‘ಜೇಮ್ಸ್’ ಜತೆ ‘ಬೈರಾಗಿ’ ಟೀಸರ್

ಪುನೀತ್ ಹುಟ್ಟುಹಬ್ಬಕ್ಕೆ ಶಿವಣ್ಣನ ಝಲಕ್

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಟೀಸರ್ ಪುನೀತ್ ರಾಜ್’ಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಬಿಡುಗಡೆ ಮಾಡಲು ‘ಬೈರಾಗಿ’ ತಂಡ ತೀರ್ಮಾನಿಸಿದೆ. ‘ಜೇಮ್ಸ್‌’ ಬಿಡುಗಡೆಯಾಗುವ ಎಲ್ಲಾ ಪರದೆಗಳಲ್ಲೂ ‘ಬೈರಾಗಿ’ ದರ್ಶನವಾಗಲಿದೆ ಎಂಬುದು ವಿಶೇಷ.

ಪುನೀತ್ ಅವರ ಸವಿನೆನಪಿಗಾಗಿ ಈ ಟೀಸರ್ ರಿಲೀಸ್ ಮಾಡುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ. ‘ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನಮ್ಮ ತಂಡದ ಜತೆ ಅಪ್ಪು ಒಡನಾಟವಿದೆ. ಹೀಗಾಗಿ ಅವರ ಹುಟ್ಟುಹಬ್ಬದ ಉಡುಗೊರೆಯಾಗಿ ‘ಬೈರಾಗಿ’ ಟೀಸರ್ ಬಿಡುಗಡೆ ಮಾಡುತ್ತಿದ್ದೇವೆ. ಇದು ಪುನೀತ್ ಹಾಗೂ ಶಿವಣ್ಣನ ಅಭಿಮಾನಿಗಳಿಗೆ ಸಂತಸದ ವಿಷಯ’ ಎಂಬಿದು ಚಿತ್ರತಂಡದ ಅನಿಸಿಕೆ.

ವಿಜಯ್ ಮಿಲ್ಟನ್‌ ನಿರ್ದೇಶನವಿರುವ ಈ ಚಿತ್ರಕ್ಕೆ ಕೃಷ್ಣ ಸಾರ್ಥಕ ‘ಕೃಷ್ಣ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ‘ಟಗರು’ ಬಳಿಕ ‘ಡಾಲಿ’ ಧನಂಜಯ್ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಜತೆ ನಟಿಸಿದ್ದಾರೆ. ಹಿರಿಯ ನಟ ಶಶಿಕುಮಾರ್, ಅಂಜಲಿ, ಯಶ ಶಿವಕುಮಾರ್ ಸೇರಿದಂತೆ ದೊಡ್ಡ ತಾರಾಬಳಗವೇ ಕೂಡಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಗುರು ಕಶ್ಯಪ್ ಸಂಭಾಷಣೆ ಬರೆದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

2040 ರ ವೇಳೆಗೆ ಬೆಂಗಳೂರಿಗೆ 4 ತದ್ರೂಪುಗಳ ಅಗತ್ಯವಿದೆ ಎಂದು ಹೇಳಿದ್ದ, ಸಿಎಂ ಬಸವರಾಜ ಬೊಮ್ಮಾಯಿ!

Sun Mar 13 , 2022
ಭವಿಷ್ಯದ ಯೋಜನೆಗಾಗಿ ಕರ್ನಾಟಕವು ಆರು ಹೊಸ ನಗರಗಳನ್ನು ಸಮಗ್ರ ಟೌನ್‌ಶಿಪ್‌ಗಳ ರೂಪದಲ್ಲಿ ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದರು. ಸರ್ಕಾರಿ ಭೂಮಿಯಲ್ಲಿ ರಾಜ್ಯದಲ್ಲಿ ಆರು ಹೊಸ ನಗರಗಳನ್ನು ನಿರ್ಮಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದರು. “ಪ್ರಾದೇಶಿಕ ಮಟ್ಟದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗಳನ್ನು ನಿರ್ಮಿಸಲಾಗುವುದು. ನಾವು ಈ ಆರು ನಗರಗಳನ್ನು ಯೋಜಿಸಿದಾಗ, ಸಮಾನಾಂತರವಾಗಿ, ಅವು ಬೆಂಗಳೂರಿಗೆ ನಾಲ್ಕು ಹೊಸ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆಗಳಿಗೆ (STRR) ಉತ್ತಮವಾಗಿರುತ್ತವೆ.” ಬೆಂಗಳೂರು ನಗರ ಅಭಿವೃದ್ಧಿ […]

Advertisement

Wordpress Social Share Plugin powered by Ultimatelysocial