ಕನ್ನಡ ನಾಮಫಲಕ ಕಡ್ಡಾಯಗೊಳಿಸಬೇಕೆಂದು ಆಗ್ರಹ- ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ

ಬೀದರ್  ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೀದರ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ಕೈಯಲ್ಲಿ ಕನ್ನಡ ಧ್ವಜ ಹಾಗೂ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರವೇಶ ದ್ವಾರದ ಎದುರು ಅಳವಡಿಸಿದ ಬ್ಯಾರಿಕೇಡ್‍ಗಳ ಮುಂಭಾಗದಲ್ಲೇ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಧರಣಿ ನಡೆಸಿದರು. ಹಾಗೂ ಕನ್ನಡ ನಾಮಫಲಕ ಅಳವಡಿಸಲು ನಿರಾಕರಿಸುವವರಿಗೆ ದಂಡ ವಿಧಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅಕ್ಟೋಬರ್ 26 ರ ನಂತರ ಜಿಲ್ಲೆಯಲ್ಲಿ ಇರುವ ಅನ್ಯ ಭಾಷೆಗಳ ನಾಮಫಲಕಗಳಿಗೆ ಮಸಿ ಬಳಿಯಲಾಗುವುದು ಎಂದು ಎಚ್ಚರಿಕೆ ನೀಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

 

Please follow and like us:

Leave a Reply

Your email address will not be published. Required fields are marked *

Next Post

ಪಾತ್ರ ಯಾವುದಾದರೇನು, ನಟಿಸುವುದಷ್ಟೇ ನನ್ನ ಕೆಲಸ-ವೈಜನಾಥ್ ಬಿರಾದಾರ್ ಅತ್ಯುತ್ತಮ ಕಲಾವಿದ

Sat Oct 10 , 2020
ಪಾತ್ರ ಯಾವುದಾದರೇನು, ಜೀವ ತುಂಬಿ ನಟಿಸುವುದಷ್ಟೇ ನನ್ನ ಕೆಲಸ ಎನ್ನುವ ವೈಜನಾಥ್ ಬಿರಾದಾರ್ ಅತ್ಯುತ್ತಮ ಕಲಾವಿದ. ಭಿಕ್ಷುಕ, ಕುಡುಕ, ಬಡವ ಮೊದಲಾದ ಪಾತ್ರಗಳಿಂದ 350ಕ್ಕೂ ಹೆಚ್ಚು ಚಿತ್ರಗಳ ಮೂಲಕ ರಸಿಕರನ್ನು ರಂಜಿಸುವ ಈ ನಟ ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಲೆಯನ್ನು ದೇವರೆಂದು ನಂಬಿರುವ ವೈಜನಾಥ್​ ಬಿರಾದರ್​ ಅವರು ಗಿರೀಶ್​​ ಕಾಸರವಳ್ಳಿ ನಿರ್ದೇಶನದ ಕನಸೆಂಬ ಕುದುರೆಯನೇರಿ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ್ದು, ಅದಕ್ಕಾಗಿ ಸ್ಪೇನ್​ನ ಮ್ಯಾಡ್ರಿಡ್​ನಲ್ಲಿ ನಡೆದ […]

Advertisement

Wordpress Social Share Plugin powered by Ultimatelysocial