ಲೈನ್ ಕೋರ್ಸ್‌ಗಳು :

ಆಸಕ್ತ ಅಭ್ಯರ್ಥಿಗಳು ಇಗ್ನೊ ಆನ್‌ಲೈನ್ ಪೋರ್ಟಲ್ iop.ignouonline.ac.in ಮೂಲಕ ಅಥವಾ ಸಮರ್ಥ ಪೋರ್ಟಲ್ ಮೂಲಕ ಈ ಆನ್‌ಲೈನ್ ಕಾರ್ಯಕ್ರಮಗಳಿಗಾಗಿ ignouiop.samarth.edu.in ನಲ್ಲಿ ನೋಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2021

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://ignou.ac.in/?utm_source=DH-MoreFromPub&utm_medium=DH-app&utm_campaign=DH

Please follow and like us:

Leave a Reply

Your email address will not be published. Required fields are marked *

Next Post

Central railway recruitment: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Fri Dec 17 , 2021
ನವದೆಹಲಿ:ಸೆಂಟ್ರಲ್ ರೈಲ್ವೇ, ರೈಲ್ವೇ ನೇಮಕಾತಿ ಕೋಶವು ಕ್ರೀಡಾ ಕೋಟಾದ ಅಡಿಯಲ್ಲಿ 5/4, 3/2 ಹಂತಗಳ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ರೈಲ್ವೇ ನೇಮಕಾತಿ ಕೋಶವು ಈ ನೇಮಕಾತಿ ಅಭಿಯಾನದ ಮೂಲಕ ಸಂಸ್ಥೆಯಲ್ಲಿ 21 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು rrccr.com ನಲ್ಲಿ RRC CR ನ ಅಧಿಕೃತ ಸೈಟ್ ಮೂಲಕ ಪೋಸ್ಟ್‌ಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 13 ರಂದು ಪ್ರಾರಂಭವಾಗುತ್ತದೆ ಮತ್ತು […]

Advertisement

Wordpress Social Share Plugin powered by Ultimatelysocial