ನ್ಯಾಯಮೂರ್ತಿಗಳ ಪ್ರಮಾಣವಚನ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಮೂವರು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಹೈಕೋರ್ಟ್‌ನ ಇಬ್ಬರು ಹಿರಿಯ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ಸುಪ್ರೀಂ ಕೋರ್ಟ್‌ನ ನೂತನ ಕಟ್ಟಡದ ಸಭಾಂಗಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದರು. ಐವರಿಂದ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ ೩೨ಕ್ಕೆ ಏರಲಿದೆ. ಸುಪ್ರೀಂ ಕೋರ್ಟ್‌ನ ಮಂಜೂರಾಗಿರುವ ನ್ಯಾಯಮೂರ್ತಿಗಳ ಸ್ಥಾನ ೩೪ ಆಗಿವೆ. ಇನ್ನು ಎರಡು ಹುದ್ದೆಗಳು ಬಾಕಿ ಇವೆ.
ಕೊಲಿಜಿಯಂ ಶಿಫಾರಸು: ಈ ಐವರು ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂ ಕೋರ್ಟ್‌ನ ಆರು ಸದಸ್ಯರ ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್ ೧೩ರಂದು ಶಿಫಾರಸು ಮಾಡಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬ್ರಾಹ್ಮಣರ ವಿರುದ್ಧ ಹೆಚ್.ಡಿ.ಕೆ ಹೇಳಿಕೆ.

Mon Feb 6 , 2023
ಮಂಡ್ಯದ ಮದ್ದೂರಿನ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹೆಚ್ ಡಿಕೆ ಬ್ರಾಹ್ಮಣರ ಬಗ್ಗೆ ನೀಡಿದಂತ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಪೇಜಾವರ ಶ್ರೀಗಳು, ಈ ರೀತಿ ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಕೇಳಿಬರ್ತಿದೆ. ಪ್ರತಿ ಚುನಾವಣೆ ಬಂದಾಗ ಇದು ಹೆಚ್ಚು ಕಾಣತ್ತೆ. ಬ್ರಾಹ್ಮಣರು ಯಾರು ಧ್ವನಿ ಎತ್ತಿ ಮಾತನಾಡುವವರು ಇಲ್ಲಾ, ಸಂಖ್ಯಾ ಬಲ ಇಲ್ಲಾ, ಅಲ್ಪ ಸಂಖ್ಯಾತರು ಆದ್ರಿಂದ ಏನು ಮಾತನಾಡಿದ್ರು ನಡೆಯತ್ತೆ ಎಂದು ಮಾತನಾಡ್ತಾರೆ. ರಾಜ್ಯದಲ್ಲಿ ಬ್ರಾಹ್ಮಣ […]

Advertisement

Wordpress Social Share Plugin powered by Ultimatelysocial