ಕನ್ನಡದಲ್ಲಿ ಪ್ರಧಾನಿ ಮೋದಿ ಶುಭ ಹಾರೈಕೆ ; ರಾಜ್ಯಾದ್ಯಂತ 66ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ…!

ಬೆಂಗಳೂರು: ರಾಜ್ಯಾದ್ಯಂತ 66ನೇ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಗರದ ಹೃದಯ ಭಾಗಗಳಲ್ಲಿ ಹಳದಿ ಮತ್ತು ಕೆಂಪು ಬಣ್ಣದ ಬಾವುಟ ಹಾರಾಡುತ್ತಿದ್ದ, ಕನ್ನಡ ಹಾಡುಗಳು (Kannada Songs)ಮೊಳಗುತ್ತಿವೆ. ನಗರ ಭಾಗದ ಆಟೋ ಚಾಲಕರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ  ಮೋದಿ (Prime Minister Narendra Modi) ಅವರು ಸಹ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ (Kannadiga) ಶುಭಾಶಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಪ್ರಧಾನಿಗಳು ಟ್ವೀಟ್ ಮಾಡಿದ್ದಾರೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

`ಜೇಮ್ಸ್​’ ಚಿತ್ರ ರಿಲೀಸ್​ ಆಗೇ ಆಗುತ್ತೆ ಎಂದು ಅಪ್ಪು ಫ್ಯಾನ್ಸ್ ಗೆ ಭರವಸೆ ಕೊಟ್ಟ ನಿರ್ದೇಶಕ ಚೇತನ್​..!

Mon Nov 1 , 2021
ಪವರ್​ ಸ್ಟಾರ್​ ಅಪ್ಪು ಇನ್ನೂ ನೆನಪು ಮಾತ್ರ. ಕನ್ನಡ ಚಿತ್ರರಂಗದ ಮಗನಂತಿದ್ದ ಅಪ್ಪುನ  ಕಳೆದುಕೊಂಡು, ಇಡೀ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ಪ್ರತಿಯೊಂದು ಮನೆಯಲ್ಲೂ ಸೂತಕದ ವಾತಾವರಣ ಸೃಷ್ಟಿಯಾಗಿದೆ. ಸದಾ ನಗುಮುಖದಿಂದಲೇ ಮಾತನಾಡುತ್ತಿದ್ದ, ಅಪ್ಪು ಅವರ ನಗು ಮುಖವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನ ಪಡೆದ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಎಲ್ಲಾ ಭಾಷೆಯ ನಟ, ನಟಿಯರು ಆಗಮಿಸಿ ಕೊನೆ ಬಾರಿ ಅಪ್ಪು ದರ್ಶನ ಪಡೆಯುತ್ತಿದ್ದಾರೆ. ಸ್ಯಾಂಡಲ್​ವುಡ್​​ನ […]

Advertisement

Wordpress Social Share Plugin powered by Ultimatelysocial