ನ್ಯಾಯಮೂರ್ತಿ ಕೋ ಚೆನ್ನಬಸಪ್ಪ ನಿವೃತ್ತ ನ್ಯಾಯಾಧೀಶರು.

 

ನ್ಯಾಯಮೂರ್ತಿ ಕೋ ಚೆನ್ನಬಸಪ್ಪನಿವೃತ್ತ ನ್ಯಾಯಾಧೀಶರು, ಸ್ವಾತಂತ್ರ್ಯ ಮತ್ತು ಏಕೀಕರಣ ಹೋರಾಟಗಾರರು, ಕನ್ನಡದ ಹಿರಿಯ ಬರಹಗಾರರು ಹೀಗೆ ವಿವಿಧ ಮುಖೀ ವ್ಯಕ್ತಿತ್ವದ ನ್ಯಾಯಮೂರ್ತಿ ಕೋ. ಚೆನ್ನಬಸಪ್ಪನವರ ಸಂಸ್ಮರಣಾ ದಿನವಿದು. ಅವರು 2019ರ ಫೆಬ್ರವರಿ 23ರಂದು ಈ ಲೋಕವನ್ನಗಲಿದರು.ಕೋ. ಚೆನ್ನಬಸಪ್ಪನವರು 1922ರ ಫೆಬ್ರವರಿ 27ರಂದು ಬಳ್ಳಾರಿ ಜಿಲ್ಲೆಯ ಆಲೂರಿನ ಸಮೀಪದ ಕಾನಮಡುಗು ಎಂಬಲ್ಲಿ ಜನಿಸಿದರು. ತಂದೆ ವೀರಣ್ಣ. ತಾಯಿ ಬಸಮ್ಮ. ಕಾನಮಡುಗು ಮತ್ತು ಬಳ್ಳಾರಿಯಲ್ಲಿ ಶಾಲಾ ವಿದ್ಯಾಭ್ಯಾಸ ನಡೆಸಿದ ಚೆನ್ನಬಸಪ್ಪನವರು ಅನಂತಪುರದಲ್ಲಿ ಕಾಲೇಜು ವ್ಯಾಸಂಗ ನಡೆಸಿದರು. ವಿದ್ಯಾರ್ಥಿ ದೆಸೆಯಲ್ಲಿದ್ದಾಗ ಸ್ವಾತಂತ್ರ್ಯ ಚಳುವಳಿಗೆ ಧುಮುಕಿ, ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳುವಳಿಯಲ್ಲಿ ವಿದ್ಯಾರ್ಥಿ ಮುಖಂಡರಾಗಿ ಭಾಗವಹಿಸಿ ಸೆರೆಮನೆವಾಸ ಅನುಭವಿಸಿದರು. ಸೆರೆಮನೆಯಿಂದ ಹೊರಬಂದ ನಂತರದಲ್ಲಿ ಬಿ. ಎ ಪದವಿ ಪಡೆದರು. ನಂತರದಲ್ಲಿ ಕಾನೂನು ಪದವಿಯನ್ನೂ, ಚರಿತ್ರೆ ಮತ್ತು ರಾಜ್ಯಶಾಸ್ತ್ರಗಳಲ್ಲಿ ಸ್ನಾತಕೋತ್ತರ ಪದವಿಗಳನ್ನೂ ಪಡೆದರು.1946ರಲ್ಲಿ ಮುಂಬೈ ಶ್ರೇಷ್ಠ ನ್ಯಾಯಾಲಯದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸತೊಡಗಿದ ಚೆನ್ನಬಸಪ್ಪನವರು, 1965ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡರು. ನಿವೃತ್ತಿಯ ನಂತರದಲ್ಲಿ ಕರ್ನಾಟಕ ಶ್ರೇಷ್ಠ ನ್ಯಾಯಾಲಯದಲ್ಲಿ ವಕೀಲಿ ವೃತ್ತಿ ನಡೆಸುವುದರ ಜೊತೆಗೆ ಹಲವಾರು ಕಾರ್ಮಿಕ ಸಂಘಟನೆಗಳ ಮತ್ತು ಭ್ರಷ್ಟಾಚಾರ ನಿರ್ಮೂಲನ ಸಮಿತಿಯ ಅಧ್ಯಕ್ಷತೆ ಮುಂತಾದ ಹಲವಾರು ಜವಾಬ್ಧಾರಿಗಳನ್ನು ನಿರ್ವಹಿಸಿದರು.ಅರವಿಂದಾಶ್ರಮದ ನಿಕಟವರ್ತಿಗಳಾದ ಚೆನ್ನಬಸಪ್ಪನವರು ಕರ್ನಾಟಕ ವಿಭಾಗದ ಅರವಿಂದಾಶ್ರಮವನ್ನು ಪ್ರಾರಂಭಿಸಿದರು. ಪ್ರಾರಂಭದಿಂದಲೂ ಸಾಹಿತ್ಯದ ಗೀಳು ಹಚ್ಚಿಕೊಂಡ ಇವರು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಬರೆದ ಲೇಖನಗಳು ಅಪಾರ. ಕನ್ನಡಪ್ರಭ ಪತ್ರಿಕೆಯಲ್ಲಿ ಮೂಡಿಬಂದ ‘ನ್ಯಾಯಾಧೀಶರ ನೆನಪುಗಳು’ ಮತ್ತು ಪ್ರಜಾಮತ ವಾರಪತ್ರಿಕೆಯಲ್ಲಿ ಪ್ರಕಟಗೊಂಡ ‘ನ್ಯಾಯಾಲಯದಲ್ಲಿ ಸತ್ಯ ಕಥೆಗಳು’ ಅಂದಿನ ದಿನಗಳಲ್ಲಿ ಪ್ರಖ್ಯಾತಿ ಪಡೆದಿದ್ದವು.