ನಂಜನಗೂಡಿನಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ ತೆನೆಯಿಳಿಸಿ ಕೈ ಕುಲುಕಿದ ನೂರಾರು ಜೆಡಿಎಸ್ ಮುಖಂಡರು.

ಜೆಡಿಎಸ್ ನ ಹಿರಿಯ ಮುಖಂಡರೂ, ಪುರಸಭೆ ಮಾಜಿ ಅಧ್ಯಕ್ಷರೂ ಹಾಗೂ ಹಾಲಿ ಜೆಡಿಎಸ್ ಜಿಲ್ಲಾಧ್ಯಕ್ಷರ ಸಹೋದರ ಎನ್ ಶ್ರೀನಿವಾಸ್ ಅವರೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಪ್ರಮುಖರು.
ಅವರ ನೇತೃತ್ವದಲ್ಲಿ ಜೆಡಿಎಸ್ ನ ನೂರಾರು ಕಾರ್ಯಕರ್ತ ಮುಖಂಡರು ಹಾಗೂ ಅವರ ಅಭಿಮಾನಿಗಳು ಸ್ನೇಹಿತರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಕೆಪಿಸಿಸಿ ಕಾರ್ಯಾಧ್ಯಕ್ಷ ರು ಹಾಗೂ ನಂಜನಗೂಡಿನ ಕಾಂಗ್ರೆಸ್ ಅಭ್ಯರ್ಥಿ ಎಂದೇ ಬಿಂಬಿತರಾಗಿರುವ ಆರ್ ಧ್ರುವನಾರಾಯಣ್ ಸಮ್ಮುಖದಲ್ಲಿ ಸೇರ್ಪಡೆಗೊಂಡ ಜೆಡಿಎಸ್ ಮುಖಂಡರು.
ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರುಗಳಿಗೆ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಪಕ್ಷದ ಶಲ್ಯ ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತಿಸಿ ಬರಮಾಡಿಕೊಂಡರು.
ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಪ್ರಮುಖರಾದ ಶ್ರೀನಿವಾಸ್ ಅವರ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮ.
ಕಾರ್ಯಕ್ರಮಕ್ಕೆ ಬಂದ ಧ್ರುವನಾರಾಯಣ್ ಅವರನ್ನು ಜೆಡಿಎಸ್ ಮುಖಂಡರು ಪಟಾಕಿ ಸಿಡಿಸಿ ಮಾಲಾರ್ಪಣೆ ಮಾಡಿ ಸಂಭ್ರಮದಿಂದ ಬರಮಾಡಿಕೊಂಡರು.
ಬಳಿಕ ದ್ರುವನಾರಾಯಣ್ ಮಾತನಾಡಿ ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಜೆಡಿಎಸ್ ಪಕ್ಷದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಇದರಿಂದ ನಂಜನಗೂಡಿನಲ್ಲಿ ನಮ್ಮ ಪಕ್ಷಕ್ಕೆ ಬಲ ಬಂದಂತಾಗಿದೆ ಮುಂದೆ ಬಿಜೆಪಿ ಹಾಗೂ ಜೆಡಿಎಸ್ ನ ಇನ್ನು ಹಲವಾರು ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಮುಖಂಡ ಶ್ರೀನಿವಾಸ್ ಮಾತನಾಡಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಇಂದು ಕಾಂಗ್ರೆಸ್ ನಾಯಕರಾದ ದ್ರುವನಾರಾಯಣ ಅವರ ಸಮ್ಮುಖದಲ್ಲಿ ನಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಇಲ್ಲಿ ಧ್ರುವನಾರಾಯಣ ಅವರೇ ಅಭ್ಯರ್ಥಿಯಾಗುತ್ತಾರೆ ಅವರನ್ನು ಗೆಲ್ಲಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್, ಶ್ರೀಕಂಠ ನಾಯಕ, ಹಾಡ್ಯ ರಂಗಸ್ವಾಮಿ ಮುಖಂಡರಾದ ಮಂಜುನಾಥ್ ಶ್ರೀಧರ್ ನಗರಸಭೆ ಸದಸ್ಯರಾದ ಶ್ವೇತ ಲಕ್ಷ್ಮಿ ಸತೀಶ್ ಗೌಡ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಮೈಸೂರು ಜಿಲ್ಲೆ ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ.

Sat Jan 7 , 2023
ಕೈ ಕೈ ಮಿಲಾಯಿಸುವ ಅಂತಕ್ಕೆ ತಲುಪಿದ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಭೂಮಿಪೂಜೆ ಸಂದರ್ಭ. ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕಿರಗಸೂರು,ಗರ್ಗೇಶ್ವರಿ ಗ್ರಾಮಗಳಲ್ಲಿ ನಡೆದ ಕಾರ್ಯಕ್ರಮ. 1.50ಕೋಟಿ ವೆಚ್ಚದ ಲ್ಯಾಂಡ್ ಆರ್ಮಿ ಇಲಾಖೆಯ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿಪೂಜೆ. ಶಾಸಕರು ಕಿರುಗಸೂರು ಗ್ರಾಮದಲ್ಲಿ ಗುದ್ದಲಿ ಪೂಜೆ ಮಾಡುವ ವೇಳೆ ಕೈ ಕಾರ್ಯಕರ್ತರು ಪರಸ್ಪರ ಕಿತ್ತಾಡಿಕೊಂಡು ಕೈ ಕೈ ಮಿಲಾಯಿಸುವ ಘಟನೆ ನಡೆಯಿತು […]

Advertisement

Wordpress Social Share Plugin powered by Ultimatelysocial