-ಗುಜರಾತ್‍ನ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ!

 

ಅಹಮದಾಬಾದ್.ಏ.11-ಗುಜರಾತ್‍ನ ಭರೂಚ್ ಜಿಲ್ಲಾಯ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಇಂದು ಮುಂಜಾನೆ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಸ್ಫೋಟ ದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ .

ರಾತ್ರಿ ಪಾಳಯದಲ್ಲಿ ಕೆಲಸ ಮಾಡುತಿದ್ದ ಕಾರ್ಮಿಕರು ಮುಂಜಾನೆ 3 ಗಂಟೆ ಸುಮಾರಿಗೆ ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದರು ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿತು, ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಭರೂಚ್ ಪೊಲೀಸ್
ಅೀಧಿಕ್ಷಕರಾದ ಲೀನಾ ಪಾಟೀಲ್ ಹೇಳಿದ್ದಾರೆ.

ಸ್ಫೋಟ ದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು.ನಂತರ ಒಳಗಿದ್ದವರು ಹೊರಗೆ ಒಡಿಬಂದು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು ತುರ್ತು ಪರಿಹಾರ ಸಿಬ್ಬಂಧಿ ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಬೆಂಕಿಯನ್ನು ಸಹ ನಿಯಂತ್ರಣಕ್ಕೆ ತರಲಾಯಿತು ಎಂದು ಅವರು ಹೇಳಿದರು. ಘಟನೆಯಲ್ಲಿ ಬೇರೆ ಯಾರೂ ಗಾಯಗೊಂಡಿಲ್ಲ ಎಂದು ತಿಳಿದುಬಂದಿದೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಅಂಗಡಿ ಧ್ವಂಸ ನಾಲ್ವರು ಆರೋಪಿಗಳ ಬಂಧನ!

Mon Apr 11 , 2022
  ಧಾರವಾಡ, ಏಪ್ರಿಲ್ 11: ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಅಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಅಂಗಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ತಮ್ಮ ಕಲ್ಲಂಗಡಿ ಅಂಗಡಿಯನ್ನು ಧ್ವಂಸ ಮಾಡಿರುವುದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕ ನಬಿಸಾಬ್ ಧಾರವಾಡದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ […]

Advertisement

Wordpress Social Share Plugin powered by Ultimatelysocial