ಎಂಭತ್ತಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಕೋ. ಚೆನ್ನಬಸಪ್ಪನವರ ಕೃತಿಗಳಲ್ಲಿ, ಸ್ವಾತಂತ್ರ್ಯ ಮಹೋತ್ಸವ, ಪ್ರಾಣಪಕ್ಷಿ, ಜೀವತೀರ್ಥ ಮುಂತಾದ ಕವನ ಸಂಕಲನಗಳು; ಗಡಿಪಾರು, ನಮ್ಮೂರ ದೀಪ, ಗಾಯಕನಿಲ್ಲದ ಸಂಗೀತ ಮುಂತಾದ ಕಥಾ ಸಂಕಲನಗಳು; ಹಿಂದಿರುಗಿ ಬರಲಿಲ್ಲ, ನೊಗದ ನೇಣು, ರಕ್ತತರ್ಪಣ, ಬೇಡಿ ಕಳಚಿತು-ದೇಶ ಒಡೆಯಿತು ಮೊದಲಾದ ಕಾದಂಬರಿಗಳು; ಶ್ರೀ ಅರವಿಂದರು, ಶ್ರೀ ಮಾತಾಜಿ, ಶ್ರೀ ಮೃತ್ಯುಂಜಯಸ್ವಾಮಿಗಳು ಮೊದಲಾದ ಜೀವನಚರಿತ್ರೆಗಳು; ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ, ದೃಢಪ್ರತಿಜ್ಞೆ, ಕುವೆಂಪು ವೈಚಾರಿಕತೆ ಮೊದಲಾದ ವಿಮರ್ಶಾ ಗ್ರಂಥಗಳು; ರಕ್ಷಾಶತಕಂ, ಶ್ರೀ ಕುವೆಂಪು ಭಾಷಣಗಳು, ಬಿನ್ನವತ್ತಳೆಗಳು ಮುಂತಾದ ಸಂಪಾದಿತ ಕೃತಿಗಳು ಪ್ರಮುಖವಾಗಿವೆ. ಚೆನ್ನಬಸಪ್ಪನವರ ’ದಾಸರಯ್ಯನ ಪಟ್ಟಿ’, ’ಹಿಂದಿರುಗಿ ಬರಲಿಲ್ಲ’, ’ಬೇಡಿಕಳಚಿತು ದೇಶ ಒಡೆಯಿತು’, ’ನ್ಯಾಯಾಧೀಶನ ನೆನಪುಗಳು’ ಮುಂತಾದ ಕೃತಿಗಳು ಸಾಮಾನ್ಯರಿಂದ ವಿದ್ವಾಂಸರೆಲ್ಲರ ಮೆಚ್ಚುಗೆಗೆ ಪಾತ್ರವಾಗಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ಬಾರಿ ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ:

Thu Feb 23 , 2023
ಬಳ್ಳಾರಿ ಜಿಲ್ಲೆಯ ಸಂಡೂರಿನ ಎಸ್​ಆರ್​ಎಸ್ ಮೈದಾನದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವ ಅಮಿತ್ ಶಾ ಅವರು, ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಬಳ್ಳಾರಿ: ಈ ಬಾರಿ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) ಪೂರ್ಣ ಬಹುಮತದಲ್ಲಿ ಬಿಜೆಪಿ ಅಧಿಕಾರಕ್ಕೆBJP Govt)  (ಬರಲಿದೆ ಎಂದು ಕೇಂದ್ರ ಗೃಹಸಚಿವ(Amit Shah) ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಸಂಡೂರು ಪಟ್ಟಣದಲ್ಲಿರುವ ಎಸ್​ಆರ್​ಎಸ್​ […]

Advertisement

Wordpress Social Share Plugin powered by Ultimatelysocial