CRICKET:ಭಾರತ vs ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯ;

ಇತ್ತೀಚೆಗಷ್ಟೇ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಹರಿಣಗಳ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಸೆಣಸಾಟ ನಡೆಸಿದ್ದ ಟೀಮ್ ಇಂಡಿಯಾ ಎರಡೂ ಸರಣಿಗಳಲ್ಲಿಯೂ ಕೂಡ ಹೀನಾಯವಾಗಿ ಸೋಲುವ ಮೂಲಕ ಮುಖಭಂಗಕ್ಕೆ ಒಳಗಾಗಿತ್ತು. ಹೀಗೆ ಆಫ್ರಿಕಾ ನೆಲದಲ್ಲಿ ಹೀನಾಯ ಸೋಲನ್ನು ಕಂಡಿದ್ದ ಟೀಮ್ ಇಂಡಿಯಾ ಇದೀಗ ತವರಿನಲ್ಲಿ ಕೆರಿಬಿಯನ್ನರ ವಿರುದ್ಧದ ಸೀಮಿತ ಓವರ್ ಸರಣಿಗಳಲ್ಲಿ ಭಾಗವಹಿಸುತ್ತಿದೆ.

ಹೌದು, ವೆಸ್ಟ್ ಇಂಡೀಸ್ ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಸೆಣಸಾಟ ನಡೆಸಲಿದೆ. ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಿದ್ದು, ಕಳೆದ ಭಾನುವಾರದಂದು ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 43.5 ಓವರ್‌ಗಳಲ್ಲಿ 176 ರನ್‌ಗಳಿಗೆ ಆಲ್ ಔಟ್ ‌ಆಯಿತು. ಹೀಗೆ ವೆಸ್ಟ್ ಇಂಡೀಸ್ ತಂಡ ನೀಡಿದ 177 ರನ್‌ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 28 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿ 6 ವಿಕೆಟ್‍ಗಳ ಭರ್ಜರಿ ಜಯವನ್ನು ದಾಖಲಿಸಿತು. ಹೀಗೆ ಇತ್ತಂಡಗಳ ನಡುವಿನ ಮೊದಲನೇ ಏಕದಿನ ಪಂದ್ಯದಲ್ಲಿ ಜಯ ಸಾಧಿಸಿದ ಭಾರತ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ.

ಹೀಗೆ ಮೊದಲನೇ ಪಂದ್ಯದಲ್ಲಿಯೇ ಜಯ ಸಾಧಿಸುವುದರ ಮೂಲಕ ಶುಭಾರಂಭ ಮಾಡಿರುವ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು ಫೆಬ್ರವರಿ 9ರ ಬುಧವಾರದಂದು ಅದೇ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಎದುರಿಸಲಿದೆ. ಅತ್ತ ಮೊದಲನೇ ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ವೆಸ್ಟ್ ಇಂಡೀಸ್‌ ಈ ದ್ವಿತೀಯ ಏಕದಿನ ಪಂದ್ಯದಲ್ಲಿಯೂ ಸೋತರೆ ಸರಣಿಯನ್ನು ಕೈ ತಪ್ಪಿಸಿಕೊಳ್ಳಲಿದೆ. ಹೀಗಾಗಿ ದ್ವಿತೀಯ ಏಕದಿನ ಪಂದ್ಯ ವೆಸ್ಟ್ ಇಂಡೀಸ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ ಎಂದೇ ಹೇಳಬಹುದು. ಹೀಗೆ ಸಾಕಷ್ಟು ನಿರೀಕ್ಷೆಯನ್ನು ಹುಟ್ಟಿಸಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ದ್ವಿತೀಯ ಏಕದಿನ ಪಂದ್ಯದ ಪಿಚ್ ವರದಿ, ಸಂಭಾವ್ಯ ಆಡುವ ಬಳಗ ಮತ್ತು ನೇರ ಪ್ರಸಾರದ ಮಾಹಿತಿಗಳು ಈ ಕೆಳಕಂಡಂತಿವೆ.

