ಮತ್ತೆ ಪ್ರಧಾನಿ ಮೋದಿ ಭೇಟಿ ತಪ್ಪಿಸಿಕೊಂಡ ತೆಲಂಗಾಣ ಸಿಎಂ

 

ಹೈದರಾಬಾದ್ : ನಾಲ್ಕು ತಿಂಗಳೊಳಗೆ ಎರಡನೇ ಬಾರಿ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಗುರುವಾರ ಹೈದರಾಬಾದ್‌ನಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್‌ಬಿ) ನಲ್ಲಿ 20 ನೇ ವಾರ್ಷಿಕ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುವಾಗ ಅವರನ್ನು ಸ್ವಾಗತಿಸುವುದರಿಂದ ತಪ್ಪಿಸಿಕೊಂಡು ಟೀಕೆಗಳಿಗೆ ಗುರಿಯಾಗಿದ್ದಾರೆ.

ಫೆಬ್ರವರಿ 5 ರಂದು ಹೈದರಾಬಾದ್‌ಗೆ ಆಗಮಿಸಿದ ಮೋದಿ ಅವರನ್ನು ಕೆಸಿಆರ್ ಬರಮಾಡಿಕೊಂಡಿರಲಿಲ್ಲ ಮತ್ತು ಪ್ರಧಾನಿ ಭಾಗವಹಿಸಿದ್ದ ಎರಡು ಕಾರ್ಯಕ್ರಮಗಳಲ್ಲಿ ಸಹ ಭಾಗಿಯಾಗಿರಲಿಲ್ಲ.

ಮೋದಿ ವಿರುದ್ಧ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾವ್ ಅವರು ಬುಧವಾರ ಸಂಜೆ ಬೆಂಗಳೂರಿಗೆ ಆಗಮಿಸಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಲಿದ್ದಾರೆ.

ಮತ್ತೊಮ್ಮೆ ಪ್ರಧಾನಿ ಭೇಟಿಯನ್ನು ತಪ್ಪಿಸಿದ ಕೆಸಿಆರ್ ವಿರುದ್ಧ ತೆಲಂಗಾಣ ಬಿಜೆಪಿ ವಾಗ್ದಾಳಿ ನಡೆಸಿದ್ದು, ಮೋದಿ ಅವರನ್ನು ಎದುರಿಸಲು ಸಾಧ್ಯವಾಗದೆ ಟಿಆರ್‌ಎಸ್ ಮುಖ್ಯಸ್ಥರು ರಾಜ್ಯದಿಂದ ಓಡಿ ಹೋಗುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಕಿಡಿ ಕಾರಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಲ್ಯಾಣ ಕರ್ನಾಟಕದ 8 ಜಿಲ್ಲೆಗಳ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ಮೊಟ್ಟೆ, ಬಾಳೆಹಣ್ಣು

Wed May 25 , 2022
  ಬೆಂಗಳೂರು,ಮೇ25-ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯನ್ನು ನಿವಾರಿಸಲು ಕಲ್ಯಾಣ ಕರ್ನಾಟಕದ 8 ಜಿಲ್ಲೆಗಳ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಲು ಸರ್ಕಾರ ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ 1ರಿಂದ 8ನೇ ತರಗತಿಯ ಶಾಲಾ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಸುತ್ತೋಲೆ […]

Advertisement

Wordpress Social Share Plugin powered by Ultimatelysocial