5830 ಬ್ಯಾಂಕ್ ಹುದ್ದೆ ಕನ್ನಡದಲ್ಲೇ ಪರೀಕ್ಷೆ

ದೇಶದ 11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನೇಮಕ ಪ್ರಕ್ರಿಯೆ ಪುನರಾರಂಭಿಸಿದ್ದು, ಕೇಂದ್ರ ವಿತ್ತ ಸಚಿವಾಲಯದ ಸೂಚನೆಯಂತೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಇದರಿಂದ ರಾಜ್ಯದ ಅಭ್ಯರ್ಥಿಗಳ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಜೊತೆಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂಬ ಜನಪರ ಹೋರಾಟಕ್ಕೆ ಜಯ ಸಿಕ್ಕಿದೆ.

ಒಟ್ಟು 5830 ಹುದ್ದೆಗಳಿಗೆ ನೇಮಕ ನಡೆಯಲಿದ್ದು ಇಂದಿನಿಂದಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ರಾಜ್ಯದಲ್ಲಿ 454 ಹುದ್ದೆಗಳಿವೆ ಮುಖ್ಯವಾಗಿ ರಾಜ್ಯ ಮೂಲದ ಕೆನರಾ ಬ್ಯಾಂಕ್ 140 ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 209 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿವೆ.

ನೇಮಕಕ್ಕೆ ಸಂಬಂಧಿಸಿದಂತೆ ಡಿಸೆಂಬರ್ನಲ್ಲಿ ಪೂರ್ವಭಾವಿ ಮತ್ತು ಜನವರಿ-ಫೆಬ್ರವರಿ ಯಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಈ ಎರಡು ಪರೀಕ್ಷೆಗಳನ್ನು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ ರಾಜ್ಯ ಅಭ್ಯರ್ಥಿಗಳು ಕನ್ನಡ ಕೊಂಕಣಿ ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಯಾವುದಾದರೂ ಒಂದು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಅರ್ಜಿ ಸಲ್ಲಿಸುವಾಗಲೇ ಭಾಷೆಯನ್ನು ಸೂಚಿಸಬೇಕಾಗುತ್ತದೆ.

Please follow and like us:

Leave a Reply

Your email address will not be published. Required fields are marked *

Next Post

ಮನೆಗೋಡೆ ಕುಸಿದು 7 ಮಂದಿ ಸಾವು..!

Thu Oct 7 , 2021
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಗುರುವಾರ ರಾತ್ರಿ ಮನೆಯೊಂದರ ಗೋಡೆ ಕುಸಿದು ಆರು ಮಹಿಳೆಯರು ಸಹಿತ ಏಳು ಮಂದಿ ಮೃತಪಟ್ಟಿದ್ದಾರೆ.ಐವರು ಸ್ಥಳದಲ್ಲೇ ಸಾವಿಗೀಡಾದರು ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಕಣ್ಣು ಮುಚ್ಚಿದರು ಅವರಲ್ಲಿ 6 ಮಂದಿ ಒಂದೇ ಕುಟುಂಬದವರು ಬಾಲಕಿ ಮಾತ್ರ ಪಕ್ಕದ ಮನೆಯವಳು ಈ ಸಾವು ಇಡೀ ಊರನ್ನೇ ಶೋಕದಲ್ಲಿ ಮುಳುಗಿಸಿದೆ.ಇನ್ನು ಮೃತರ ಕುಟುಂಬಕ್ಕೆ ಸೇರಿದ ಭೀಮಪ್ಪ ಎಂಬವರ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಸಾಂತ್ವನ […]

Advertisement

Wordpress Social Share Plugin powered by Ultimatelysocial