ವಿದ್ಯಾರ್ಥಿಗಳಿಗೆ KSRTCಯಿಂದ ಉಚಿತ ಬಸ್ ಪಾಸ್ ಅವಧಿ ವಿಸ್ತರಣೆ

 

ಬೆಂಗಳೂರು: 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯ ನಂತ್ರವೂ, ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ, ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವ್ಯಾಂಸಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗಸ್ಟ್, ಸೆಪ್ಟೆಂಬರ್, ನವೆಂಬರ್ ವರೆಗೂ ತರಗತಿಗಳು ಹಾಗೂ ಪರೀಕ್ಷೆಗಳು ನಡೆಯೋದ್ರಿಂದ, ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಕೋರಲಾಗಿದೆ.

ಈ ಕೋರಿಕೆಯ ಹಿನ್ನಲೆಯಲ್ಲಿ, ಎಲ್ಲಾ ವರ್ಗದ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆ, ತರಗತಿಗಳು ನಡೆಯುತ್ತಿದ್ದಲ್ಲಿ, ಅದನ್ನು ಖಚಿತಪಡಿಸಿಕೊಂಡು, ಒಂದು, ಎರಡು ತಿಂಗಳ ಅವಧಿಗೆ ಅಂದರೇ ಜುಲೈ, ಆಗಸ್ಟ್ -2022ಕ್ಕೆ ನಿಗದಿತ ಮೊತ್ತವನ್ನು ಪಾವತಿಸಿಕೊಂಡು, ರಸೀದಿ ನೀಡುವುದು ಎಂದು ತಿಳಿಸಿದೆ.

ವಿದ್ಯಾರ್ಥಿಗಳು ಹೀಗೆ ಪಡೆದಂತ ರಸೀದಿ ಹಾಗೂ ಹಳೆಯ ಪಾಸ್ ಎರಡನ್ನು ತೋರಿಸಿ, ಪ್ರಯಾಣಿಸಬಹುದು. ಈ ಬಗ್ಗೆ ಎಲ್ಲಾ ಚಾಲಕ, ನಿರ್ವಾಹಕ, ತನಿಖಾ ಸಿಬ್ಬಂದಿಗಳು ಕ್ರಮವಹಿಸುವಂತೆ ಸೂಚಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

2 ವರ್ಷಗಳ ಬಳಿಕ ಚಾಮುಂಡಿಬೆಟ್ಟಕ್ಕೆ ಆಷಾಢದ ಕಳೆ, ವಿಶೇಷ ವ್ಯವಸ್ಥೆ

Tue Jun 28 , 2022
  ಮೈಸೂರು, ಜೂನ್ 28 : ಆಷಾಢದ ಶುಕ್ರವಾರ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯುವುದು ಪರಮ ಪುಣ್ಯವೆಂದು ಮತ್ತು ಇಷ್ಟಾರ್ಥಗಳು ನೆರವೇರುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ಆದ್ದರಿಂದಲೇ ಪ್ರತಿ ವರ್ಷವೂ ಆಷಾಢದಲ್ಲಿ ಅದರಲ್ಲೂ ಶುಕ್ರವಾರ ತಾಯಿಯ ದರ್ಶನ ಪಡೆಯುಲು ಹಾತೊರೆಯುತ್ತಾರೆ. ಆದರೆ ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ತಾಯಿಯ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಆದರೆ ಈ ಬಾರಿ ಒಂದಷ್ಟು ಕಟ್ಟು ನಿಟ್ಟಿನ ಕ್ರಮಗಳೊಂದಿಗೆ ಅವಕಾಶ ಮಾಡಿಕೊಡುತ್ತಿರುವುದು ಭಕ್ತರಲ್ಲಿ […]

Advertisement

Wordpress Social Share Plugin powered by Ultimatelysocial