ಕೆಎಸ್‌ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ

 

ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆ ಮಲೆನಾಡಿನಲ್ಲಿ ಇಂದೂ ಮುಂದುವರಿದೆ. ಮಳೆಯೊಂದಿಗೆ ಭಾರೀ ಗಾಳಿಯೂ ಬೀಸುತ್ತಿದ್ದು, ಗಾಳಿಯ ರಭಸಕ್ಕೆ ಕೆಎಸ್‌ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ನಡೆದಿದೆ.

ಸರ್ಕಾರಿ ಬಸ್ ಮೂಡಿಗೆರೆಯಿಂದ-ಚಿಕ್ಕಮಗಳೂರಿಗೆ ಸಂಚಾರ ನಡೆಸುತ್ತಿತ್ತು. ಕುದುರೆಗುಂಡಿ ಬಳಿ ಬಂದಾಗ ವಿದ್ಯುತ್ ಕಂಬ ಮುರಿದು ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿದೆ. ಮುರಿದ ಕಂಬ ಬಸ್ ಮೇಲೆ ಬೀಳದೆ ಇದ್ದಿದ್ದು ಮತ್ತು ಈ ವೇಳೆ ತಂತಿಯಲ್ಲಿ ವಿದ್ಯುತ್ ಪ್ರವಾಹ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ.

ಬಸ್ಸಿನಲ್ಲಿ ಸುಮಾರು 50 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಚರ್ಚೆಗೆ ಹೈಕಮಾಂಡ್‌ ಬುಲಾವ್‌: ಸಿದ್ದರಾಮಯ್ಯ

Fri May 20 , 2022
ಕಲಬುರಗಿ: ‘ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಚರ್ಚಿಸಲು ಹೈಕಮಾಂಡ್ ಬುಲಾವ್‌ ನೀಡಿದೆ. ಶನಿವಾರ (ಮೇ 21) ನಾನು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ನಹದೆಹಲಿಗೆ ತೆರಳಲಿದ್ದೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಹೆಚ್ಚುವರಿ ಮತಗಳ ಚಲಾವಣೆಗೆ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆ ಅಥವಾ ಬೇರೆ ಏನು ಮಾಡಬಹುದು ಎಂಬ ಬಗ್ಗೆಯೂ ಚರ್ಚೆ ನಡೆಸಿ ನಿರ್ಧರಿಸುತ್ತೇವೆ’ ಎಂದು ಅವರು ನಗರದಲ್ಲಿ […]

Advertisement

Wordpress Social Share Plugin powered by Ultimatelysocial