ಜವಾರಿ ಭಾಷೆಯ ‘ಬಯಲುಸೀಮೆ’ ಸಿನಿಮಾ ಆಡಿಯೋ ಲಾಂಚ್!

ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆಗಳ ಬಗ್ಗೆ ಕನ್ನಡದ ಪ್ರೇಕ್ಷಕರರಲ್ಲಿ ಒಂದು ವಿಶೇಷ ಪ್ರೀತಿ. ಇದೀಗ ಅದೇ ಸೊಗಡಿನ ಪಕ್ಕಾ ರಗಡ್ ಕಥಾನಕ ಹೊಂದಿರೋ ಬಯಲು ಸೀಮೆ ಸಿನಿಮಾ ಶೂಟಿಂಗ್ ಮುಗಿಸಿಕೊಂಡು, ನಿನ್ನೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆಗೆ ಮಾಡಿತು. ಇಡೀ ಸಿನಿಮಾ ತಂಡ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಅನುಭವ ಹಂಚಿಕೊಂಡರು.

ನಿರ್ದೇಶಕರು ಏನೇ ವಿಷ್ಯುವಲೈಸೇಷನ್ ಮಾಡಿದರೇ ಅದಕ್ಕೆ ನಿರ್ಮಾಪಕರ ಸಪೋರ್ಟ್ ಬಹಳ‌ ಮುಖ್ಯ. ಪ್ರತಿಯೊಬ್ಬರೂ ಈ ಸಿನಿಮಾಗೆ ಬಹಳಷ್ಟು ಶ್ರಮಿಸಿದ್ದಾರೆ. ನಾಗಾಭರಣ ಅವರ ಜೊತೆ ಆಕ್ಟ್ ಮಾಡಿರೋದು ಖುಷಿ ಕೊಟ್ಟಿದೆ ಎಂದು ಆರ್ಮುಗಂ ರವಿಶಂಕರ್ ತಮ್ಮ ಅನುಭವ ಹಂಚಿಕೊಂಡರು.ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಜಾನರಿನ ‘ಬಯಲುಸೀಮೆ’ ಸಿನಿಮಾ ನಾನಾ ಮಜಲುಗಳ, ಮೈನವಿರೇಳಿಸೋ ತಿರುವುಗಳ ಮೂಲಕ ಪ್ರೇಕ್ಷಕರನ್ನು ಬೇರೆಯದ್ದೇ ಜಗತ್ತಿಗೆ ಕೊಂಡೊಯ್ಯುವಂತೆ ಸಿನಿಮಾ ಮೂಡಿ‌ಬಂದಿದೆ.ಲಕ್ಷ್ಮಣ್ ಸಾ ಶಿಂಗ್ರಿ ನಿರ್ಮಾಣದಲ್ಲಿ ಮೂಡಿ ಬಂದಿರುವ ಬಯಲುಸೀಮೆಯನ್ನು ವರುಣ್ ಕಟ್ಟೀಮನಿ ನಿರ್ದೇಶನ ಮಾಡಿದ್ದಾರೆ. ಎಂಭತ್ತರ ದಶಕ ಮತ್ತು ಈವತ್ತಿನ ಕಾಲಮಾನದೊಂದಿಗೆ ಜುಗಲ್ಬಂದಿ ಹೊಂದಿರೋ ಈ ಕಥೆ, ಆ ಎರಡು ಕಾಲಘಟ್ಟಗಳನ್ನೂ ಉತ್ತರ ಕರ್ನಾಟಕದ ಜವಾರಿ ಶೈಲಿಯಲ್ಲಿ ಕಟ್ಟಿಕೊಟ್ಟಿದೆ. ಸಾಹೂರಾವ್ ಶಿಂಧೆ ಎಂಬ ಶ್ರೀಮಂತ ವ್ಯಕ್ತಿಯ ಸುತ್ತ ಬಯಲು ಸೀಮೆಯ ಕಥೆ ಚಲಿಸುತ್ತೆ. ಆತನ ಸುತ್ತ ಹಬ್ಬಿಕೊಳ್ಳುವ ಅಕ್ರಮ ಸಂಬಂಧ, ಅದರ ಹಿನ್ನೆಲೆಯಲ್ಲೊಂದು ಲವ್ ಸ್ಟೋರಿ ಹಾಗೂ ಅದರ ಗರ್ಭದಲ್ಲಿಯೇ ಹುಟ್ಟಿಕೊಳ್ಳೋ ರಣ ದ್ವೇಷ… ಕ್ಷಣ ಕ್ಷಣವೂ ಪ್ರೇಕ್ಷಕರನ್ನು ತುದೀ ಸೀಟಿಗೆ ತಂದು ಕೂರಿಸುವಂಥಾ ಗಟ್ಟಿ ಕಥೆಯೊಂದಿಗೆ ಚಿತ್ರತಂಡ ಪ್ರೇಕ್ಷಕರನ್ನು ಮುಖಾಮುಖಿಯಾಗೋ ಉತ್ಸಾಹದಲ್ಲಿದೆ.

