ಡಿ.27: ಕಚ್ಚಾ ತೈಲ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ಇಂಧನ ದರವೆಷ್ಟು?

ಡಿ.27: ಕಚ್ಚಾ ತೈಲ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ಇಂಧನ ದರವೆಷ್ಟು?

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಡಿಸೆಂಬರ್ 27, ಸೋಮವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಒಂದೂವರೆ ತಿಂಗಳು ಇಂಧನ ದರ ಸ್ಥಿರವಾಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾತೈಲದ ಬೆಲೆ ಏರಿಳಿತವಾಗುತ್ತಿದೆ.

ಕಳೆದ ತಿಂಗಳ ದೀಪಾವಳಿ ಹಬ್ಬದ ವೇಳೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ ಬಳಿಕ ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿತ್ತು.

ಆದರೆ ಕೆಲ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಅನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ. ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸೋಮವಾರದಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲೂ ತೆರಿಗೆ ತಗ್ಗಿಸಲಾಗಿದೆ. ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ ಬಜೆಟ್ ವೇಳೆ ತಗ್ಗಿಸಿರುವುದರಿಂದ ಮತ್ತೊಮ್ಮೆ ವ್ಯಾಟ್ ತಗ್ಗಿಸುವುದಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸುಳ್ಳು ದಾಖಲೆ ನೀಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 4.13 ಲಕ್ಷ ಪಡಿತರ ಚೀಟಿ ರದ್ದು

Mon Dec 27 , 2021
ಬೆಂಗಳೂರು: ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಿದೆ. ಒಂದೇ ವರ್ಷದಲ್ಲಿ 4.13 ಲಕ್ಷ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಅಕ್ರಮವಾಗಿ ಪಡಿತರ ಚೀಟಿ ಪಡೆದವರನ್ನು ಪತ್ತೆ ಮಾಡಿದ ಆಹಾರ ಇಲಾಖೆ ಕ್ರಮ ಕೈಗೊಂಡಿದೆ. ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾಗಿ ಮೃತಪಟ್ಟಿರುವ 5.25 ಲಕ್ಷ ಸದಸ್ಯರ ಹೆಸರುಗಳನ್ನು ಪಡಿತರ ಚೀಟಿಯಿಂದ ಕೈಬಿಡಲಾಗಿದೆ. ಅನರ್ಹರು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ […]

Advertisement

Wordpress Social Share Plugin powered by Ultimatelysocial