ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರ ಹೆಸರು ಇಡುವಂತೆ ಜೆಡಿಎಸ್ ನಾಯಕ ಟಿ.ಎ.ಶರವಣ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರ ಹೆಸರು ಇಡುವಂತೆ ಜೆಡಿಎಸ್ ನಾಯಕ ಟಿ.ಎ.ಶರವಣ ಒತ್ತಾಯಿಸಿದ್ದಾರೆ. ಈ ಹೆದ್ದಾರಿಯ ವೀಕ್ಷಣೆ ಮತ್ತು ವೈಮಾನಿಕ ಸಮೀಕ್ಷೆ ಮಾಡಲು ಇಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ರಾಜ್ಯಕ್ಕೆ ಬಂದಿದ್ದಾರೆ.ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಿಗೆ ಮನವಿ ಮಾಡಿಕೊಂಡಿರುವ ಶರವಣ.. ಈ ಭಾಗದ ಜನರ ಭಾವನೆಗಳನ್ನು ನೀವು ಅರ್ಥ ಮಾಡಿಕೊಂಡಿದ್ದೆ ಆದರೆ, ಈ ಮಹಾರಸ್ತೆಗೆ ಮಾಜಿ ಪ್ರಧಾನಿ, ಕರ್ನಾಟಕದ ಸಾಕ್ಷಿ ಪ್ರಜ್ಞೆ ಮಾಜಿ ಪ್ರಧಾನಿ ದೇವೇಗೌಡರ ಹೆಸರಿಡಿ ಎಂದು ಅವರು ಆಗ್ರಹಿಸಿದ್ದಾರೆ.ಈ ರಸ್ತೆ ಹಾದು ಹೋಗುವ ಉದ್ದಗಲಕ್ಕೂ ಇರುವ ಮಣ್ಣಿನ ಕಣಕಣದಲ್ಲೂ ರೈತರ ಬೆವರ ಹನಿ ಶ್ರಮದಲ್ಲಿ ದೇವೇಗೌಡರ ಹೆಸರು ಅಭಿಮಾನದಿಂದ ರಾರಾಜಿಸುತ್ತಿದೆ. ದೇವೇಗೌಡರು ಈ ನೆಲದ ಸಾರ್ವಭೌಮ ರಾಜಕಾರಣಿ ಮತ್ತು ಅಜಾತ ಶತ್ರು ಆಗಿದ್ದಾರೆ. ಇದನ್ನು ಮನಗಂಡು ನಾಯಕರ ಹೆಸರಿಗೆ ಗೌರವಿಸುವ ದೃಷ್ಟಿಯಿಂದ ದಶಪಥ ರಸ್ತೆಗೆ ಅವರ ಹೆಸರಿಡುವುದು ಸೂಕ್ತ ಎಂದು ಶರವಣ ವಿನಂತಿಸಿದ್ದಾರೆ.ಕನ್ನಡ ನಾಡಿನ ನೆಲ ಜಲಕ್ಕೆ, ಇಲ್ಲಿಯ ಹಕ್ಕುಗಳಿಗೆ, ನಾಡಿನ ಅಸ್ಮಿತೆಗೆ ದೇವೇಗೌಡರ ಕೊಡುಗೆ ಅಭೂತಪೂರ್ವ. ನಾಡಿನ ಜೀವ ನದಿಗಳಾದ ಕಾವೇರಿ ಹೋರಾಟದಿಂದ ಹಿಡಿದು, ಕೃಷ್ಣೆಯವರೆಗೂ ಅವರ ಜನಪರ ಆಂದೋಲನ ಕರ್ನಾಟಕದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ ಎಂದು ವಿಧಾನಪರಿಷತ್ ಜೆಡಿಎಸ್ ಉಪನಾ ಯಕರು, ಪಕ್ಷದ ಹಿರಿಯ ಉಪಾದ್ಯಕ್ಷ ಶರವಣ ಹೇಳಿದ್ದಾರೆ.ಪ್ರಧಾನಿಯಂತಹ ಉನ್ನತ ಹುದ್ದೆಯನ್ನು ಅಲಂಕರಿಸಿದ ಪ್ರಪ್ರಥಮ ಕನ್ನಡಿಗ ಎನ್ನುವ ಹಿರಿಮೆ ದೇವೇಗೌಡರದ್ದು. ಕರ್ನಾಟಕದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಕೊಂಡೊಯ್ದ ಹೆಮ್ಮೆ. ದಶ ಪಥ ರಸ್ತೆಗೆ ಅವರ ಹೆಸರಿಟ್ಟರೆ ಕೇಂದ್ರಕ್ಕೂ ಹೆಸರು ಬರುತ್ತದೆ ಎಂದು ಹೇಳಿದ್ದಾರೆ. ರಾಜ್ಯದ ಬಿಜೆಪಿ ಸರಕಾರ ಪಕ್ಷ ರಾಜಕಾರಣವನ್ನು ಬದಿಗಿಟ್ಟು, ಬೆಂಗಳೂರು ಮೈಸೂರು ದಶಪಥ ರಸ್ತೆಗೆ ದೇವೇಗೌಡರ ಹೆಸರು ಇಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೂ ಶರವಣ ಅರಿಕೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

Please follow and like us:

Leave a Reply

Your email address will not be published. Required fields are marked *

Next Post

ಜನಾರ್ಧನ ರೆಡ್ಡಿ ಆಸ್ತಿ ಮುಟ್ಟುಗೋಲಿಗೆ ಅನುಮತಿ ನೀಡದ ಸರ್ಕಾರ

Thu Jan 5 , 2023
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಆಸ್ತಿ ಜಪ್ತಿಗೆ ರಾಜ್ಯ ಸರಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಆಸ್ತಿ ಜಪ್ತಿಗೆ ರಾಜ್ಯ ಸರಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.ಅಕ್ರಮ ಹಣದ ಮೂಲದಿಂದ ಖರೀದಿಸಿದ್ದ ಜನಾರ್ದನ ರೆಡ್ಡಿ ಆಸ್ತಿಯನ್ನು ಜಪ್ತಿ ಮಾಡಿ ಎಂದು […]

Advertisement

Wordpress Social Share Plugin powered by Ultimatelysocial