ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು

ಬೆಂಗಳೂರು,ಮೇ 1- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ ಮಾಡಲಾಗಿದೆ.

ಹತ್ತು ತಿಂಗಳುಗಳ ಅವಗಿಂತ ಕಡಿಮೆ ಅವಧಿ ಒಳಗಿನ ಗೈರುಹಾಜರಿಯನ್ನು ಮನ್ನಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವ ನೌಕರರ ವಿಚಾರಣೆಯನ್ನು ರದ್ದುಗೊಳಿಸಿ, ಬಸ್ಸನ್ನು ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ. ಅದರಂತೆ ಗೈರುಹಾಜರಾಗಿದ್ದ 110 ನೌಕರರು ಕಳೆದ ಮೂರು ದಿನಗಳಿಂದ ಕರ್ತವ್ಯ ಹಾಜರಾಗಿದ್ದಾರೆ.

ನಿಗಮದಲ್ಲಿ 35 ಸಾವಿರ ಸಿಬ್ಬಂದಿ ಇದ್ದು, 8414 ಶಿಸ್ತು ಪ್ರಕರಣಗಳಿವೆ. ಕಲೆದ ಮೂರು ದಿನಗಳಿಂದ 7200 ಶಿಸ್ತು ಪ್ರಕರಣಗಳನ್ನು ಅತಿ ಕಡಿಮೆ ಮೊತ್ತದ ದಂಡ ವಿಧಿಸಿದ್ದು, ಅಂದರೆ 100, 200, 500 ರೂ. ಅನ್ನು ದಂಡ ವಿಧಿಸಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ. ಈ ಪ್ರಕರಣಗಳಿಗೆ ಕನಿಷ್ಠವೆಂದರೆ 25000 ರೂ. ದಂಡ ವಿಧಿಸಬಹುದಾದ ಪ್ರಕರಣಗಳಾಗಿದ್ದವು.

ಇಂದು ನಿಗಮದ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಕಾರ್ಮಿಕರ ದಿನಾಚರಣೆ ಆಚರಿಸಿದ್ದು, ಬೆಂಗಳೂರು ಕೇಂದ್ರಿಯ ವಿಭಾಗದಲ್ಲಿ ಘಟಕ .2 ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಶಿಸ್ತು ಪ್ರಕರಣ ಮುಕ್ತಾಯಗೊಂಡಿರುವ ನೌಕರರಿಗೆ ಆದೇಶದ ಪ್ರತಿ ನೀಡಿ ಶುಭ ಕೋರಿದರು.

ಬಳಿಕ ಮಾತನಾಡಿದ ಅವರು, ಕಾರ್ಮಿಕ ದಿನಾಚರಣೆಯ ಇತಿಹಾಸ, ಸಿದ್ಧಾಂತ ,ವಿಶೇಷತೆ ಕುರಿತು ವಿವರಿಸಿ , ನಮ್ಮ ಸಾರಿಗೆ ಸಂಸ್ಥೆಯ ಬೆನ್ನುಲುಬು ನಮ್ಮ ಕಾರ್ಮಿಕರು ಅವರ ಕ್ಷೇಮ ಲಾಭವೇ ನಮ್ಮ ಪ್ರಮುಖ ಆದ್ಯತೆಯಾಗಿರಬೇಕು ಎಂದರು.

ಆಡಳಿತ ವರ್ಗ ಅಂದರೆ ಶಿಕ್ಷೆ ಕೊಡುವುದು ಮಾತ್ರವಲ್ಲ, ನೌಕರರ ಶ್ರೇಯೋಭಿವೃದ್ದಿಯಾಗಿ ದುಡಿಯುವುದು ಕೂಡ ನಮ್ಮ ಕರ್ತವ್ಯವಾಗಿರಬೇಕು. ಆದರೆ ನೌಕರರು ಮತ್ತೊಮ್ಮೆ ಅಪರಾಧ/ ಅಪಘಾತ/ ಗೈರು ಹಾಜರಿ ಪ್ರಕರಣಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದರು.

ನಿಗಮದ ಪ್ರತಿದಿನದ ಸರಾಸರಿ ಆದಾಯ 10 ಕೋಟಿ ರೂ. ಇರಬೇಕು. ಆದರೆ ನಮಗೆ ಸರಾಸರಿ 8 ಕೋಟಿ ಮಾತ್ರ ಬರುತ್ತಿದೆ, ಇದರಲ್ಲಿ ಶೇ.70ರಷ್ಟು ಡೀಸೆಲ್ ಪಾವತಿಗೆ ಸಂದಾಯ ಮಾಡಬೇಕಾಗಿದೆ. ಆದ್ದರಿಂದ ನಿಗಮದ ಆರ್ಥಿಕ ಪರಿಸ್ಥಿತಿಯು ಕ್ಲಿಷ್ಟಕರವಾದ ಸ್ಥಿತಿಯಲ್ಲಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಎಂಬಿಬಿಎಸ್, ಎಂಟೆಕ್ ಇತರೆ ಹೆಚ್ಚಿನ ವಿದ್ಯಾಭ್ಯಾಸ ಮಾಡಿರುವ ನೌಕರರ ಮಕ್ಕಳನ್ನು ಸನ್ಮಾನಿಸಿ, ಮುಂದೆ ನೀವುಗಳು ಕೂಡ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಈ ಸಂಸ್ಥೆಯನ್ನು ಮುನ್ನಡಸುವ ಶುಭ ಕಾಲ ಬರಲಿ, ಶಿಕ್ಷಣ ಒಂದೇ ಆಯುಧ ಅದನ್ನು ನಮ್ಮ ನೌಕರರು ತಮ್ಮ ಮಕ್ಕಳಿಗೆ ನೀಡಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ 3ರಂದು ರಾಜ್ಯ ಬಿಜೆಪಿ ಘಟಕದ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ

Sun May 1 , 2022
ಬೆಂಗಳೂರು,ಮೇ 1- ಮೇ 3ರಂದು ರಾಜ್ಯ ಬಿಜೆಪಿ ಘಟಕದ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಲಿದ್ದು, ಈ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಸಂಜೆ 4 ಗಂಟೆಗೆ ಪ್ರಮುಖರ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ […]

Advertisement

Wordpress Social Share Plugin powered by Ultimatelysocial