ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ಬಿಗ್‌ ಅಫರ್‌ ನೀಡಿದ ಜಿಯೋ!

ದೇಶದ ಟೆಲಿಕಾಂ ದಿಗ್ಗಜ ಎನಿಸಿಕೊಂಡಿರುವ ಜಿಯೋ ಟೆಲಿಕಾಂ ತನ್ನ ಗ್ರಾಹಕರಿಗೆ ಗುಡ್‌ ನ್ಯೂಸ್‌ ನೀಡಿದೆ. ಇತ್ತೀಚಿಗಷ್ಟೇ ತನ್ನ ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಏರಿಕೆ ಮಾಡಿ ಶಾಕ್‌ ನೀಡಿದ್ದ ಜಿಯೋ ಇದೀಗ ನ್ಯೂ ಇಯರ್‌ ಆಫರ್‌ ಪರಿಚಯಿಸಿದೆ. ಸದ್ಯ 2021ಕ್ಕೆ ಬಾಯ್‌ ಹೇಳಿ 2022ಕ್ಕೆ ಕಾಲಿಡುವುದಕ್ಕೆ ದಿನಗಣನೆ ಶುರುವಾಗಿದೆ.

ಈ ಸಮಯದಲ್ಲಿ ಜಿಯೋ ತನ್ನ ದೀರ್ಘಾವಧಿ ಪ್ರಿಪೇಯ್ಡ್‌ ಪ್ಲಾನ್‌ನಲ್ಲಿ ಹೊಸ ಆಫರ್‌ ನೀಡಿದೆ. ಹೊಸ ವರ್ಷದ ಸಮಯದಲ್ಲಿ ಈ ಆಫರ್‌ ಪಡೆದುಕೊಂಡವರಿಗೆ ಹೆಚ್ಚುವರಿ ವ್ಯಾಲಿಡಿಟಿ ನೀಡುವುದಾಗಿ ಪ್ರಕಟಿಸಿದೆ.

ಜಿಯೋ
 ಹೌದು, ಜಿಯೋ ಟೆಲಿಕಾಂ ನ್ಯೂ ಇಯರ್‌ ಪ್ರಯುಕ್ತ ಹೊಸ ಆಫರ್‌ ಘೋಷಣೆ ಮಾಡಿದೆ. ಇದು ಜಿಯೋ ಟೆಲಿಕಾಂನ 2,545ರೂ. ಪ್ರಿಪೇಯ್ಡ್ ಪ್ಲಾನ್‌ಗೆ ಸೀಮಿತವಾಗಿದೆ. 336 ದಿನಗಳ ವ್ಯಾಲಿಡಿಟಿ ಹೊಂದಿರುವ ಈ ಪ್ಲಾನ್‌ ಹೊಸವರ್ಷದ ಪ್ರಯುಕ್ತ 29 ದಿನಗಳ ಹೆಚ್ಚುವರಿ ಮಾನ್ಯತೆಯನ್ನು ನೀಡಲಿದೆ. ಇದರರ್ಥ ಜಿಯೋ 2,545ರೂ. ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್‌ ಈಗ 365 ದಿನಗಳ ವ್ಯಾಲಿಡಿಟಿ ನೀಡಲಿದೆ. ಹಾಗಾದ್ರೆ ಜಿಯೋ 2,545ರೂ. ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಜಿಯೋ 2,545ರೂ. ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್‌

ಜಿಯೋ ಟೆಲಿಕಾಂ 2,545ರೂ. ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್‌ ಅನಿಯಮಿತ ಧ್ವನಿ ಕರೆಗಳು, ದೈನಂದಿನ 100 SMS, ಹಾಗೂ ದೈನಂದಿನ 1.5GB ಡೇಟಾ ಪ್ರಯೋಜನ ನೀಡಲಿದೆ. ಇದು 336 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಹೊಸ ವಷ್ದ ಆಫರ್‌ನಲ್ಲಿ 29 ದಿನಗಳ ಹೆಚ್ಚುವರಿ ಮಾನ್ಯತೆಯನ್ನು ನೀಡುತ್ತಿದೆ. ಇದರಿಂದ ಈ ಪ್ಲಾನ್‌ ಇದೀಗ ಒಟ್ಟು 365 ದಿನಗಳವರೆಗೆ ವ್ಯಾಲಿಡಿಟಿಯನ್ನು ಪಡೆದುಕೊಂಡಿದೆ. ಸದ್ಯ ಈ ಆಫರ್ ಜಿಯೋ ವೆಬ್‌ಸೈಟ್ ಮತ್ತು ಮೈಜಿಯೋ ಅಪ್ಲಿಕೇಶನ್‌ನಲ್ಲಿ ಲಭ್ಯವಿದೆ. ಆದರೆ ಈ ಆಫರ್ ಜನವರಿ 2, 2022 ರಂದು ಮುಕ್ತಾಯಗೊಳ್ಳುತ್ತದೆ. ಇನ್ನು ಈ ಪ್ಲಾನ್‌ ಜಿಯೋಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ ಮತ್ತು ಜಿಯೋ ಕ್ಲೌಡ್‌ನ ಚಂದಾದಾರಿಕೆಗಳನ್ನು ಒದಗಿಸುತ್ತದೆ.

ಜಿಯೋದ 3119ರೂ. ಪ್ರಿಪೇಯ್ಡ್ ಪ್ಲಾನ್‌

ಜಿಯೋದ ಈ ಪ್ಲಾನ್‌ ವಾರ್ಷಿಕ ಯೋಜನೆಯಾಗಿದ್ದು, 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಪ್ಲಾನ್‌ನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಅನಿಯಮಿತ ಫ್ರೀ ವಾಯಿಸ್‌ ಕಾಲ್‌ ಪ್ರಯೋಜನ ದೊರೆಯಲಿದೆ. ಪ್ರತಿದಿನ 100 SMS ಮತ್ತು Jio ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ನಾಯಕರ ಬಾಯಿಗೆ ಬೀಗ ಹಾಕುವಂತೆ ಅರುಣ್ ಸಿಂಗ್ ಸೂಚನೆ

Sun Dec 26 , 2021
ಬೆಂಗಳೂರು,ಡಿ.26-ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನಾರಚನೆ ಸೇರಿದಂತೆ ಸರ್ಕಾರ ಮತ್ತು ಪಕ್ಷದ ಯಾವುದೇ ಬೆಳವಣಿಗೆಗಳ ಬಗ್ಗೆ ಸಚಿವರು ಇಲ್ಲವೇ ಶಾಸಕರು ಬಹಿರಂಗ ಹೇಳಿಕೆ ನೀಡದಂತೆ ಕಡಿವಾಣ ಹಾಕಬೇಕೆಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಬಿಜೆಪಿಗೆ ಸೂಚನೆ ನೀಡಿದ್ದಾರೆ.   ಇತ್ತೀಚೆಗೆ ಸಚಿವ ಮುರುಗೇಶ್ ನಿರಾಣಿ, ಕೆ.ಎಸ್.ಈಶ್ವರಪ್ಪ ಪ್ರತ್ಯೇಕವಾಗಿ ಸಭೆ ಸೇರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವ ಸಂಕ್ರಾಂತಿ ನಂತರ ಬದಲಾವಣೆಯಾಗಲಿದೆ ಎಂದು ಹೇಳಿಕೆ ನೀಡಿದ್ದರ ಬೆನ್ನಲ್ಲೇ ಕೇಂದ್ರ […]

Advertisement

Wordpress Social Share Plugin powered by Ultimatelysocial