ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಖಚಿತ.

• ಬಹಿರಂಗಪಡಿಸಿದ ಆರ್.ಧ್ರುವನಾರಾಯಣ್
• ಕೆಲ ದಿನಗಳಲ್ಲೇ ಅಧಿಕೃತ ಘೋಷಣೆ
ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಅವರೇ ಬಹಿರಂಗಪಡಿಸಿದ್ದಾರೆ. ಆದರೆ ಇನ್ನು ಅಧಿಕೃತ ಘೋಷಣೆಯೊಂದೆ ಬಾಕಿ ಉಳಿದಿದೆ.
ಜ.೨೧ ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಮುಖಂಡರ ದಂಡೇ ಜಿಲ್ಲೆಗೆ ಹರಿದು ಬರಲಿದೆ. ಈ ವೇಳೆ ಕಾಂಗ್ರೆಸ್ ಬಲ ಪ್ರದರ್ಶನ ನಡೆಯಲಿ. ಇದೇ ವೇಳೆ ಸಿದ್ದರಾಮಯ್ಯ ಅವರು ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತಿಳಿಸಲಿದ್ದಾರೆ ಎನ್ನಲಾಗದೆ.
ಮತ್ತೊಬ್ಬ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ, ಮಾಜಿ ಸಚಿವ ಎ.ಮಂಜು ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಖಚಿತತೆ ಸಿಗುತ್ತಿಲ್ಲ.


ರಾಜ್ಯದ ಹಲವು ಭಾಗಗಳಿಂದ ಪ್ರಮುಖರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಧ್ರುವನಾರಾಯಣ್ ತಿಳಿಸಿದ್ದಾರೆ.

ಜ.೨೧ ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿಗಳು ಸೇರಿಗೆ ಪ್ರಮುಖ ನಾಯಕರು ಜಿಲ್ಲೆಗೆ ಆಗಲಿಸಲಿದ್ದಾರೆ. ಈ ಸಮಯದಲ್ಲಿ ಯರ‍್ಯಾರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಲಿದೆ. ಕೆ.ಎಂ.ಶಿವಲಿಂಗೇಗೌಡರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಅರಕಲಗೂಡು ಕ್ಷೇತ್ರದ ಬಗ್ಗೆ ಇನ್ನೂ ಯಾವುದು ಸ್ಪಷ್ಟವಾಗಿಲ್ಲ.
ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇ.ಹೆಚ್.ಲಕ್ಷಣ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಪಿಗಳಿಂದ ಅಪ್ರಾಪ್ತೆ ಮೇಲೆ ಎಂಟು ತಿಂಗಳು ಅತ್ಯಾಚಾರ.

Sun Jan 8 , 2023
ಇಸ್ಲಾಮಾಬಾದ್: ಪಾಕಿಸ್ತಾನದ ಮುಜಾಫರ್‌ಗಢ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಎಂಟು ತಿಂಗಳ ಕಾಲ ಮೂವರು ಕಾಮುಕರು ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಜತೋಯ್ ತೆಹಸಿಲ್‌ನ ಕೋಟ್ಲಾ ರಹಮ್ ಶಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ .ಬಾಲಕಿಯ ಬೆತ್ತಲೆ ಫೊಟೋಗಳು ಮತ್ತು ವಿಡಿಯೋಗಳನ್ನು ತೋರಿಸುತ್ತಾ ಬ್ಲ್ಯಾಕ್‌ಮೇಲ್‌ ಮಾಡಲಾಗಿದೆ. ಬಾಲಕಿ ಗರ್ಭಿಣಿ ಎಂದು ತಿಳಿದ ಬಳಿಕ ವಿಷಯ ಬೆಳಕಿಗೆ ಬಂದಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆಈ ಕಾಮುಕರ ಪೈಕಿ ಒಬ್ಬ […]

Advertisement

Wordpress Social Share Plugin powered by Ultimatelysocial