ಕನ್ನಡ ಬಾವುಟ ಸುಟ್ಟವರ ವಿರುದ್ಧ ನಟ ದರ್ಶನ್‌ ಆಕ್ರೋಶ!

ಎಂಇಎಸ್‌ನವರು ಪ್ರತಿಭಟನಾ ರ್‍ಯಾಲಿ ಮಾಡಿ, ಕನ್ನಡ ಪರ ಹೋರಾಟಗಾರರ ಮೇಲೆ ಕೊಲೆ ಯತ್ನ ದೂರು ದಾಖಲಿಸಿದರು. ಪೊಲೀಸರು ಕನ್ನಡಪರ ಹೋರಾಟಗಾರ ಸಂಪತ್‌ಕುಮಾರ್ ಹಾಗೂ ಇನ್ನಿಬ್ಬರನ್ನು ಬಂಧಿಸಿದ್ದಾರೆ.

ಪ್ರತಿಭಟನೆ ವೇಳೆ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ.

ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ. ಕನ್ನಡ ಬಾವುಟ ಸುಟ್ಟಿರುವುದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಕನ್ನಡ ಸಿನಿಮಾ ತಾರೆಯರು ಈಗ ಅಖಾಡಕ್ಕೆ ಇಳಿದಿದ್ದಾರೆ.

ನಟ ಜಗ್ಗೇಶ್, ಶಿವರಾಜ್‌ಕುಮಾರ್, ದುನಿಯಾ ವಿಜಯ್, ಪ್ರಜ್ವಲ್‌ ದೇವರಾಜ್, ಗಣೇಶ್, ವಿನೋದ್‌ ಪ್ರಭಾಕರ್‌, ದರ್ಶನ್‌ ಸೇರಿದಂತೆ ಹಲವು ತಾರೆಯರು ಕೆಂಡಾಮಂಡಲ ಆಗಿದ್ದಾರೆ.

ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕು: ನಟ ದರ್ಶನ್ ಆಕ್ರೋಶ!

ಕನ್ನಡ ಬಾವುಟ ಸುಟ್ಟವರ ವಿರುದ್ಧ ನಟ ದರ್ಶನ್‌ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ” ಎಂದು ಬರೆದುಕೊಂಡು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಕನ್ನಡ ಬಾವುಟವನ್ನು ಸುಟ್ಟು ಹಾಕಿದವರು ಹೇಡಿಗಳು ಎಂದು ಕಿಡಿಕಾರಿದ್ದಾರೆ ನಟ ದರ್ಶನ್. ಪ್ರತಿಭಟನೆ ವೇಳೆ ಕನ್ನಡ ಧ್ವಜವನ್ನು ಸುಟ್ಟು ಹಾಕಿದ್ದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತ ಆಗುತ್ತಿದೆ. ಕನ್ನಡಿಗರು ಇದರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈಗ ಸಾಲು ಸಾಲಾಗಿ ಸಿನಿಮಾ ತಾರೆಯರು ಕೂಡ ಈ ಘಟನೆಯ ವಿರುದ್ಧ ಗುಡುಗುತ್ತಲಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ : ಸಿಎಂ

Thu Dec 16 , 2021
ಬೆಳಗಾವಿ, ಡಿ.16- ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಕರೆದ ಸಭೆಯಲ್ಲಿ ಮಾತನಾಡಿದ ಅವರು, ನೇಕಾರರ ಬೇಡಿಕೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಯವರು, ಸರ್ಕಾರದ ವಿವಿಧ ಇಲಾಖೆಗಳಿಗೆ ಅಗತ್ಯವಿರುವ ಬಟ್ಟೆ/ಸೀರೆಗಳನ್ನು ನೇಕಾರರ ಸಾಮಥ್ರ್ಯಕ್ಕನುಗುಣವಾಗಿ ಖರೀದಿಸಲು ಪ್ರಮಾಣವನ್ನು ನಿಗದಿಪಡಿಸಲಾಗುವುದು. ಇದರೊಂದಿಗೆ ಕೈಮಗ್ಗ ಅಭಿವೃದ್ಧಿ ನಿಗಮದ ಮೂಲಕ ಕೈಮಗ್ಗದ […]

Advertisement

Wordpress Social Share Plugin powered by Ultimatelysocial