ಪಿಚ್ ವರದಿಗುಜರಾತ್‌ನ ಅಹ್ಮದಾಬಾದ್ ನಗರದ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ಅನುಕೂಲಕರ ಎಂದೇ ಹೇಳಬಹುದು. ಕಳೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಎಚ್ಚರದಿಂದ ಆಡಿದರೆ ಬ್ಯಾಟ್ಸ್‌ಮನ್‌ಗಳು ಹೆಚ್ಚು ಸಮಯ ಕಣದಲ್ಲಿ ಉಳಿಯಬಹುದು ಎಂಬುದನ್ನು ತೋರಿಸಿಕೊಟ್ಟರು. ಹಾಗೂ ಈ ಪಿಚ್‌ನಲ್ಲಿ ನಡೆದಿರುವ ಕಳೆದ 5 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ದ್ವಿತೀಯ ಬ್ಯಾಟಿಂಗ್ ಮಾಡಿದ ತಂಡವೇ ಗೆಲುವು ಸಾಧಿಸಿದ್ದು, ಟಾಸ್ ಗೆಲ್ಲುವ ನಾಯಕರು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ.

ಸಂಭಾವ್ಯ ಆಡುವ ಬಳಗಗಳು

ಭಾರತ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ

ವೆಸ್ಟ್ ಇಂಡೀಸ್‌ ಸಂಭಾವ್ಯ ಆಡುವ ಬಳಗ: ಬ್ರಾಂಡನ್ ಕಿಂಗ್, ಶಾಯ್ ಹೋಪ್ (ವಿಕೆಟ್ ಕೀಪರ್), ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್, ಕೀರಾನ್ ಪೊಲಾರ್ಡ್ (ನಾಯಕ), ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ಅಲ್ಜಾರಿ ಜೋಸೆಫ್, ಅಕೇಲ್ ಹೋಸೇನ್, ಕೆಮರ್ ರೋಚ್

ನೇರಪ್ರಸಾರದ ಮಾಹಿತಿ

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ದ್ವಿತೀಯ ಏಕದಿನ ಪಂದ್ಯ ಫೆಬ್ರವರಿ 9ರ ಬುಧವಾರದಂದು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲೂ ಪ್ರಸಾರವಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೌನಿ ರಾಯ್ ಅವರ ಹನಿಮೂನ್ ರೀಲ್ ಸುಂದರವಾದ ಹಿಮದಿಂದ ಆವೃತವಾದ ಕಾಶ್ಮೀರವನ್ನು ಸೆರೆಹಿಡಿಯುತ್ತದೆ

Tue Feb 8 , 2022
  ನಟಿ ಮೌನಿ ರಾಯ್ ಅವರು ಜನವರಿ 27 ರಂದು ಗೋವಾದಲ್ಲಿ ಕನಸಿನ ಮದುವೆ ಸಮಾರಂಭದಲ್ಲಿ ದುಬೈ ಮೂಲದ ಉದ್ಯಮಿ ಸೂರಜ್ ನಂಬಿಯಾರ್ ಅವರೊಂದಿಗೆ ಗಂಟು ಹಾಕಿದರು. ಆಕೆಯ ಮದುವೆಯ ನಂತರ, ಗೋಲ್ಡ್ ನಟಿ ಸಾಮಾಜಿಕ ಮಾಧ್ಯಮದಲ್ಲಿ ಬಹುಕಾಂತೀಯ ಗ್ಲಿಂಪ್ಸಸ್ ಅನ್ನು ಹಂಚಿಕೊಳ್ಳುತ್ತಿದ್ದಾರೆ. ನಟಿ ಪ್ರಸ್ತುತ ಹನಿಮೂನ್‌ನಲ್ಲಿದ್ದಾರೆ ಮತ್ತು ಅವರು ಹಿಮದಿಂದ ಆವೃತವಾದ ಕಾಶ್ಮೀರವನ್ನು ತಮ್ಮ ತಾಣವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ತನ್ನ ಅಭಿಮಾನಿಗಳಿಗೆ ಚಿಕಿತ್ಸೆ ನೀಡುತ್ತಾ, ಮೌನಿ ಅವರು ಸುಂದರವಾದ […]

Advertisement

Wordpress Social Share Plugin powered by Ultimatelysocial