ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ – ಹೆಚ್‌ ಡಿ ಕುಮಾರಸ್ವಾಮಿ

“ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ.”

ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ.

ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ – ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ.

ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?

ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ.

ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು.

ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು.

#ಹಿಂದಿಹೇರಿಕೆನಿಲ್ಲಿಸಿ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಅನಾರೋಗ್ಯಕ್ಕೂ ಮುನ್ನವೇ ಗೊತ್ತಾಗುತ್ತೆ ಒಮಿಕ್ರಾನ್ ನ ಮೊದಲ ಲಕ್ಷಣ

Mon Dec 27 , 2021
ಕೊರೊನಾ ವೈರಸ್‌ನ ಹೊಸ ರೂಪಾಂತರ ಒಮಿಕ್ರಾನ್‌ ಈಗ ಎಲ್ಲರ ತಲೆನೋವಿಗೆ ಕಾರಣವಾಗಿದೆ. ಡೆಲ್ಟಾ ಜೊತೆಗೆ ಒಮಿಕ್ರಾನ್ ಕೂಡ ಈಗ ಜನರನ್ನು ಕಾಡ್ತಿದೆ. ಒಮಿಕ್ರಾನ್ ವೇಗವಾಗಿ ಹರಡುತ್ತದೆ ಎಂದು ಈಗಾಗಲೇ ತಜ್ಞರು ಹೇಳಿದ್ದಾರೆ. ಒಮಿಕ್ರಾನ್ ಲಕ್ಷಣಗಳು ಡೆಲ್ಟಾ ರೂಪಾಂತರಕ್ಕಿಂತ ಬೇಗ ಕಾಣಿಸಿಕೊಳ್ಳುತ್ತವೆ ಎಂಬುದು ಈಗ ಗೊತ್ತಾಗಿದೆ. ಡೆಲ್ಟಾಗಿಂತ ಒಮಿಕ್ರಾನ್ ಲಕ್ಷಣ, ಅನಾರೋಗ್ಯಕ್ಕೆ ಒಳಗಾಗುವ ಮೊದಲೇ ಕಾಣಿಸಿಕೊಳ್ಳುತ್ತದೆ ಮತ್ತು ಅದು ಅನುಭವಕ್ಕೆ ಬರುತ್ತದೆ ಎಂದು ತಜ್ಞರು ಹೇಳಿದ್ದಾರೆ. ಒಮಿಕ್ರಾನ್ ಸೋಂಕಿಗೆ ಒಳಗಾದಾಗ ಧ್ವನಿಯಲ್ಲಿ […]

Advertisement

Wordpress Social Share Plugin powered by Ultimatelysocial