ಕಾನೂನು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

Offline Exams For Law Students : ಕಾನೂನು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಕಾನೂನು ಪದವಿ ವಿದ್ಯಾರ್ಥಿಗಳ ತೀವ್ರ ವಿರೋಧದ ನಡುವೆಯೇ ಇಂಟರ್ ಮೀಡಿಯೆಟ್ ಮತ್ತು ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

ಕಾನೂನು ವಿದ್ಯಾರ್ಥಿಗಳ ತೀವ್ರ ವಿರೋಧದ ನಡುವೆಯೂ ಆಫ್‌ಲೈನ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯದ ನಿರ್ಧಾರಕ್ಕೆ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರು ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

ಶೂನ್ಯವೇಳೆಯಲ್ಲಿ ಈ ಕುರಿತು ವಿಷಯ ಪ್ರಸ್ತಾಪನೆ ಮಾಡಿದ ಶಾಸಕ ಅಬ್ಬಯ್ಯ, “ಆಫ್‌ಲೈನ್ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ವಿಶ್ವವಿದ್ಯಾಲಯ ಮತ್ತು ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಳೆದ ಒಂಬತ್ತು ದಿನಗಳಿಂದ ಸಾವಿರಾರು ಕಾನೂನು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಯೊಬ್ಬ ಅಸ್ವಸ್ಥಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದಿದ್ದಾರೆ.

“ಆಫ್‌ಲೈನ್ ಪರೀಕ್ಷೆಗಳನ್ನು ನಡೆಸುವ ಬದಲು ವಿಶ್ವವಿದ್ಯಾಲಯವು ಇಂಟರ್ ಮೀಡಿಯೆಟ್ ವಿದ್ಯಾರ್ಥಿಗಳನ್ನು ಅವರ ಅಸೈನ್ ಮೆಂಟ್ ಅಥವಾ ಆನ್‌ಲೈನ್ ಪರೀಕ್ಷೆಗಳ ಮೂಲಕ ಪಾಸ್ ಮಾಡಬೇಕು. ಬೆಂಗಳೂರು ಮತ್ತು ದೆಹಲಿ ಕಾನೂನು ವಿಶ್ವವಿದ್ಯಾಲಯಗಳು ವರ್ಷದ ಇಂಟರ್ ಮೀಡಿಯೆಟ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಿವೆ. ರಾಜ್ಯ ಸರ್ಕಾರವೂ ಅದನ್ನೇ ಅನುಸರಿಸಿ ವಿದ್ಯಾರ್ಥಿ ಸ್ನೇಹಿ ನಿರ್ಧಾರಗಳನ್ನು ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಶಾಸಕರು ಒತ್ತಾಯಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ವಿಮಾ ವೈದ್ಯಕೀಯ ಅಧಿಕಾರಿಯ 1120 ಹುದ್ದೆಗಳಿಗೆ ಅರ್ಜಿ ಆಹ್ವಾನ

Fri Dec 17 , 2021
15ನೇ ಡಿಸೆಂಬರ್ 2021 ರಂದು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗೆ ವಿವಿಧ ಖಾಲಿ ಹುದ್ದೆಗಳ ಬಗ್ಗೆ ಪ್ರಕಟಣೆ ಹೊರಡಿಸಿದೆ. ESIC IMO ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು 31ನೇ ಡಿಸೆಂಬರ್ 2021 ರಿಂದ ಪ್ರಾರಂಭವಾಗಿ 31ನೇ ಜನವರಿ 2022 ರವರೆಗೆ ಇರಲಿದೆ. ಉದ್ಯೋಗಿಗಳ ರಾಜ್ಯ ವಿಮಾ ನಿಗಮವು (ESIC) 15ನೇ ಡಿಸೆಂಬರ್ 2021 ರಂದು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ವಿಮಾ ವೈದ್ಯಕೀಯ ಅಧಿಕಾರಿ (IMO)ಗಾಗಿ ESIC ನೇಮಕಾತಿ […]

Advertisement

Wordpress Social Share Plugin powered by Ultimatelysocial