ಕನ್ನಡಿಗನಿಗೆ ನಾಯಕತ್ವ ನೀಡಲು ಮುಂದಾಗಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಕನ್ನಡಿಗನಿಗೆ ನಾಯಕತ್ವ ನೀಡಲು ಮುಂದಾಗಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಬೆಂಗಳೂರು: 2022ರ ಸಾಲಿನ ಐಪಿಎಲ್ ಗೆ ಈಗಾಗಲೇ ತಯಾರಿ ನಡೆಯುತ್ತಿದೆ. ಫೆಬ್ರವರಿ ಮೊದಲ ವಾರ ನಡೆಯಲಿರುವ ಹರಾಜಿಗಾಗಿ ಅನೇಕ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಯಾವ ಆಟಗಾರ ಯಾವ ತಂಡದ ಪಾಲಾಗುತ್ತಾರೆ ಎಂದು ಕಾತರದಿಂದ ಕಾಯುತ್ತಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂದಿನ ಸೀಸನ್‌ನಲ್ಲಿ ಆರ್‌ಸಿಬಿಯ ಮುಂದಿನ ನಾಯಕ ಯಾರಾಗುತ್ತಾರೆ ಎನ್ನುವುದು ಕೂಡಾ ಅಷ್ಟೇ ಕುತೂಹಲಕಾರಿಯಾಗಿದೆ.

ಕಳೆದ ಐಪಿಎಲ್ ಆರಂಭಕ್ಕೂ ಮುನ್ನವೇ ವಿರಾಟ್ ಕೊಹ್ಲಿ ಅವರು ರಾಯಲ್ ಚಾಲೆಂಜರ್ಸ್ ತಂಡದ ನಾಯಕತ್ವಕ್ಕೆ ವಿದಾಯ ಹೇಳಿದ್ದರು. ಸದ್ಯ ವಿರಾಟ್ ತಂಡದ ಆಟಗಾರನಾಗಿ ಮಾತ್ರ ಉಳಿದುಕೊಂಡಿದ್ದಾರೆ. ಹೀಗಾಗಿ ತಂಡಕ್ಕೆ ಹೊಸ ನಾಯಕನನ್ನು ನೇಮಿಸುವ ದೊಡ್ಡ ಸವಾಲು ಫ್ರಾಂಚೈಸಿ ಮುಂದಿದೆ.

ವರದಿಗಳ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕನ್ನಡಿಗ ಮನೀಶ್ ಪಾಂಡೆ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡುತ್ತದೆ ಎನ್ನಲಾಗಿದೆ.

ವಿರಾಟ್ ಕೊಹ್ಲಿಯ ನಾಯಕತ್ವದ ಪರಂಪರೆಯನ್ನು ಯಶಸ್ವಿಯಾಗಿ ಮುಂದುವರಿಸುವ ಯಾರನ್ನಾದರೂ ತಂಡ ಹುಡುಕುತ್ತಿದೆ. ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮತ್ತು ಐಪಿಎಲ್ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಮನೀಷ್ ಪಾಂಡೆ ಐಪಿಎಲ್ 2022 ರಲ್ಲಿ ಆರ್‌ಸಿಬಿ ನಾಯಕತ್ವ ವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಬೆಂಗಳೂರು ಬಾಲಕಿಯ ಆಸೆ ಈಡೇರಿಸಿದ ರಜನಿಕಾಂತ್​

Thu Dec 23 , 2021
ಬೆಂಗಳೂರಿನ ಬಾಲಕಿ ಸೌಮ್ಯಾಗೆ ಬ್ರೇನ್ ಸ್ಟ್ರೋಕ್‌ ಆಗಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಳು ಕೊನೆಯ ದಿನಗಳನ್ನು ಎಣಿಸುತ್ತಿದ್ದಾಳೆ. ಅವಳು ರಜನಿ ಅಭಿಮಾನಿ. ರಜನಿ‌ಕಾಂತ್​ ಅವರನ್ನು ನೋಡಬೇಕು ಎನ್ನುವ ಆಸೆ ಇತ್ತು.‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಕರ್ನಾಟಕದ ಮೂಲದ ಅವರು ತಮಿಳುನಾಡಿಗೆ ತೆರಳಿ ಅಲ್ಲಿ ಸೂಪರ್​ ಹಿಟ್​ ಚಿತ್ರಗಳನ್ನು ನೀಡಿದರು. ವಯಸ್ಸು 70 ದಾಟಿದರೂ ಹದಿಹರೆಯದವರ ಎನರ್ಜಿಯಲ್ಲಿ ಸಿನಿಮಾ ಮಾಡುತ್ತಾರೆ. ಪ್ರತಿ ವರ್ಷ ಅವರ ಜನ್ಮದಿನದಂದು […]

Advertisement

Wordpress Social Share Plugin powered by Ultimatelysocial