ಈ ಸಿನಿಮಾದಲ್ಲಿ ಭಯ ಹುಟ್ಟಿಸೋ ಪಾತ್ರಗಳಿವೆ. ಅದಕ್ಕೆ ಮಹಾರಥ ಕಲಾವಿದರುಗಳು ಜೀವ ತುಂಬಿದ್ದಾರೆ. ಬೃಹತ್ ತಾರಾಗಣ ಹೊಂದಿರೋ ಬಯಲು ಸೀಮಿಯಲ್ಲಿ ಬಿಸಿಲ ನಾಡ ಪ್ರತಿಭೆಗಳೂ ಮಿಂಚಲು ಅಣಿಯಾಗಿದ್ದಾರೆ. ಟಿ.ಎಸ್ ನಾಗಾಭರಣ, ರವಿಶಂಕರ್, ಸಂಯುಕ್ತ ಹೊರನಾಡು, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ವರುಣ್ ಕಟ್ಟೀಮನಿ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕೈನವರ್, ಪ್ರದೀಪ್ ರಾಜ್ ಮುಂತಾದವರ ತಾರಾಗಣ ಈ ಸಿನಿಮಾದಲ್ಲಿದೆ. ಸುಜಯ್ ಕುಮಾರ್ ಬಾವಿಕಟ್ಟಿ ಛಾಯಾಗ್ರಹಣ, ಮಾನಸಾ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಮತ್ತು ರಾಮು ಅವರ ನೃತ್ಯ ಸಂಯೋಜನೆಯಿಂದ ಬಯಲುಸೀಮೆ ಸಿಂಗರಿಸಿಕೊಂಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮತ್ತೆ ಹೆಚ್ಚುತ್ತಿದೆ ಮಲೇರಿಯಾ! ಬೇಗ ಚೇತರಿಸಿಕೊಳ್ಳಲು ಈ ಆಹಾರಗಳನ್ನು ಸೇವಿಸಿ!

Tue Apr 26 , 2022
ಸೊಳ್ಳೆಗಳಿಂದ ಹರಡುವ ಸಾಮಾನ್ಯ ರೋಗವಾದ ಮಲೇರಿಯಾ ಬೇಸಿಗೆ ಕಾಲದಲ್ಲಿ ಮತ್ತೆ ಹೆಚ್ಚುತ್ತಿದೆ.ಅನೇಕ ಜನರು ಇದಕ್ಕೆ ಬಲಿಯಾಗುತ್ತಾರೆ ಮತ್ತು ಶೀತ, ಜ್ವರ ಮತ್ತು ನಿರಂತರ ಆಯಾಸವನ್ನು ಎದುರಿಸುತ್ತಾರೆ. “ಪ್ಲಾಸ್ಮೋಡಿಯಂ ಪರಾವಲಂಬಿ ಸೋಂಕಿತ ಹೆಣ್ಣು ಅನಾಫಿಲಿಸ್ ಸೊಳ್ಳೆಯ ಕಚ್ಚುವಿಕೆಯಿಂದ ಮಲೇರಿಯಾ ಉಂಟಾಗುತ್ತದೆ. ಸೊಳ್ಳೆಗಳು ಒಬ್ಬ ಸೋಂಕಿತ ವ್ಯಕ್ತಿಯಿಂದ ಇನ್ನೊಬ್ಬರಿಗೆ ಪರಾವಲಂಬಿಯನ್ನು ಸಾಗಿಸುತ್ತವೆ.ಈ ಪರಾವಲಂಬಿಗಳು ನಂತರ ರಕ್ತಪ್ರವಾಹವನ್ನು ಪ್ರವೇಶಿಸಿ ಕೆಂಪು ರಕ್ತ ಕಣಗಳಿಗೆ ಸೋಂಕು ತಗುಲುತ್ತವೆ. ಮಲೇರಿಯಾದಿಂದ ಚೇತರಿಸಿಕೊಳ್ಳಲು ನೀವು ತಿನ್ನಬೇಕಾದದ್ದು ಇಲ್ಲಿದೆ: ಹೈಡ್ರೇಟಿಂಗ್ […]

Advertisement

Wordpress Social Share Plugin powered by Ultimatelysocial