ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಭಾವುಟ

ತಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಭಾವುಟ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ದೇಶಾದ್ಯಂತ ಆಕ್ರೋಶ ಹೊತ್ತಿಕೊಡಿದೆ. ಈಗಾಗ್ಲೆ ಕೆಲ ಕಡೆ ಲೀನಾ ವಿರುದ್ಧ ದೂರುಗಳು ದಾಖಲಾಗಿದ್ದು, ಮುಂಬೈನಲ್ಲಿ ಎಫ್‍.ಐ.ಆರ್ ಕೂಡ ದಾಖಲಾಗಿತ್ತು.

ಇದೀಗ ಭಾರತದಲ್ಲಿ ಅವರ ಟ್ವಿಟರ್ ಖಾತೆಯನ್ನು ತಡೆಹಿಡಿಯಲಾಗಿದೆ.

ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಲೀನಾ ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ನೆಲಕಚ್ಚುತ್ತಿವೆ.

Wed Jul 6 , 2022
ಇತ್ತೀಚಿನ ಬಹುತೇಕ ಬಾಲಿವುಡ್ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ನೆಲಕಚ್ಚುತ್ತಿವೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆ ಆಗಿದ್ದ ಕಂಗನಾ ರನೌತ್‌ ನಟನೆಯ ‘ಧಾಕಡ್’ ಧಾರುಣ ಸೋಲು ಕಂಡಿತ್ತು. ಸುಮಾರು 85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ‘ಧಾಕಡ್’ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಗಳಿಸಿದ್ದು ಕೇವಲ 3.75 ಕೋಟಿಯಷ್ಟೆ. ಇತ್ತೀಚಿನ ದಿನಗಳಲ್ಲಿ ಇಷ್ಟು ಹೀನಾಯವಾಗಿ ಸೋತ ಇನ್ನಾವುದೇ ಸಿನಿಮಾ ಇಲ್ಲ. ಕಂಗನಾ ರನೌತ್ ಗೂಢಚಾರಿಣಿ ಪಾತ್ರದಲ್ಲಿ ನಟಿಸಿದ್ದ ಈ ಸಿನಿಮಾದ ಟ್ರೈಲರ್ ಬಹುವಾಗಿ ಗಮನ ಸೆಳೆದಿತ್ತು, […]

Advertisement

Wordpress Social Share Plugin powered by Ultimatelysocial