ಭರ್ಜರಿ ಸಿಹಿಸುದ್ದಿ:

ಭಾರತದ ನಂ.1 ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಕರ್ನಾಟಕದಲ್ಲಿ ಮತ್ತೆ ನಾಲ್ಕು ನಗರಗಳಲ್ಲಿ ‘ಜಿಯೋ ಟ್ರೂ 5ಜಿ’ ಸೇವೆಗಳನ್ನು ಆರಂಭಿಸುವ ಮೂಲಕ ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ನಂತರ ಇತ್ತೀಚಿಗಷ್ಟೇ ಮೈಸೂರಿನಲ್ಲಿಯೂ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದ್ದ ಜಿಯೋ ಇದೀಗ ರಾಜ್ಯದ ಪ್ರಮುಖ ನಗರಗಳಾದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರಿನಲ್ಲಿ 5ಜಿ ಸೇವೆಗಳನ್ನು ಆರಂಭಿಸಿರುವುದಾಗಿ ತಿಳಿಸಿದೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರಿನ ಗ್ರಾಹಕರು ಇಂದಿನಿಂದ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಬಳಸಬಹುದು. 2023ರ ಪ್ರಾರಂಭದೊಂದಿಗೆ ಜಿಯೋ ಟ್ರೂ 5ಜಿ ತಂತ್ರಜ್ಞಾನವನ್ನು ಆನಂದಿಸಬಹುದು ಎಂದು ಜಿಯೋ ಸಂಸ್ಥೆ ಹೇಳಿದೆ.ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ, ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಪಡೆಯುತ್ತಾರಷ್ಟೇ ಅಲ್ಲದೇ, ಜತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಎಸ್ಎಂಇಗಳು ಅನಂತ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತವೆ. ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ ನಗರದಲ್ಲಿ 5ಜಿ ಹೊರತರಲು ನಾವು ಹೆಮ್ಮೆಪಡುತ್ತೇವೆ. 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದ ನಂತರ ನಮ್ಮ ಅತಿದೊಡ್ಡ ಅನಾವರಣದಲ್ಲಿ ಇದೂ ಒಂದಾಗಿದೆ ಎಂದು ಜಿಯೋ ವಕ್ತಾರರು ಹೇಳಿದ್ದಾರೆ.

5G ಸಪೋರ್ಟ್ ಹೊಂದಿರುವ ಸ್ಮಾರ್ಟ್‌ಫೋನಿನಲ್ಲಿ 5G ನೆಟ್‌ವರ್ಕ್ ಸೆಟ್ಟಿಂಗ್ ಸಕ್ರೀಯವಾಗಿರುವ ಎಲ್ಲಾ ಜಿಯೋ ಪ್ರೀಪೇಡ್ ಮತ್ತು ಪೋಸ್ಟ್‌ಪೇಡ್ ಗ್ರಾಹಕರಿಗೆ (ಪ್ರಸ್ತುತ ಕನಿಷ್ಠ 239 ರೂ. ರೀಚಾರ್ಜ್ ಯೋಜನೆಗೆ ಚಂದಾದಾರರಾಗಿದ್ದರೆ) ಅನಿಯಮಿತ 5G ಡೇಟಾ ದೊರೆಯುತ್ತದೆ ಎಂದು ಜಿಯೋ ತಿಳಿಸಿದೆ. ಇದಕ್ಕಾಗಿ 5G ಸ್ಮಾರ್ಟ್‌ಫೋನ್ ಹೊಂದಿರುವ ಜಿಯೋ ಗ್ರಾಹಕರು 5G ನೆಟ್‌ವರ್ಕ್ ಸೆಟ್ಟಿಂಗ್ ಅನ್ನು ಸಕ್ರೀಯಗೊಳಿಸಲು ಕೋರಲಾಗಿದೆ. ಜಿಯೋ 5ಜಿ ಸೇವೆಯಲ್ಲಿ ಜಿಯೋ ಬಳಕೆದಾರರು ತಮ್ಮ ಜೊತೆ ಇರುವ ಸಿಮ್ ಕಾರ್ಡ್ ಅನ್ನು ಬದಲಿಸಿ 5ಜಿ ನೆಟ್‌ವರ್ಕ್ ಬಳಸಬಹುದು. ಆದರೆ, 5ಜಿ ಸೇವೆಯನ್ನು ಸ್ವಯಂಚಾಲಿತವಾಗಿ ಪಡೆಯಲು ಸಾಧ್ಯವಿಲ್ಲ. ಇದಕ್ಕಾಗಿ ನೀವು ನಿಮ್ಮ 5G ಸ್ಮಾರ್ಟ್‌ಫೋನಿನ ಸಾಫ್ಟ್‌ವೇರ್ ಅನ್ನು ಅಪ್‌ಡೇಟ್ ಮಾಡಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾಲ ತೀರಿಸಲು ಕ್ಷೇತ್ರ ಬಿಟ್ಟುಕೊಟ್ರಾ ಶಾಸಕ ಶ್ರೀನಿವಾಸಗೌಡ ? ಸಿದ್ದರಾಮಯ್ಯಗೆ ಕೋಲಾರ ಕ್ಷೇತ್ರ ಬಿಟ್ಟುಕೊಟ್ಟ ಗುಟ್ಟು ಬಹಿರಂಗ

Wed Jan 11 , 2023
ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದರ ಹಿಂದಿನ ಗುಟ್ಟು ಬಯಲಾಗಿದೆ. ಸಾಲ ತೀರಿಸಲು ಶಾಸಕ ಶ್ರೀನೀವಾಸ ಗೌಡ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ.ಶಾಸಕ ಶ್ರೀನಿವಾಸ್ ಗೌಡ ಹಾಗೂ ಮುಖಂಡರೊಬ್ಬರ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿದೆ. ಈ ಹಿಂದೆ ಜೆಡಿಎಸ್ ನಿಂದ ಉಚ್ಛಾಟನೆಗೊಂಡಿದ್ದ ಶ್ರೀನಿವಾಸ್ ಗೌಡ, ಕಳೆದ ಚುನಾವಣೆಯಲ್ಲಿ 17 ಕೋಟಿ ರೂಪಾಯಿ ಸಾಲ ಮಾಡಿದ್ದೆ. ಈ ಸಾಲ ತೀರಿಸಲು ಸೀಟು ಬಿಟ್ಟುಕೊಟ್ಟಿದ್ದೇನೆ […]

Advertisement

Wordpress Social Share Plugin powered by Ultimatelysocial