ನಾಳೆ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ : ಸಭಾಪತಿ ಬಸವರಾಜ ಹೊರಟ್ಟಿ

ನಾಳೆ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ: ಸಭಾಪತಿ ಬಸವರಾಜ ಹೊರಟ್ಟಿ ತೀರ್ಮಾನ

ಬೆಳಗಾವಿ: ನಾಳೆ ಬೆಳಗ್ಗೆ 10-30ಕ್ಕೆ ವಿಧಾನಮಂಡಲ ಅಧಿವೇಶನವನ್ನು ಆರಂಭಿಸಲಾಗುತ್ತದೆ. ಮೊದಲ ಒಂದು ಗಂಟೆ ಪ್ರಶ್ನೋತ್ತರಗಳಿಗೆ ಅವಕಾಶ ಕಲ್ಪಿಸಿ, ನಂತರ ಇಡೀ ದಿನದ ಕಲಾಪವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶ, ಆಸ್ತಿಪಾಸ್ತಿ ನಷ್ಟ, ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಚರ್ಚಿಸಲು ಮೀಸಲಿಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಬೆಳಗ್ಗೆ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಲಕ್ಷ್ಮಣ ಸವದಿ, ಶ್ರೀಕಂಠೇಗೌಡ ಮತ್ತು ಸಿ.ಎಂ. ಇಬ್ರಾಹಿಂ ಮಾತನಾಡಿ, ಅಧಿವೇಶನ ಆರಂಭವಾದಾಗಿನಿಂದ ಸಚಿವ ಭೈರತಿ ಬಸವರಾಜ್ ವಿರುದ್ಧದ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪಿಸಲು ಅವಕಾಶ ಕೋರಿ ವಿರೋಧ ಪಕ್ಷ ಪಟ್ಟು ಹಿಡಿದು ಕುಳಿತಿದೆ. ಅದಕ್ಕೂ ಅವಕಾಶ ಕೊಡಿ ಎಂದರು. ಆಗ ಉತ್ತರ ಕರ್ನಾಟಕದಲ್ಲಿ ಕಿತ್ತು ತಿನ್ನುವಂತಹ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಅದಕ್ಕೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡೋಣ ಎಂದು ಲಕ್ಷ್ಮಣ ಸವದಿ ಸಭಾಪತಿ ಬಳಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತಾಂತರ ನಿಷೇಧ ಕಾಯ್ದೆಗೆ ಒಪ್ಪಿಗೆ: ಡಿ.21ರಂದು ಮಂಡನೆ

Mon Dec 20 , 2021
ಬೆಳಗಾವಿ, ಡಿಸೆಂಬರ್ 20: ಮತಾಂತರ ನಿಷೇಧ ಕಾಯ್ದೆಯನ್ನು ಬೆಳಗಾವಿ ಅಧಿವೇಶನದಲ್ಲೇ ಮಂಡಿಸಲು ಸರ್ಕಾರ ತೀರ್ಮಾನಿಸಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ. ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರಮುಖವಾಗಿ ಮತಾಂತರ ನಿಷೇಧ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ.   ಸಚಿವ ಸಂಪುಟ ಸಭೆಯಲ್ಲಿ ಮತಾಂತರ […]

Advertisement

Wordpress Social Share Plugin powered by Ultimatelysocial